ಬೆಂಗಳೂರು: ಆಡಳಿತಕ್ಕೆ ಚುರುಕು ನೀಡಲು ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸೋಮವಾರ ಆದೇಶಿಸಿದೆ.
ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅದಾವತ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನೆ ನಿಗ್ರಹ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
ಭಯೋತ್ಪಾದನೆ ನಿಗ್ರಹ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಿ ಆದೇಶಿಸಲಾಗಿದೆ.
ಓದಿ: ಕಾಶ್ಮೀರ ಕಾರಾಗೃಹ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಶವವಾಗಿ ಪತ್ತೆ: ಕೊಲೆ ಶಂಕೆ