ETV Bharat / state

ಕೋವಿಡ್ ಲಸಿಕೆ ತಿಂಗಳ ಕೋಟಾ 1.5 ಕೋಟಿ ಡೋಸ್​ಗೆ ಹೆಚ್ಚಿಸಿ: ಕೇಂದ್ರಕ್ಕೆ ರಾಜ್ಯದ ಮನವಿ

ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾದರು. ಈ ವೇಳೆ ರಾಜ್ಯದ ಕೋವಿಡ್ ಲಸಿಕೆ ಕೊರತೆಯ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತಂದರು.

State Govt appealed to center to increase Covid Vaccine  Monthly Doses
ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಮನವಿ
author img

By

Published : Jul 7, 2021, 8:55 AM IST

ಬೆಂಗಳೂರು : ಕೋವಿಡ್ ಮೂರನೇ ಅಲೆಯ ಬಗ್ಗೆ ತಜ್ಞರು ಈಗಾಗಲೇ ಮುನ್ನೆಚ್ಚರಿಕೆ ನೀಡಿದ್ದಾರೆ. ಹಾಗಾಗಿ, ಮಹಾಮಾರಿಯನ್ನು ಕಟ್ಟಿಹಾಕಲು ಲಸಿಕೆ ಒಂದೇ ಪರಿಹಾರ ಎಂಬ ನಿರ್ಧಾರಕ್ಕೆ ಬಂದಿರುವ ರಾಜ್ಯ ಸರ್ಕಾರ ತಿಂಗಳ ಲಸಿಕೆ ಕೋಟಾವನ್ನು 1.5 ಕೋಟಿ ಡೋಸ್​ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಡಾ. ಸುಧಾಕರ್ ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರನ್ನು ಭೇಟಿ ಮಾಡಿದರು. ಈ ವೇಳೆ ರಾಜ್ಯದ ಕೋವಿಡ್ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡಿದ ಅವರು, ಹೆಚ್ಚುವರಿ ಲಸಿಕೆಯ ಅಗತ್ಯತೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಪ್ರಸ್ತುತ ನೀಡುತ್ತಿರುವ ಸಲಿಕೆ ಪ್ರಮಾಣ ಸಾಲುತ್ತಿಲ್ಲ. ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲರಿಗೂ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಹಾಗಾಗಿ, ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಿದರು. ನಂತರ ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಆಸ್ಪತ್ರೆ ಮೇಲ್ದರ್ಜೆಗೇರಿಸಲು ಅನುದಾನಕ್ಕೆ ಮನವಿ : ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಂಜೂರಾತಿಯಲ್ಲಿ ನಿರ್ಮಿಸುತ್ತಿರುವ ಹೊಸ ಮೆಡಿಕಲ್ ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುತ್ತಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಇನ್ನೂ 250 ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನ ನೀಡಬೇಕು ಎಂದು ಸಚಿವ ಸುಧಾಕರ್​ ಕೇಂದ್ರ ಸಚಿವರನ್ನು ಕೋರಿದರು.

ನಿಮ್ಹಾನ್ಸ್ ಮತ್ತು ಕಿದ್ವಾಯಿ ಸಂಸ್ಥೆಗಳಿಗೆ ಹೊರ ರಾಜ್ಯಗಳಿಂದಲೂ ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳ ಸಂಖ್ಯೆ ಹೆಚ್ಚಾಗಿ ಸಂಸ್ಥೆಗಳ ಮೇಲೆ ಒತ್ತಡ ಬೀಳುತ್ತಿದೆ. ಈ ಎರಡೂ ಸಂಸ್ಥೆಗಳಿಗೆ ನಾಲ್ಕು ಪ್ರಾದೇಶಿಕ ಕೇಂದ್ರ ಆಸ್ಪತ್ರೆಗಳನ್ನು ಆರಂಭಿಸಬೇಕು ಎಂದು ಸಚಿವರು ಇದೇ ವೇಳೆ ಮನವಿ ಮಾಡಿದರು.

ಓದಿ : ಸದನದಲ್ಲಿ ಮೀನುಗಾರರ ಸಮಸ್ಯೆಗೆ ಧ್ವನಿಯಾಗುವೆ: ಕಡಲ ಮಕ್ಕಳಿಗೆ ಡಿಕೆಶಿ ಅಭಯ

ಮೆಡಿಕಲ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸಬೇಕಿದ್ದು, ಈ ಬಗ್ಗೆಯೂ ಯೋಜನೆ ರೂಪಿಸಬೇಕಿದೆ. ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ವಿಜ್ಞಾನಗಳ ಸಂಸ್ಥೆ ಹಾಗೂ ನಸಿಂಗ್ ಸಂಸ್ಥೆ ಆರಂಭಿಸಬೇಕು.

ಕೊರೊನಾ ಹೊಸ ವೈರಾಣು ಪತ್ತೆ ಮಾಡಲು ಜೀನೋಮ್ ಸೀಕ್ವೆನ್ಸ್ ಫಲಿತಾಂಶವನ್ನು ಶೀಘ್ರ ನೀಡಲು ಕ್ರಮ ಕೈಗೊಳ್ಳಬೇಕು. ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಖರೀದಿ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಸಚಿವ ಸುಧಾಕರ್ ಡಾ.ಹರ್ಷವರ್ಧನ್ ಅವರಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.