ETV Bharat / state

ಪ್ರಧಾನಿ ಮೋದಿ ತಾಯಿ ಅಗಲಿಕೆಗೆ ರಾಜ್ಯ ನಾಯಕರ ಕಂಬನಿ

author img

By

Published : Dec 30, 2022, 10:30 AM IST

ಪ್ರಧಾನ ಮಂತ್ರಿ ತಾಯಿ ಹೀರಾಬೆನ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಬಿ ಎಸ್​ ಯಡಿಯೂರಪ್ಪ, ನಳೀನ್​ ಕುಮಾರ್​ ಕಟೀಲ್ ಸಂತಾಪ ಸೂಚಿಸಿದ್ದಾರೆ.

state-leaders-condole-modi-mother-death
ಮೋದಿ ತಾಯಿ ಅಗಲಿಕೆಗೆ ರಾಜ್ಯ ನಾಯಕರ ಕಂಬನಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

  • ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
    ಓಂ ಶಾಂತಿಃ https://t.co/7dLUarH8Qz

    — Basavaraj S Bommai (@BSBommai) December 30, 2022 " class="align-text-top noRightClick twitterSection" data=" ">

ಹೀರಾಬೆನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮೋದಿ ಮತ್ತು ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

  • ಆದರಣೀಯ ಪ್ರಧಾನಿ ಶ್ರೀ @narendramodi ಜೀ ಅವರ ಪೂಜ್ಯ ಮಾತೃಶ್ರೀ ಶ್ರೀಮತಿ ಹೀರಾಬೆನ್ ಮೋದಿ ರವರು ವಿಧಿವಶರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಅತ್ಯಂತ ನಿಸ್ಪೃಹತೆ ಹಾಗೂ ಸಾರ್ಥಕತೆಯಿಂದ ಶತಮಾನ ಪೂರೈಸಿದ್ದ ಆ ಹಿರಿಯ ಜೀವಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. (1/2)

    — B.S.Yediyurappa (@BSYBJP) December 30, 2022 " class="align-text-top noRightClick twitterSection" data=" ">

ದೇಶಕ್ಕೆ ಜನನಾಯಕ ಪ್ರಧಾನಿ‌ ನರೇಂದ್ರ ಮೋದಿಯವರಂತ ಮಗನನ್ನು ನೀಡಿ, ಶತಾಯುಷಿಯಾಗಿ ಬದುಕಿ ಬಾಳಿ ದೇವರ ಚರಣ ಸೇರಿದ ಹೀರಾಬೆನ್ ಅವರಿಗೆ ಗೌರವಪೂರ್ವಕ ವಿದಾಯಗಳು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಪ್ರಧಾನಿಯವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಂಬನಿ ಮಿಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರು ಪೂರ್ಣ ಜೀವನವನ್ನು ನಡೆಸಿದ ಶತಾಯುಷಿಯಾಗಿದ್ದರು, ಆ ಹಿರಿಯ ಜೀವಕ್ಕೆ ಆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಮೋದಿ ಅವರಿಗೆ ನೀಡಲಿ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

  • My heartfelt condolences to PM @narendramodi on the passing away of his mother Heeraben Modi. She was a centenarian who lived a full life, but one wishes a mother to be around, forever, to energise and anchor. May God give Shri. Modi the strength to bear the loss. Om Shanti. pic.twitter.com/MvEUowUyPA

    — H D Devegowda (@H_D_Devegowda) December 30, 2022 " class="align-text-top noRightClick twitterSection" data=" ">

ಇನ್ನು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾತೃಶ್ರೀಯವರಾದ ಶ್ರೀಮತಿ ಹೀರಾ ಬೆನ್ ಅವರು ವಿಧಿವಶರಾದ ಸುದ್ದಿ ಕೇಳಿ ಬಹಳ ದುಃಖವಾಯಿತು. ಮಮತಾಮಯಿ, ಶತಾಯುಷಿಯೂ ಆಗಿದ್ದ ಅವರ ಮತ್ತು ಮೋದಿ ಅವರ ಬಾಂಧವ್ಯ ತಾಯಿ ಮಗನ ವಾತ್ಸಲ್ಯದ ಮೇರು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಅಗಲಿದ ಆ ಹಿರಿಯ ಜೀವಕ್ಕೆ ಆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಮೋದಿ ಅವರಿಗೆ ಹಾಗೂ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಪಿಎಂ ಮೋದಿ ತಾಯಿ ಹೀರಾಬೆನ್ ನಿಧನ.. ಗಣ್ಯರ ಕಂಬನಿ.. ಅಹಮದಾಬಾದ್​​ನತ್ತ ಪ್ರಧಾನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.