ETV Bharat / state

ರಾಜ್ಯ ಸರ್ಕಾರ ಯಾವುದೇ ಕೆಲಸವನ್ನು ಕಾನೂನು ಪ್ರಕಾರ ಮಾಡಲ್ಲ: ಡಿಕೆಶಿ - election update

ನಮಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಆದೇಶ ವಜಾ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

state-govt-not-doing-any-work-according-to-law-dk-shivakumar
ರಾಜ್ಯ ಸರ್ಕಾರ ಯಾವುದೇ ಕೆಲಸವನ್ನು ಕಾನೂನು ಪ್ರಕಾರ ಮಾಡಲ್ಲ: ಡಿಕೆಶಿ
author img

By

Published : Apr 2, 2023, 6:46 PM IST

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾಡಿರುವ ಮೀಸಲಾತಿ ಹೆಚ್ಚಳ ಕಾನೂನು ಸಂವಿಧಾನದ 9ನೇ ಶೆಡ್ಯೂಲ್​ಗೆ ಸೇರಿಸಿಲ್ಲ. ಇವರು ಯಾವುದನ್ನು ಕಾನೂನು ಪ್ರಕಾರ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗುವುದು ಎಂದು ಚುನಾವಣೆ ಸಮಯದಲ್ಲಿ ಭರವಸೆ ನೀಡಿದ್ದರು. ಆದರೆ ಮಾಡಲಿಲ್ಲ. ಈ ಕಾರಣಕ್ಕೆ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿಯಲ್ಲಿ ನ್ಯಾಯ ಸಿಗುವುದಿಲ್ಲ ಎಂದು ಮತ್ತೆ ನಮ್ಮ ಪಕ್ಷಕ್ಕೆ ಮರಳಿದ್ದಾರೆ.

ನಮಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು-ಡಿಕೆಶಿ ಇನ್ನು ಒಕ್ಕಲಿಗರು ಹಾಗೂ ಲಿಂಗಾಯತರು ಕೂಡ ಕ್ರಮವಾಗಿ ಶೇ.12 ಹಾಗೂ ಶೇ.15ರಷ್ಟು ಮೀಸಲಾತಿ ಹೆಚ್ಚಳಕ್ಕೆ ಆಗ್ರಹ ಮಾಡಿದ್ದು, ಕೇವಲ ಶೇ.2ರಷ್ಟು ನೀಡುವುದಾಗಿ ಸರ್ಕಾರ ಹೇಳಿದೆ. ಅಲ್ಪಸಂಖ್ಯಾತರ ಮೀಸಲಾತಿ ಕಿತ್ತು ಬೇರೆಯವರಿಗೆ ಕೊಟ್ಟಿದ್ದಾರೆ. ಶೇ.2ರಷ್ಟು ಮೀಸಲಾತಿ ಹೆಚ್ಚಳ ನಾವು ಒಪ್ಪುವುದಿಲ್ಲ. ನಮಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಆದೇಶ ವಜಾ ಮಾಡಲಿದೆ ಎಂದು ಡಿಕೆಶಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಜನ ಗಲಾಟೆ ಮಾಡುತ್ತಿದ್ದಾರೆ ಎಂದರೆ ಸರ್ಕಾರದ ಈ ನಿರ್ಧಾರ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದರ್ಥ. ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿರುವ ಎಲ್ಲಾ ನಿರ್ಧಾರಗಳು ಜನರನ್ನು ಮೂರ್ಖರನ್ನಾಗಿಸುವ ಕ್ರಮ. ಇದರ ಪರಿಣಾಮ ಮುಂದಿನ ಚುನಾವಣೆಯಲ್ಲಿ ತಿಳಿಯಲಿದೆ. ಜನ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಈ ಸರ್ಕಾರದ ತಪ್ಪುಗಳನ್ನು ನಮ್ಮ ಸರ್ಕಾರ ಸರಿಪಡಿಸಿ, ಎಲ್ಲರಿಗೂ ನ್ಯಾಯ ಒದಗಿಸಲಿದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಬೆದರಿಕೆ ತಂತ್ರ ನಡೆಯುವುದಿಲ್ಲ: 2ನೇ ಅಭ್ಯರ್ಥಿ ಪಟ್ಟಿ ಬಗ್ಗೆ ಮಾತನಾಡಿದ ಅವರು, 'ಏಪ್ರಿಲ್ 4ರಂದು ಸಿಇಸಿ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ಮಾಡಲಿದ್ದಾರೆ' ಎಂದು ತಿಳಿಸಿದರು. ಗೊಂದಲ, ಸಾಮೂಹಿಕ ರಾಜೀನಾಮೆ ಕೊಡುವ ಬಗ್ಗೆ ಕೇಳಿದಾಗ, 'ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಯಾವುದೇ ಗೊಂದಲ ಇಲ್ಲ. ಬೇರೆ ಪಕ್ಷಗಳಲ್ಲಿ ಬೆದರಿಕೆ ತಂತ್ರ ನಡೆಯಬಹುದು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುವುದಿಲ್ಲ. ಬಿಜೆಪಿಯಲ್ಲಿ ಬೆದರಿಕೆ ಇಲ್ಲವೇ? ಅವರು ಪಟ್ಟಿ ಪ್ರಕಟಿಸದಿರುವುದೇಕೆ? ದಿನಾಂಕ ಮುಂದೂಡುತ್ತಿರುವುದೇಕೆ? ಅವರ ಪಕ್ಷದಲ್ಲಿ ಆಂತರಿಕ ಸಮಸ್ಯೆ ಇದೆ ಎಂದು ಹೇಳಿದರು.

ಸಚಿವ ಮುನಿರತ್ನ ಅವರ ಹೊಡೀರಿ ಬಡೀರಿ ಹೇಳಿಕೆ ಬಗ್ಗೆ ಕೇಳಿದಾಗ, 'ಕಾಂಗ್ರೆಸ್ ಪಕ್ಷದಿಂದ ಯಾರೇ ಮತ ಕೇಳಲು ಬಂದರೂ ಹೊಡೆದು ಓಡಿಸಿ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಸದರು ದೂರು ನೀಡಿದ್ದು, ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ನೋಡೋಣ' ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಬೇಕು ಎಂದು ಸುರ್ಜೇವಾಲಾ ಅವರ ಭಾಷಣಕ್ಕೆ ಅಡ್ಡಿ ಮಾಡಿದ ಬಗ್ಗೆ ಹಾಗೂ ಸಿದ್ದರಾಮಯ್ಯ ಅವರು 2 ಕಡೆ ಸ್ಪರ್ಧೆಗೆ ಟಿಕೆಟ್ ಕೇಳಿರುವ ಬಗ್ಗೆ ಪ್ರಶ್ನಿಸಿದಾಗ, 'ಕೇಳುವವರನ್ನು ಬೇಡ ಎನ್ನಲು ಸಾಧ್ಯವೇ? ನೀವು ಕೂಡ ಕೇಳಬಹುದು. ಅಭಿಮಾನಿಗಳು ಬಹಳ ಆಸೆಯಿಂದ ಕೇಳುತ್ತಾರೆ. ಅದರಲ್ಲಿ ತಪ್ಪಿಲ್ಲ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ' ಎಂದು ತಿಳಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆಗೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ : ವಿದೇಶಾಂಗ ಸಚಿವ ಜೈಶಂಕರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.