ETV Bharat / state

ರಾಜ್ಯದಲ್ಲಿ ₹1.74 ಲಕ್ಷ ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಒಪ್ಪಿಗೆ: 41,448 ಉದ್ಯೋಗ ಸೃಷ್ಟಿ ನಿರೀಕ್ಷೆ - etv bharat kannada

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 60ನೇ ಸಭೆಯಲ್ಲಿ ಗ್ರೀನ್‌ ಹೈಡ್ರೋಜನ್‌ ಉತ್ಪಾದಕ ಸಂಸ್ಥೆ ಆಕ್ಮೆ ಕ್ಲೀನ್‌ ಟೆಕ್‌ ಸೆಲ್ಯೂಷನ್‌ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 3 ಹೆಚ್ಚುವರಿ ಹೂಡಿಕೆ ಯೋಜನೆಗಳ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ.

state-high-level-approval-committee-meeting-held-in-bengaluru
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 60ನೇ ಸಭೆ
author img

By

Published : Oct 23, 2022, 10:30 AM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 60ನೇ ಸಭೆಯಲ್ಲಿ 1,74,381.44 ಕೋಟಿ ರೂ. ಮೌಲ್ಯದ ಒಟ್ಟು 11 ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ.

ರಾಜ್ಯದಲ್ಲಿ ಇಷ್ಟು ಭಾರಿ ಮೊತ್ತದ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದು ಇದೇ ಮೊದಲು. ಗ್ರೀನ್‌ ಹೈಡ್ರೋಜನ್‌ ಉತ್ಪಾದಕ ಸಂಸ್ಥೆ ಆಕ್ಮೆ ಕ್ಲೀನ್‌ ಟೆಕ್‌ ಸೆಲ್ಯೂಷನ್‌ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 3 ಹೆಚ್ಚುವರಿ ಹೂಡಿಕೆ ಯೋಜನೆಗಳ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ. ಈ ಯೋಜನೆಗಳಿಂದ ರಾಜ್ಯದಲ್ಲಿ 41,448 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಸಭೆಯಲ್ಲಿ ಯೋಜನೆಗಳಿಗೆ ಒಪ್ಪಿಗೆ ನೀಡಿದ ನಂತರ ಶನಿವಾರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಸಿರು ಇಂಧನವೇ ಭವಿಷ್ಯ. 2026ರಿಂದ ಗ್ರೀನ್‌ ಹೈಡ್ರೋಜನ್‌ ರಫ್ತು ಆರಂಭವಾಗಲಿದ್ದು, ದೇಶದ ಒಟ್ಟು ಗ್ರೀನ್‌ ಹೈಡ್ರೋಜನ್‌ ರಫ್ತಿನಲ್ಲಿ ರಾಜ್ಯದ ಪಾಲು ಅಧಿಕವಾಗಿರಲಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್‌ ಉತ್ಪಾದನೆಗೆ ಮುಂದಾಗಿರುವ ಆಕ್ಮೆ ಕ್ಲೀನ್‌ ಟೆಕ್‌ ಸಲ್ಯೂಷನ್‌ ಪ್ರೈ. ಲಿ., ಜೆಎಸ್‌ಡಬ್ಲ್ಯು ಗ್ರೀನ್‌ ಹ್ರೈಡ್ರೋಜನ್‌ ಲಿ., ಅವದಾ ವೆಂಚರ್ಸ್‌ ಪ್ರೈ. ಲಿ. ಹಾಗೂ ರಿನ್ಯೂ ಇ-ಫ್ಯೂಯೆಲ್ಸ್‌ ಪ್ರೈವೇಟ್‌ ಲಿಮಿಟೆಡ್‌ನ ಪ್ರಸ್ತಾವನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಮೊದಲೇ ಇಷ್ಟು ಭಾರಿ ಮೊತ್ತದ ಬಂಡವಾಳ ರಾಜ್ಯದಲ್ಲಿ ಹೂಡಿಕೆ ಆಗುತ್ತಿರುವುದು ವಿಶೇಷ. ಇದು ನಮ್ಮ ಉತ್ಸಾಹ ಮತ್ತು ನಿರೀಕ್ಷೆ ಹೆಚ್ಚಿಸಿದೆ ಎಂದರು.

ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರ್ಕಾರವು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸುತ್ತಿದೆ. ಕಬ್ಬು ಬೆಳೆಯುವ ರಾಜ್ಯಗಳ ಪೈಕಿ ದೇಶದಲ್ಲೇ 3ನೇ ಸ್ಥಾನದಲ್ಲಿರುವ ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದಿಸುವ ರಾಜ್ಯ‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಪೂರಕವಾಗಿ ಇಂದಿನ ಸಭೆಯಲ್ಲಿ ಹಸಿರು ಇಂಧನ ಉತ್ಪಾದನಾ ವಲಯದ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿರುವುದು ಅತ್ಯಂತ ಸಂತಸದ ವಿಷಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್‌.ನಿರಾಣಿ ಹೇಳಿದರು.

ಅನುಮೋದನೆ ಪಡೆದ ಪ್ರಮುಖ ಯೋಜನೆಗಳು:

  • ಆಕ್ಮೆ ಕ್ಲೀನ್‌ ಟೆಕ್‌ ಸಲ್ಯೂಷನ್‌ ಪ್ರೈ. ಲಿ. ಹೂಡಿಕೆ: 51,865 ಕೋಟಿ ರೂ.
  • ಅವದಾ ವೆಂಚರ್ಸ್‌ ಪ್ರೈ. ಲಿ. ಹೂಡಿಕೆ: 45,000 ಕೋಟಿ ರೂ.
  • ಜೆಎಸ್‌ಡಬ್ಲ್ಯು ಗ್ರೀನ್‌ ಹ್ರೈಡ್ರೋಜನ್‌ ಲಿ. ಹೂಡಿಕೆ: 40,148 ಕೋಟಿ ರೂ.
  • ರಿನ್ಯೂ ಇ-ಫ್ಯೂಯೆಲ್ಸ್‌ ಪ್ರೈವೇಟ್‌ ಲಿಮಿಟೆಡ್‌, ಹೂಡಿಕೆ: 20,000 ಕೋಟಿ ರೂ.
  • ಏಟ್ರಿಯಾ ಪವರ್‌ ಹೋಲ್ಡಿಂಗ್ಸ್‌ ಹೂಡಿಕೆ: 9,454 ಕೋಟಿ ರೂ.
  • ಕಿರ್ಲೋಸ್ಕರ್‌ ಫೆರೋಸ್ ಇಂಡಸ್ಟ್ರೀಸ್‌ ಲಿ. ಹೂಡಿಕೆ: 3,025 ಕೋಟಿ ರೂ.
  • ಜೆಎಸ್‌ಡಬ್ಲ್ಯು ನಿಯೋ ಎನರ್ಜಿ ಲಿ. ಹೂಡಿಕೆ: 2,579 ಕೋಟಿ ರೂ.
  • ಕಾಂಟಿನೆಂಟಲ್‌ ಆಟೋಮೇಟಿವ್‌ ಕಾಂಪೊನೆಂಟ್ಸ್‌ ಹೂಡಿಕೆ: 920 ಕೋಟಿ ರೂ.

ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು:

  • ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ ಪ್ರೈ ಲಿ. ಹೂಡಿಕೆ: 511 ಕೋಟಿ ರೂ.
  • ಜಿ.ಎಂ ಶುಗರ್‌ ಮತ್ತು ಎನರ್ಜಿ ಲಿ. ಹೂಡಿಕೆ: 49.44 ಕೋಟಿ ರೂ.
  • ರಿಸೋರ್ಸಸ್‌ ಪೆಲ್ಲೆಟ್ಸ್‌ ಕಾನ್ಸನ್ಟ್ರೇಟ್ಸ್‌ ಪ್ರೈ. ಲಿ. ಹೂಡಿಕೆ: 830 ಕೋಟಿ ರೂ.

ಇದನ್ನೂ ಓದಿ: ದೀಪಾವಳಿ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಜೊತೆ ಚರ್ಚೆ: ಪ್ರಲ್ಹಾದ್​ ಜೋಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.