ಬೆಂಗಳೂರು: ನಿರಂತರವಾಗಿ ಅಧಿಕಾರಿಗಳ ವರ್ಗಾವಣೆ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮತ್ತೆ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಕಾರ್ಮಿಕ ಇಲಾಖೆ ಆಯುಕ್ತರಾಗಿದ್ದ ಡಾ. ಜಿ.ಸಿ.ಪ್ರಕಾಶ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತ ಮುಂದಿನ ಆದೇಶದವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತೋಟಗಾರಿಕಾ ಇಲಾಖೆ ನಿರ್ದೇಶಕ ಡಾ. ಎಂ.ವಿ ವೆಂಕಟೇಶ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.