ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತ ಜಿ. ಮರಿಸ್ವಾಮಿ ಅವರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.
ಸದ್ಯ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಮರಿಸ್ವಾಮಿ, ಸೋಮಶೆಟ್ಟಿಹಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾಗಿದ್ದಾರೆ. ಇವರನ್ನು ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಅನುಚ್ಛೇದ 4 (2) (ಸಿ) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅವಧಿಗೆ ಅಥವಾ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅವಧಿ ಪೂರ್ಣಗೊಳ್ಳುವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ.