ETV Bharat / state

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಸಣ್ಣ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಸರ್ಕಾರದ ಯೋಜನೆಗಳೇನು?

author img

By

Published : Oct 9, 2021, 6:33 PM IST

ಕೇಂದ್ರ ಸರ್ಕಾರ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಗರಿಷ್ಠ 25 ರೂ.ಗಳವರೆಗೆ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ಒದಗಿಸಿ ಸಣ್ಣ ಉದ್ಯಮಗಳನ್ನು ಸ್ಥಾಪಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಒದಗಿಸಲಾಗಿದೆ. ಯೋಜನಾ ವೆಚ್ಚದ ಮೇಲೆ ಶೇ.15 ರಿಂದ ಶೇ.35ರವರೆಗೆ ಗರಿಷ್ಠ 3.75 ಲಕ್ಷ ರೂ.ದಿಂದ 8.75 ಲಕ್ಷ ರೂ.ಗಳವರೆಗೆ ಸಹಾಯಧನ ನೀಡಲಾಗುತ್ತಿದೆ..

Vidhana soudha
ವಿಧಾನಸೌಧ

ಬೆಂಗಳೂರು : ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಸಣ್ಣ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಪ್ರಾರಂಭಿಸಲು ಸಣ್ಣ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹೊಸ ಕೈಗಾರಿಕಾ ನೀತಿ 2020-25ರ ಅನ್ವಯ ಪ್ರೋತ್ಸಾಹದ ಜತೆಗೆ ಕೆಲವು ರಿಯಾಯಿತಿಗಳನ್ನು ನೀಡಿದೆ.

ಮುದ್ರಾಂಕ ಶುಲ್ಕ ವಿನಾಯಿತಿ, ನೋಂದಣಿ ಶುಲ್ಕ ರಿಯಾಯಿತಿ, ಬಂಡವಾಳ ಹೂಡಿಕೆಗೆ ಸಹಾಯಧನ, ಕಿರು ಮತ್ತು ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್‌ ಸಹಾಯಧನ, ವಿದ್ಯುತ್ ತೆರಿಗೆ ವಿನಾಯಿತಿ, ಭೂ ಪರಿವರ್ತನಾ ಶುಲ್ಕ ಮರುಪಾವತಿ, ರಫ್ತು ಆಧಾರಿತ ಘಟಕಗಳಿಗೆ ರಿಯಾಯಿತಿ, ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಹಾಯಧನ, ತಾಂತ್ರಿಕ ಉನ್ನತೀಕರಣ, ಗುಣಮಟ್ಟ ಪ್ರಮಾಣ ಪತ್ರ ಸಹಾಯಧನ ಹಾಗೂ ಮಳೆ ನೀರು ಕೊಯ್ಲು/ಸಂರಕ್ಷಣೆ ಸಹಾಯಧನ ನೀಡಲು ಉದ್ದೇಶಿಸಲಾಗಿದೆ.

ಕೈಗಾರಿಕಾ ನೀತಿ 2020-25ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆ/ ತಾಲೂಕುಗಳನ್ನು ವಲಯ 1ರ ಅಡಿ ವರ್ಗೀಕರಿಸಲಾಗಿದೆ. (ವಲಯ-1ರಡಿಯಲ್ಲಿ ಕೈಗಾರಿಕಾಭಿವೃದ್ಧಿಯಲ್ಲಿ ಅತಿ ಹೆಚ್ಚು ಹಿಂದುಳಿದ ತಾಲೂಕುಗಳನ್ನು ಸೇರಿಸಲಾಗಿದೆ) ಈ ತಾಲೂಕುಗಳಿಗೆ ಹೆಚ್ಚುವರಿಯಾಗಿ ಶೇ.5ರಷ್ಟು ಬಂಡವಾಳ ಹೂಡಿಕೆ ಸಹಾಯಧನ ಸೇರಿ ಹೆಚ್ಚಿನ ಪ್ರೋತ್ಸಾಹ ಮತ್ತು ರಿಯಾಯಿತಿಗಳನ್ನು ನೀಡಲಾಗುತ್ತಿದೆ.

ಯೋಜನಾ ವೆಚ್ಚದ ಮೇಲೆ ಸಹಾಯಧನ : ಕೇಂದ್ರ ಸರ್ಕಾರ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಗರಿಷ್ಠ 25 ರೂ.ಗಳವರೆಗೆ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ಒದಗಿಸಿ ಸಣ್ಣ ಉದ್ಯಮಗಳನ್ನು ಸ್ಥಾಪಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಒದಗಿಸಲಾಗಿದೆ. ಯೋಜನಾ ವೆಚ್ಚದ ಮೇಲೆ ಶೇ.15 ರಿಂದ ಶೇ.35ರವರೆಗೆ ಗರಿಷ್ಠ 3.75 ಲಕ್ಷ ರೂ.ದಿಂದ 8.75 ಲಕ್ಷ ರೂ.ಗಳವರೆಗೆ ಸಹಾಯಧನ ನೀಡಲಾಗುತ್ತಿದೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳನ್ನ ಸ್ಥಾಪಿಸಲು 5 ಕೋಟಿ ರೂ.ಗಳವರೆಗೆ ಸಾಲ ಪಡೆದು ನಿಗದಿತ ಸಮಯದಲ್ಲಿ ಮರುಪಾವತಿ ಮಾಡಿದ ಅತಿ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ 5 ವರ್ಷಗಳ ಅವಧಿಗೆ ಶೇ.6ರಂತೆ ಬಡ್ಡಿ ಸಹಾಯಧನ ನೀಡಲಾಗುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಶೀಲರಿಗೆ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಶೇ.75ರಷ್ಟು ರಿಯಾಯಿತಿ ದರದಲ್ಲಿ ಕೈಗಾರಿಕಾ ನಿವೇಶನಗಳನ್ನು ಮತ್ತು ಕೈಗಾರಿಕಾ ಶೆಡ್‌ಗಳನ್ನು ನೀಡಲಾಗುತ್ತಿದೆ. ಅದೇ ರೀತಿ ಪರಿಶಿಷ್ಟ ಜಾತಿಯ ಮತ್ತು ಪಂಗಡದ ಉದ್ಯಮಶೀಲರಿಗೆ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕಿನಿಂದ ಸಾಲ ಒದಗಿಸಿ ಯೋಜನಾ ವೆಚ್ಚದ ಮೇಲೆ ಶೇ.60ರಷ್ಟು ಗರಿಷ್ಠ 5 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ.

ರಾಯಚೂರು ಜಿಲ್ಲೆಯಲ್ಲಿ ಪ್ರಸ್ತುತ ಕೆಐಎಡಿಬಿ ಹಾಗೂ ಕೆಎಸ್‌ಎಸ್‌ಐಡಿಸಿ ಅವರಿಂದ ನಿರ್ಮಿಸಿದ ಎಲ್ಲಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ಲಿಂಗಸುಗೂರು ತಾಲೂಕಿನಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗಾಗಿ ಡಿಮಾಂಡ್ ಸರ್ವೆಯನ್ನು ನಡೆಸಿ ಲಿಂಗಸುಗೂರು ತಾಲೂಕಿನಲ್ಲಿ ಒಟ್ಟು 132 ಕೈಗಾರಿಕೋದ್ಯಮಿಗಳು ವಿವಿಧ ಚಟುವಟಿಕೆ ಸ್ಥಾಪನೆಗಾಗಿ ಅರ್ಜಿ ಸಲ್ಲಿಸಿದ್ದು, ಇದಕ್ಕಾಗಿ 24.69 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವ ಸಲುವಾಗಿ ಕಳೆದ ವರ್ಷ ಜೂನ್​​​ನಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ನಿರ್ಣಯಿಸಿ ಕೆಐಎಡಿಬಿಗೆ ಶಿಫಾರಸು ಮಾಡಲಾಗಿದೆ.

ಅದೇ ರೀತಿ ಮಾನ್ವಿ ತಾಲೂಕಿನಲ್ಲಿ ಕೈಗಾರಿಕಾ ನಿವೇಶನಕ್ಕಾಗಿ ಒಟ್ಟು 148 ಅರ್ಜಿಗಳು ಸ್ವೀಕೃತವಾಗಿವೆ. 62.50 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಕೆಐಎಡಿಬಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಯಚೂರು ತಾಲೂಕಿನ ಚಂದ್ರಬಂಡಾ ಮತ್ತು ಸಿಂಗನೋಡಿ ಗ್ರಾಮಗಳ ವಿವಿಧ ಸರ್ವೆ ನಂಬರ್‌ಗಳಲ್ಲಿ ಒಟ್ಟು 690.13 ಎಕರೆ ಜಮೀನನ್ನು ಗುರುತಿಸಿ ಭೂಸ್ವಾಧೀನಪಡಿಸಿಕೊಳ್ಳಲು ಕೆಐಎಡಿಬಿಗೆ ಶಿಫಾರಸು ಮಾಡಲಾಗಿದೆ.

ಸಣ್ಣ ಕೈಗಾರಿಕೆಗಳಿಗೆ 2014-19 ಹಾಗೂ 2020-25ರ ಕೈಗಾರಿಕಾ ನೀತಿಯ ಪ್ರಕಾರ ಎಲ್ಲಾ ಪ್ರೋತ್ಸಾಹ ಮತ್ತು ರಿಯಾಯಿತಿಗಳನ್ನು ನೀಡಲಾಗುತ್ತದೆ. ಆಯಾ ಕೈಗಾರಿಕಾ ಪ್ರದೇಶ/ ಕೈಗಾರಿಕಾ ವಸಾಹತುವಿನಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಕೆಐಎಡಿಬಿ/ಕೆಎಸ್‌ಎಸ್‌ಐಡಿಸಿ ಇವರಿಂದ ಒದಗಿಸಿ ಕೊಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳು ಕೋಟ್ಯಧಿಪತಿಗಳು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.