ETV Bharat / state

ದೇವಾಲಯಗಳಲ್ಲಿ ರೂಢಿ ಸಂಪ್ರದಾಯದಲ್ಲಿ ನಡೆದುಕೊಂಡು ಬಂದಿರುವ ಪದ್ಧತಿ ಅನುಸರಿಸಿ: ಸರ್ಕಾರದ ಸುತ್ತೋಲೆ

ದೇವಾಲಯಗಳಲ್ಲಿ ಸಂಪ್ರದಾಯಗಳು, ಆಚರಣೆಗಳು ಮತ್ತು ಪದ್ಮತಿಗಳನ್ನು ಪಾಲಿಸಲು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಸೆಕ್ಷನ್ 58 ರ ಅಡಿಯಲ್ಲಿ ಉಪಬಂಧವನ್ನು ಸುತ್ತೋಲೆ ಮೂಲಕ ಕಲ್ಪಿಸಲಾಗಿದೆ.

ಸರ್ಕಾರದ ಸುತ್ತೋಲೆ
ಸರ್ಕಾರದ ಸುತ್ತೋಲೆ
author img

By

Published : Nov 10, 2022, 6:23 PM IST

ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿ ಸಂಪ್ರದಾಯದಲ್ಲಿ ನಡೆದುಕೊಂಡು ಬಂದಿರುವ ಪದ್ಧತಿಗಳನ್ನು ಅನುಸರಿಸುವ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನ.2 ರಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡು ಸುತ್ತೋಲೆ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ಸಂಸ್ಥೆಗಳಲ್ಲಿ ಸೂಕ್ತ ಸಂಪ್ರದಾಯಗಳು, ಆಚರಣೆಗಳು ಮತ್ತು ಪದ್ಮತಿಗಳನ್ನು ಪಾಲಿಸಲು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಸೆಕ್ಷನ್ 58 ರ ಅಡಿಯಲ್ಲಿ ಈ ಕೆಳಕಂಡಂತೆ ಉಪಬಂಧವನ್ನು ಸುತ್ತೋಲೆ ಮೂಲಕ ಕಲ್ಪಿಸಲಾಗಿದೆ.

ಸರ್ಕಾರದ ಸುತ್ತೋಲೆ
ಸರ್ಕಾರದ ಸುತ್ತೋಲೆ

ಇತ್ತೀಚಿನ ದಿನಗಳಲ್ಲಿ ದೇವಾಲಯದಲ್ಲಿ ನಡೆದು ಬಂದಿರುವ ಪದ್ಧತಿಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆಗಳನ್ನು ನಡೆಸುವುದು, ನಾಮಫಲಕ, ಫೋಟೋ ಇತ್ಯಾದಿಗಳನ್ನು ಅಳವಡಿಸುತ್ತಿರುವ ಬಗ್ಗೆ ಆಕ್ಷೇಪಗಳು/ದೂರುಗಳು ಬಂದಿರುತ್ತವೆ. ಈ ಹಿನ್ನೆಲೆ ನ.2 ರಂದು ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ವಿಚಾರವು ಪ್ರಸ್ತಾಪವಾಗಿದೆ. ಹಾಗಾಗಿ ಆಯಾಯ ದೇವಾಲಯದಲ್ಲಿ ಆಚರಿಸಲಾಗುತ್ತಿರುವ ಹಾಗೂ ಚಾಲ್ತಿಯಲ್ಲಿರುವ ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ ನಡೆಸಬಾರದು.

ಸರ್ಕಾರದ ಸುತ್ತೋಲೆ
ಸರ್ಕಾರದ ಸುತ್ತೋಲೆ

ಪ್ರಕಟಣೆಯಲ್ಲಿ ಏನಿದೆ?: ಮುದ್ರಾಧಾರಣೆ ಮಾಡುತ್ತಿರುವುದು, ಜಯಂತಿಗಳನ್ನು ಆಚರಿಸುವುದು, ಭಾವಚಿತ್ರಗಳನ್ನು ಆಳವಡಿಸುತ್ತಿರುವುದನ್ನು ತೀವ್ರವಾಗಿ ಆಕ್ಷೇಪಿಸಲಾಗಿದೆ ಇನ್ನು ಮುಂದೆ ಆಯಾಯ ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಧಾರ್ಮಿಕ ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಪದ್ಧತಿ, ಸಂಪ್ರದಾಯಗಳನ್ನು ಅನುಸರಿಸುವುದು, ಭಾವಚಿತ್ರ, ವಿಗ್ರಹಗಳನ್ನು ಅಳವಡಿಸುವುದು, ಮುದ್ರಾಧಾರಣೆ ಮಾಡುವುದು, ಜಯಂತಿಗಳನ್ನು ಆಚರಿಸುವುದನ್ನು ನಡೆಸದಂತೆ ಹಾಗೂ ಇದಕ್ಕೆ ವಿರುದ್ಧವಾಗಿ ಈಗಾಗಲೇ ನಡೆಸಲಾಗಿರುವ ಭಾವಚಿತ್ರ ಬೋರ್ಡ್‌ಗಳನ್ನು ತೆರವುಗೊಳಿಸಲು ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಲಾಗಿದೆ.

ಇದನ್ನೂ ಓದಿ: ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.