ETV Bharat / state

ಸರ್ಕಾರಕ್ಕೆ ನೂರು ದಿನದ ಸಂಭ್ರಮ: ಪಂಚ ಗ್ಯಾರಂಟಿಗಳ ಅನುಷ್ಠಾನದ ಜೊತೆ ಪಂಚ ಹಗರಣಗಳ ತನಿಖೆಗೆ ಸಮಿತಿ ರಚಿಸಿ ಬಿಜೆಪಿಗೆ ಟಕ್ಕರ್ - PSI Recruitment Scam

ರಾಜ್ಯ ಕಾಂಗ್ರೆಸ್​ ಸರ್ಕಾರ ನೂರು ದಿನಗಳನ್ನು ಪೂರೈಸಿದ್ದು, ಈ ಸಂಬಂಧ ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಪಿಎಸ್​ಐ ಹಗರಣ, 40 ಪರ್ಸೆಂಟ್​ ಕಮಿಷನ್​, ಬಿಟ್​ ಕಾಯಿನ್​ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳ ತನಿಖೆಗೆ ಸರ್ಕಾರ ಮುಂದಾಗಿದೆ.

state-govt-initiated-investigation-of-cases-of-took-place-during-bjp-govt
ಡಿಸಿಎಂ ಡಿಕೆ ಶಿವಕುಮಾರ್​ ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Aug 26, 2023, 5:52 PM IST

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳ ತುಂಬುತ್ತಿದ್ದು, ಈ ಸಮಯದಲ್ಲಿ ಹಿಂದಿನ ಸರ್ಕಾರದ ಹಗರಣಗಳ ಆರೋಪಗಳ ಕುರಿತು ತನಿಖಾಸ್ತ್ರ ಪ್ರಯೋಗಕ್ಕೆ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಸದ್ಯ ಎರಡು ಪ್ರಕರಣಗಳಿಗೆ ವಿಚಾರಣಾ ಆಯೋಗ ರಚನೆ ಮಾಡಿದ್ದು, ಎರಡು ಕೇಸ್​​ಗಳಿಗೆ ವಿಶೇಷ ತನಿಖಾ ದಳ ರಚಿಸಿದೆ. ಸದ್ಯದಲ್ಲೇ ಮತ್ತೊಂದು ಪ್ರಕರಣದಲ್ಲಿಯೂ ತನಿಖಾ ಆಯೋಗದ ಆದೇಶ ಹೊರಬೀಳಲಿದೆ.

ಪಿಎಸ್ಐ ನೇಮಕಾತಿ ಹಗರಣ ತನಿಖೆ : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಸದ್ದು ಮಾಡಿದ್ದ ಪ್ರಮುಖ ಹಗರಣದಲ್ಲಿ ಪಿಎಸ್ಐ ನೇಮಕಾತಿ ಹಗರಣವೂ ಒಂದಾಗಿದೆ. ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ತನಿಖೆ ನಡೆಸಿದ್ದರೂ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪ್ರತಿಪಕ್ಷವಾಗಿದ್ದಾಗ ನ್ಯಾಯಾಂಗ ತನಿಖೆಯ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ, ಇದೀಗ ಮುಖ್ಯಮಂತ್ರಿಯಾಗುತ್ತಿದ್ದಂತೆ ತಮ್ಮ ಬೇಡಿಕೆ ಈಡೇರಿಸಿಕೊಂಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ವಿಚಾರಣಾ ಆಯೋಗ ರಚಿಸಲು ಜುಲೈ 21 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿತ್ತು. ಮೂರು ತಿಂಗಳಿನಲ್ಲಿ ವರದಿ ನೀಡುವಂತೆ ಸರ್ಕಾರ ಆಯೋಗಕ್ಕೆ ಸೂಚಿಸಿದೆ.

2021ರ ಅಕ್ಟೋಬರ್​ನಲ್ಲಿ ರಾಜ್ಯದ 92 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ನಂತರ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆ 52 ಮಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ಹಲವರನ್ನು ಬಂಧಿಸಿ ತನಿಖೆ ನಡೆಸಿದ್ದು, ಇದೀಗ ಸಿಐಡಿ ತಂಡ ಮತ್ತು ಪೊಲೀಸ್ ನೇಮಕಾತಿ ವಿಭಾಗ ಸಮಗ್ರ ಮಾಹಿತಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಿದೆ.

40 ಪರ್ಸೆಂಟ್​ ಕಮಿಷನ್​ ಪ್ರಕರಣ ತನಿಖೆ : ಬಿಜೆಪಿ ಸರ್ಕಾರದ ವೇಳೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆದ ಆರೋಪ ಪ್ರಕರಣವನ್ನೂ ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮಾಡಿದ್ದ ಕಮಿಷನ್ ಆರೋಪದ ತನಿಖೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ಆಗಸ್ಟ್ 17ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಮಿಷನ್ ಆರೋಪ ಸಂಬಂಧ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಬೇಕು. ಪ್ರಕರಣ ಸಂಬಂಧ ಸಂಪೂರ್ಣ ವರದಿಯನ್ನು ಒಂದು ತಿಂಗಳಲ್ಲಿ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ರಾಜ್ಯ ಗುತ್ತಿಗೆದಾರರ ಸಂಘವು, ಎಲ್ಲ ಸಾರ್ವಜನಿಕ ಯೋಜನೆಗಳಲ್ಲಿ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂಗೆ ಪತ್ರ ಬರೆದಿತ್ತು. ಇದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರವೂ ಬಿಜೆಪಿಯನ್ನು ಕಮಿಷನ್​ ಆರೋಪ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿತ್ತು. ಇದಕ್ಕೆ ಕೆ ಎಸ್​ ಈಶ್ವರಪ್ಪ ಅವರ ತಲೆದಂಡವೂ ಆಗಿತ್ತು. ಈ ಗಂಭೀರ ಆರೋಪಗಳ ಬಗ್ಗೆ ಹಿಂದಿನ ಸರ್ಕಾರದ ಮಟ್ಟದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವ ಪ್ರಸ್ತಾಪದೊಂದಿಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

ಕೋವಿಡ್​ ಸಂದರ್ಭದಲ್ಲಿ ವೈದ್ಯಕೀಯ ಸಲಕರಣೆ ಖರೀದಿ ಅಕ್ರಮ : ಎರಡು ಪ್ರಕರಣಗಳ ನ್ಯಾಯಾಂಗ ತನಿಖೆಯ ಬೆನ್ನಲ್ಲೇ ಮತ್ತೊಂದು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ. ಕೋವಿಡ್ ಸಮಯದಲ್ಲಿ ನಡೆದ ಸಾಮಗ್ರಿ ಖರೀದಿ, ಔಷಧಿ ಖರೀದಿ, ಪಿಪಿಇ ಕಿಟ್, ಸ್ಯಾನಿಟೈಸೆರ್, ವೆಂಟಿಲೇಟರ್, ಆಂಪೋಟರಿಸಿಯನ್, ಕೋವಿಡ್ ಲಸಿಕೆ, ವೈದ್ಯಕೀಯ ಸಲಕರಣೆ, ಉಪಕರಣಗಳ ಖರೀದಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾವೇದ್ ರಹೀಂ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ಮುಂದಾಗಿತ್ತು. ಆದರೆ ನ್ಯಾ.ಜಾವೇದ್ ರಹೀಂ ತನಿಖೆಯ ನೇತೃತ್ವ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಮತ್ತೋರ್ವ ನಿವೃತ್ತ ನ್ಯಾಯಮೂರ್ತಿಗಳಿಂದ ಸರ್ಕಾರ ತನಿಖೆಗೆ ಮುಂದಾಗಿದೆ. ಮೂಲಗಳ ಪ್ರಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಜಾನ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಕೋವಿಡ್ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ 2 ಸಾವಿರ ಕೋಟಿ ರೂ.ಗಳ ಅಕ್ರಮ ನಡೆದಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಕಾಂಗ್ರೆಸ್ ಹಿಂದಿನ ಬಿಜೆಪಿ ಸರ್ಕಾರಕ್ಕೆ ಬೇಡಿಕೆ ಇಟ್ಟಿತ್ತು. ಆದರೆ ಅಕ್ರಮ ಆರೋಪವನ್ನು ಬಿಜೆಪಿ ಸರ್ಕಾರ ತಳ್ಳಿಹಾಕಿತ್ತು. ಆದರೆ ಅಕ್ರಮದ ಆರೋಪ ಸಾಧ್ಯತೆಯನ್ನು ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ವರದಿ ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಇದರ ಆಧಾರದಲ್ಲಿ ಸರ್ಕಾರ ತನಿಖೆಗೆ ಮುಂದಾಗಿದೆ.

ಬಿಟ್ ಕಾಯಿನ್​ ಪ್ರಕರಣ ತನಿಖೆ : ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಬೆಳಕಿಗೆ ಬಂದಿದ್ದ ಬಿಟ್ ಕಾಯಿನ್ ಪ್ರಕರಣದ ವಿಚಾರದಲ್ಲಿಯೂ ಹಿಂದಿನ ಸರ್ಕಾರದ ತನಿಖೆಯ ಬದಲು ವಿಶೇಷ ತನಿಖಾ ದಳದಿಂದ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ಎಸ್ಐಟಿಯನ್ನು ರಚಿಸಿ ಆದೇಶವನ್ನೂ ಹೊರಡಿಸಿದ್ದು, ತನಿಖೆ ಇನ್ನಷ್ಟೇ ಆರಂಭಗೊಳ್ಳಬೇಕಿದೆ.

ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ವಿಚಾರದಲ್ಲಿಯೂ ಕಾಂಗ್ರೆಸ್ ಸರ್ಕಾರ ಬಿಜೆಪಿಗೆ ಶಾಕ್ ನೀಡಿದೆ. ಕಳೆದ ನಾಲ್ಕು ವರ್ಷಗಳ ಕಾಲ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಯೋಜನೆಗಳು, ಕಾರ್ಯಕ್ರಮಗಳ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ದೂರಿನ ಸಂಬಂಧ ವಿಸ್ತೃತ ತನಿಖೆ ನಡೆಸಲು ಐಎಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ಸಮಿತಿಗಳನ್ನು ರಚಿಸಲಾಗಿದೆ. ಈ ಬಗ್ಗೆ ಆಗಸ್ಟ್ 7ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕಾಮಗಾರಿಗಳ ಬಾಕಿ ಬಿಲ್ ಪಾವತಿ ವಿಳಂಬವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಿದೆ.

ಸದ್ಯ ಈ ಐದು ಪ್ರಕರಣಗಳಲ್ಲಿ ತನಿಖಾಸ್ತ್ರ ಪ್ರಯೋಗವನ್ನು ಅಧಿಕಾರಕ್ಕೆ ಬಂದ ಕೇವಲ 100 ದಿನಗಳ ಒಳಗಡೆಯೇ ಕಾಂಗ್ರೆಸ್ ಸರ್ಕಾರ ಮಾಡಿದೆ. ಈ ಮೂಲಕ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದೆ.

ಇದನ್ನೂ ಓದಿ : ಸಿದ್ದರಾಮಯ್ಯ ಸರ್ಕಾರಕ್ಕೆ ಶತದಿನದ ಸಂಭ್ರಮ.. ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತದಲ್ಲಿ ಕರ್ನಾಟಕ ಮಾದರಿ ಮಂತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.