ETV Bharat / state

ರಾಜ್ಯದಲ್ಲಿ 26 ಸಾವಿರ ಕೋಟಿ ರೂ. ಹೂಡಿಕೆಗೆ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಅನುಮೋದನೆ - ಕರ್ನಾಟಕದಲ್ಲಿ ಹೂಡಿಕೆ

55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ. ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ನೀಡಲಾಗಿದೆ. ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ.

meeting
meeting
author img

By

Published : Dec 21, 2020, 9:29 PM IST

ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ. ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ನೀಡಲಾಗಿದೆ. ಆ ಮೂಲಕ ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ.

state higher committee sanctions investment
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ

ಎಲೆಸ್ಟ್‌ ಪ್ರೈವೇಟ್ ಲಿಮಿಟೆಡ್ ಹುಬ್ಬಳ್ಳಿ - ಧಾರವಾಡದಲ್ಲಿ 85 ಎಕರೆ ಭೂಮಿಯಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14,255 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರಿಂದ 867 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಎಲೆಸ್ಟ್‌ ಪ್ರೈ. ಲಿ. ಹುಬ್ಬಳ್ಳಿ-ಧಾರವಾಡದಲ್ಲಿ 88 ಎಕರೆಯಲ್ಲಿ 6,339 ಕೋಟಿ ರೂ. ಹೂಡಿಕೆಯೊಂದಿಗೆ ಎಲೆಕ್ಟ್ರಿಕ್‌ ವಾಹನ ತಯಾರಿಕೆಗೆ ಅಗತ್ಯ ಇರುವ ಲಿಥಿಯಂ ಅಯಾನ್‌ ಸೆಲ್‌ ಮತ್ತು ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪಿಸಲಿದ್ದು, ಇದರಿಂದ 1804 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಹ್ಯುನೆಟ್‌ ಪ್ರೈ. ಲಿ. ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕ್‌ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ 1,825 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2,210 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ‌ ಇಡಲಾಗಿದೆ.

ಮಿರಾಕ್ಯುಲಮ್‌ ಗ್ರೀನ್‌ ಪವರ್‌ ಪ್ರೈ.ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 1,290 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2,820 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಸನಾಲಿ ಪವರ್‌ ಪ್ರೈ.ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 2,950 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 5,640 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಎಂ ರೇವಣ್ಣಗೌಡ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.