ETV Bharat / state

ಗಣರಾಜ್ಯೋತ್ಸವ ಪರೇಡ್​ಗೆ ಆಯ್ಕೆಯಾಗದ ರಾಜ್ಯದ ಸ್ತಬ್ಧಚಿತ್ರ: ವಾರ್ತಾ ಇಲಾಖೆ ಸ್ಪಷ್ಟೀಕರಣ

ದೆಹಲಿ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗದಿರುವ ಬಗ್ಗೆ ರಾಜ್ಯ ವಾರ್ತಾ ಇಲಾಖೆ ಸ್ಪಷ್ಟೀಕರಣ- ಕೇಂದ್ರದ ಸರ್ಕಾರದ ವಿರುದ್ಧ ಕನ್ನಡ ಪರ ಹೋರಾಟಗಾರರ ಆಕ್ರೋಶ- ಪರೇಡ್‌ನಲ್ಲಿ ಕರ್ನಾಟಕ ಸ್ತಬ್ದಚಿತ್ರಕ್ಕೆ ಅವಕಾಶ ಕಲ್ಪಿಸಲು ಸಿಎಂ ಬೊಮ್ಮಾಯಿ ಯತ್ನ

author img

By

Published : Jan 8, 2023, 7:09 PM IST

State Information Department Clarification
ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾಗದ ರಾಜ್ಯದ ಸ್ತಬ್ದಚಿತ್ರ: ವಾರ್ತಾ ಇಲಾಖೆ ಸ್ಪಷ್ಟೀಕರಣ

ಬೆಂಗಳೂರು: ದೆಹಲಿ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗದಿರುವುದು ಸದ್ಯ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕನ್ನಡಪರ ಸಂಘಟನೆಗಳು ಮತ್ತು ಪ್ರತಿಪಕ್ಷಗಳ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ರಾಜ್ಯ ವಾರ್ತಾ ಇಲಾಖೆ ಸ್ಪಷ್ಟೀಕರಣ ನೀಡಿದೆ. ಗಣರಾಜ್ಯೋತ್ಸವ ಸ್ತಬ್ದಚಿತ್ರ ನೋಡಲ್ ಅಧಿಕಾರಿ ಸಿಆರ್ ನವೀನ್ ಸ್ಪಷ್ಟೀಕರಣ ನೀಡಿದ್ದು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಜೊತೆಗೆ ಕಳೆದ ವರ್ಷದ ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ರಾಜ್ಯಗಳ ಪಟ್ಟಿ ಹಾಗೂ ಈ ಬಾರಿ ಆಯ್ಕೆಯಾಗಿರುವ ರಾಜ್ಯಗಳ ಪಟ್ಟಿಯನ್ನು ಗಮನಿಸಿದರೆ, 2022ರಲ್ಲಿ ಮೊದಲ ಮೂರು ಬಹುಮಾನ ಪಡೆದ ರಾಜ್ಯಗಳು ಈ ಬಾರಿ ಆಯ್ಕೆಯಾಗಿರುವುದಿಲ್ಲ. ಅಲ್ಲದೆ ಕಳೆದ ವರ್ಷ ಭಾಗವಹಿಸಿದ್ದ ರಾಜ್ಯಗಳಲ್ಲಿ ಮೂರು ರಾಜ್ಯಗಳನ್ನು ಹೊರತುಪಡಿಸಿದರೆ, ಇನ್ನುಳಿದ ರಾಜ್ಯಗಳು ಆಯ್ಕೆಯಾಗಿರುವುದಿಲ್ಲ ಎಂದು ತಿಳಿಸಿದೆ. ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ದಚಿತ್ರ ಆಯ್ಕೆಯಾಗದಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇತ್ತ ಪ್ರತಿಪಕ್ಷ ಕಾಂಗ್ರೆಸ್​ ಪಕ್ಷದ ನಾಐಕರು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಪರ ಹೋರಾಟಗಾರರು ಕೇಂದ್ರದ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

ಬೊಮ್ಮಾಯಿ ಭರವಸೆ.. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕರ್ನಾಟಕ ಸ್ತಬ್ದಚಿತ್ರಕ್ಕೆ ಅವಕಾಶ ಪಡೆಯಲು ಪ್ರಯತ್ನ ನಡೆಸಿದ್ದೇವೆ. ಅವಕಾಶ ಸಿಗಲಿದೆ ಎಂಬ ವಿಶ್ವಾಸವಿದೆ. ರಾಜ್ಯದ ಸ್ತಬ್ದಚಿತ್ರವನ್ನು ತಿರಸ್ಕರಿಸಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಕೊಡಬೇಕು ಎಂಬ ಕಾರಣಕ್ಕೆ ಈ ಬಾರಿ ರಾಜ್ಯಕ್ಕೆ ಅವಕಾಶ ಸಿಕ್ಕಿಲ್ಲ. ಆದರೂ ನಾವು ಪ್ರಯತ್ನ ನಡೆಸಿದ್ದೇವೆ. ಕರ್ನಾಟಕದ ಸ್ತಬ್ದಚಿತ್ರ ಈ ಬಾರಿಯೂ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಇರಲಿದೆ ಎಂದಿದ್ದಾರೆ.

ಇದೀಗ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾಗದೇ ಇರುವ ಬಗ್ಗೆ ಸ್ಪಷ್ಟೀಕರಣ ನೀಡಿದೆ. ಕೇಂದ್ರ ಸರ್ಕಾರ ಹೊರಡಿಸಿರುವ ಗಣರಾಜ್ಯೋತ್ಸವ ಪರೇಡ್ ಗೆ ಸ್ತಬ್ಧಚಿತ್ರ ಆಯ್ಕೆಗಾಗಿನ ಮಾರ್ಗಸೂಚಿಯನ್ನೂ ರಾಜ್ಯ ವಾರ್ತಾ ಇಲಾಖೆ ಉಲ್ಲೇಖಿಸಿದೆ.

ಏ‌ನಿದು ಸ್ತಬ್ಧಚಿತ್ರ ವಿವಾದ: ಕಳೆದ 12 ವರ್ಷಗಳಿಂದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಇರುತ್ತಿತ್ತು. ಆದರೆ, ಈ ಬಾರಿ ಕರ್ನಾಟಕ ದೆಹಲಿ ಪರೇಡ್​ಗೆ ಆಯ್ಕೆಯಾಗಿಲ್ಲ. ಇದು ಕನ್ನಡ ಪರ ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿವರ್ಷ ವಿಶಿಷ್ಠ ಮತ್ತು ಆಕರ್ಷಕ ಥೀಮ್‌ನೊಂದಿಗೆ ಸ್ತಬ್ಧಚಿತ್ರವನ್ನು ಸಿದ್ಧಗೊಳಿಸಿ ದೆಹಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗಿಯಾಗುತ್ತಿತ್ತು. ಈ ಬಾರಿ ಮಹಿಳಾ ಸಬಲೀಕರಣ ಥೀಮ್ ಇಟ್ಟುಕೊಂಡು ಸ್ತಬ್ಧಚಿತ್ರ ಸಿದ್ಧಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ದಕ್ಷಿಣ ಭಾರತ ರಾಜ್ಯಗಳಾದ ತಮಿಳುನಾಡು, ಕೇರಳ ಸೇರಿದಂತೆ 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ.

ಕಳೆದ ಬಾರಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ್ದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಕುರಿತ ಸ್ತಬ್ಧ ಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿತ್ತು. ಆದರೆ ಈ ಬಾರಿ ಅವಕಾಶ ದೊರೆಯದಿರುವುದು ರಾಜ್ಯದ ಜನತೆಗೆ ಬೇಸರ ಉಂಟು ಮಾಡಿದೆ.

ಇದನ್ನೂ ಓದಿ:ಚಿತ್ರಕಲಾ ಪರಿಷತ್ ಪ್ರಖ್ಯಾತಿ ರಾಷ್ಟ್ರಮಟ್ಟದಲ್ಲೂ ಬೆಳಗಲಿ : ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.