ETV Bharat / state

KMF and Amul: ಕೆಎಂಎಫ್ ಮತ್ತು ಅಮುಲ್ ವಿಲೀನ ಪ್ರಸ್ತಾಪ ತಿರಸ್ಕರಿಸಿದ ರಾಜ್ಯ ಸರ್ಕಾರ

ರಾಜ್ಯದ ಕೆಎಂಎಫ್​ ಹಾಗೂ ಗುಜರಾತ್​ನ ಅಮುಲ್​ ವಿಲೀನಕ್ಕೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

Cooperation Minister K. N. Rajanna
ಸಹಕಾರ ಸಚಿವ ಕೆ.ಎನ್.ರಾಜಣ್ಣ
author img

By

Published : Jun 13, 2023, 6:11 PM IST

ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿದ್ದ ಕೆಎಂಎಫ್ ಮತ್ತು ಅಮುಲ್ ವಿಲೀನ ಪ್ರಸ್ತಾಪವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ರಾಜ್ಯದ ರೈತರ ಜೀವನಾಡಿಯಾಗಿರುವ ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳನ್ನು ಪರಸ್ಪರ ವಿಲೀನಗೊಳಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿದ್ದ ಪ್ರಸ್ತಾಪವನ್ನು ಯಾವ ಕಾರಣಕ್ಕೂ ಅನುಷ್ಟಾನಗೊಳಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಹಕಾರ ಸಚಿವ ಕೆ. ಎನ್. ರಾಜಣ್ಣ ಈ ಕುರಿತು ಮಾಹಿತಿ ನೀಡಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳನ್ನು ಪರಸ್ಪರ ವಿಲೀನಗೊಳಿಸುವುದು ಅಸಾಧ್ಯದ ಕೆಲಸ. ಯಾವ ಕಾರಣಕ್ಕೂ ರಾಜ್ಯ ಸರ್ಕಾರ ಈ ವಿಲೀನದ ಪರವಾಗಿಲ್ಲ. ಬದಲಿಗೆ ಕೆಎಂಎಫ್ ಸಂಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿ ರೈತರಿಗೆ ಮತ್ತಷ್ಟು ಶಕ್ತಿ ನೀಡುವುದು ನಮ್ಮ ಉದ್ದೇಶ ಎಂದು ಹೇಳಿದರು. ರೈತರಿಗೆ ಪಾವತಿಸಬೇಕಿರುವ ಹಾಲಿನ ಪ್ರೋತ್ಸಾಹಧನ ಬಾಕಿ ಇದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆದಷ್ಟು ಶೀಘ್ರವಾಗಿ ಈ ಬಾಕಿಯನ್ನು ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲದ ಪ್ರಮಾಣವನ್ನು ಮೂರು ಲಕ್ಷ ರೂಪಾಯಿಗಳಿಂದ ಐದು ಲಕ್ಷ ರೂಪಾಯಿಗೇರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲದ ಪ್ರಮಾಣವನ್ನು ಹೆಚ್ಚಿಸುವ ಕುರಿತು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದನ್ನು ಜಾರಿ ಮಾಡುವ ಬದ್ಧತೆ ನಮಗೆ ಇದೆ ಎಂದರು. ಇದೇ ರೀತಿ ರೈತರಿಗೆ ಮಧ್ಯಮಾವಧಿ ಸಾಲದ ರೂಪದಲ್ಲಿ ಶೇ. 3 ರ ಬಡ್ಡಿ ದರದೊಂದಿಗೆ 10 ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಈ ಪ್ರಮಾಣವನ್ನು ಹತ್ತರಿಂದ ಇಪ್ಪತ್ತು ಲಕ್ಷ ರೂಪಾಯಿಗಳಿಗೆ ಏರಿಸಲಾಗುವುದು ಎಂದು ಹೇಳಿದರು.

ಸಹಕಾರ ಸಂಘಗಳಲ್ಲಿ ನಡೆದಿರುವ ಆಕ್ರಮಗಳ ಬಗ್ಗೆ ತನಿಖೆ ನಡೆಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಹಕಾರ ಇಲಾಖೆಯಲ್ಲಿ ಕೆಲಸ ಮಾಡಲು ನನ್ನನ್ನು ನೇಮಕ ಮಾಡಲಾಗಿದೆ. ಹೀಗಾಗಿ ನನ್ನ ಮುಂದಿರುವ ಕೆಲಸ ಮಾಡುತ್ತೇನೆ. ತನಿಖೆಗಾಗಿ ಹೆಚ್ಚಿನ ಸಮಯ ವ್ಯಯ ಮಾಡುವುದಿಲ್ಲ. ಸಹಕಾರ ಇಲಾಖೆಯಲ್ಲಿ ಅವ್ಯವಹಾರ ನಡೆದಿದ್ದರೆ ಸಹಜವಾಗಿಯೇ ಅದು ಇಲಾಖೆಯ ತನಿಖೆಗೆ ಒಳಪಡುತ್ತದೆ ಎಂದು ಸ್ಪಷ್ಟಪಡಿಸಿದ ಸಚಿವರು, ಈ ದೇಶದಲ್ಲಿ ಉದ್ಯಮಿಗಳಾದ ಅಂಬಾನಿ, ಅದಾನಿ ಸಾಲ ಮನ್ನಾ ಮಾಡಿದರೆ ವಿವಾದವಾಗುವುದಿಲ್ಲ. ಆದರೆ ಸಹಕಾರ ಇಲಾಖೆಯಲ್ಲಿ ಸಣ್ಣ ಪುಟ್ಟ ಅವ್ಯವಹಾರಗಳು ನಡೆದರೆ ದೊಡ್ಡ ಚರ್ಚೆಯಾಗುತ್ತದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ರಾಜ್ಯದ ಕೆಎಂಎಫ್​ ಸಂಸ್ಥೆಯ ಜೊತೆ ಗುಜರಾತ್​ನ ಅಮುಲ್​ ಸಂಸ್ಥೆಯನ್ನು ವಿಲೀನಗೊಳಿಸುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಪ್ರಸ್ತಾಪ ಇಟ್ಟಿದ್ದಾರೆ ಎಂದು ಕಾಂಗ್ರೆಸ್​ ಸೇರಿದಂತೆ ಕೆಲ ರೈತ ಸಂಘಟನೆಯವರು ಆರೋಪ ಮಾಡಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹ್ಯಾಶ್​ಟ್ಯಾಗ್​ ಅಭಿಯಾನಗಳೂ ಕೂಡ ನಡೆದಿದ್ದವು. ಆದ್ರೆ ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು ಈ ಆರೋಪವನ್ನು ತಳ್ಳಿಹಾಕಿದ್ದರು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಆಡಳಿತಕ್ಕೆ ಬಂದಿದ್ದು, ಗುಜರಾತ್​ನ ಅಮುಲ್​ ವಿಲೀನ ಪ್ರಸ್ತಾಪವನ್ನು ತಿರಸ್ಕಾರ ಮಾಡಿದೆ.

ಇದನ್ನೂ ಓದಿ: ಅಮುಲ್ ಮತ್ತು ನಂದಿನಿ ನಡುವೆ ಉತ್ತಮ ಸಂಬಂಧವಿದೆ; ಸ್ಪರ್ಧೆಯ ಪ್ರಶ್ನೆಯೇ ಇಲ್ಲ: ಅಮುಲ್​ ಎಂಡಿ ಜಯನ್​ ಮೆಹ್ತಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.