ETV Bharat / state

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾರ್ಗಸೂಚಿ ತಿದ್ದುಪಡಿ ಮಾಡಿದ ಆದೇಶ ಪ್ರಕಟ - Police Officers Transfer Guidelines

ರಾಜ್ಯ ಪೊಲೀಸ್ ಅಧಿಕಾರಿಗಳ ವರ್ಗಾವಣೆಯ ಮಾರ್ಗಸೂಚಿ ತಿದ್ದುಪಡಿಗೆ ಅಸ್ತು ಎಂದಿರುವ ರಾಜ್ಯ ಸರ್ಕಾರ, ಮುಂಬಡ್ತಿ ಹೊಂದಿದ ಅಧಿಕಾರಿಗಳು ಇನ್ನು ಮುಂದೆ ಕನಿಷ್ಠ 2 ವರ್ಷ ಕಾರ್ಯಕಾರಿ ಹುದ್ದೆಯಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು ಎಂದಿದೆ.

Vidhana Soudha
ವಿಧಾನಸೌಧ (ಸಂಗ್ರಹ ಚಿತ್ರ)
author img

By

Published : May 16, 2020, 8:06 PM IST

ಬೆಂಗಳೂರು: ರಾಜ್ಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾರ್ಗಸೂಚಿ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್‌ ಇಲಾಖೆಯ ಸಿವಿಲ್ (ನಾಗರಿಕ) ಸೇವೆಯಲ್ಲಿ ಮುಂಬಡ್ತಿ ಹೊಂದಿದ ಅಧಿಕಾರಿಗಳು ಇನ್ನು ಮುಂದೆ 2 ವರ್ಷ ಕಾರ್ಯಕಾರಿ ಹುದ್ದೆಯಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಿವೈಎಸ್‌ಪಿ ಮತ್ತು ಪೊಲೀಸ್‌ ಇನ್ಸ್​ಪೆಕ್ಟರ್​ ವರ್ಗಾವಣೆಗೆ ಸಂಬಂಧಿಸಿದ ಮಾರ್ಗಸೂಚಿಯಲ್ಲಿ ಈ ತಿದ್ದುಪಡಿ ಮಾಡಲಾಗಿದ್ದು, ಡಿವೈಎಸ್‌ಪಿ ಮತ್ತು ಪಿಐ ಹುದ್ದೆಗೆ ಬಡ್ತಿ ಹೊಂದಿದ ನಂತರ ಕಾರ್ಯಕಾರಿ ಹುದ್ದೆಯಲ್ಲಿ ಕನಿಷ್ಠ 2 ವರ್ಷ ಕಡ್ಡಾಯವಾಗಿ ಕೆಲಸ ಮಾಡಬೇಕು.

ಡಿವೈಎಸ್‌ಪಿ/ಎಸಿಪಿ ಮತ್ತು ಪಿಐ ಹುದ್ದೆಯಲ್ಲಿರುವವರು ಪೊಲೀಸ್‌ ಕಮಿಷನರೇಟ್​​ನಲ್ಲಿ ಕನಿಷ್ಠ 5 ವರ್ಷ ಮಾತ್ರ ಕಾರ್ಯಕಾರಿ ಹುದ್ದೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. 5 ವರ್ಷ ಪೂರ್ಣಗೊಳಿಸಿದವರು ಆಯಾ ಕಮಿಷನರೇಟ್ ವ್ಯಾಪ್ತಿಯಿಂದ ಹೊರಗಿನ ಘಟಕದಲ್ಲಿ 5 ವರ್ಷ ಕಡ್ಡಾಯವಾಗಿ ಕೆಲಸ ಮಾಡಬೇಕು. ಬಳಿಕವಷ್ಟೆ ಆಯಾ ಕಮಿಷನರೇಟ್‌ನಲ್ಲಿ ಕೆಲಸ ಮಾಡಲು ಅರ್ಹತೆ ಗಳಿಸಲಿದ್ದಾರೆ ಎಂದು ಆದೇಶದಲ್ಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.