ETV Bharat / state

ಆಗಸ್ಟ್​ 15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ.. ಸಂಘಟಿತ ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಸೂಚನೆ

author img

By

Published : Aug 7, 2023, 5:25 PM IST

ಜೆಡಿಎಸ್​ ಪಕ್ಷದ ಮುಖಂಡರು ಆಗಸ್ಟ್​ 15ರಿಂದ ಪಕ್ಷ ಸಂಘಟನೆ ಮತ್ತು ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

state-tour-of-jds-leaders-after-august-15
ಆಗಸ್ಟ್​ 15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ : ಸಂಘಟಿತ ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಸೂಚನೆ

ಬೆಂಗಳೂರು : ಪಕ್ಷ ಸಂಘಟನೆಗಾಗಿ ಆಗಸ್ಟ್ 15ರ ನಂತರ ಜೆಡಿಎಸ್ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಚರ್ಚೆಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಎದೆಗುಂದದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನ ನೀಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ತಾಕೀತು ಮಾಡಿದ್ದು, ಅವರ ಆದೇಶದಂತೆ ಪಕ್ಷ ಸಂಘಟನೆಗೆ ಬಹಳಷ್ಟು ಒತ್ತು ಕೊಟ್ಟು ಕೆಲಸ ಮಾಡಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಜಿಟಿ ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ : ಮಾಜಿ ಸಚಿವ ಜಿ ಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆಗೆ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಮಾಜಿ ಶಾಸಕರಾದ ವೈ ಎಸ್ ವಿ ದತ್ತಾ ಅವರು ಈ ಕಮಿಟಿಗೆ ಸಂಚಾಲಕರಾಗಿರುತ್ತಾರೆ. ಒಟ್ಟು 20 ಸದಸ್ಯರು ಕಮಿಟಿಯಲ್ಲಿ ಇರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆ.15ರ ನಂತರ ಸಂಘಟನೆಗೆ ಪ್ರವಾಸ : ಪಕ್ಷದ ಸಂಘಟನೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಆಗಸ್ಟ್ 15ರ ನಂತರ ರಾಜ್ಯಾದ್ಯಂತ ಪಕ್ಷದ ಪ್ರಮುಖ ಮುಖಂಡರು ಪ್ರವಾಸ ಮಾಡಲಿದ್ದಾರೆ. ನಾನೂ ಸೇರಿ ಪಕ್ಷದ ಬಹುತೇಕ ಹಿರಿಯ ನಾಯಕರು ಪ್ರವಾಸ ಕೈಗೊಳ್ಳುತ್ತೇವೆ ಎಂದು ಹೆಚ್​​ಡಿಕೆ ತಿಳಿಸಿದ್ದಾರೆ.

ನಮ್ಮ ಹೋರಾಟ ಸಂಘಟಿತವಾಗಿರಬೇಕು ಹಾಗೂ ವಿಷಯಾಧಾರಿತ ಆಗಿರಬೇಕು. ಜೊತೆಗೆ ಜನಪರವಾಗಿರಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಅದರಂತೆ ನಾವು ಹೋರಾಟ ಮಾಡುತ್ತೇವೆ. ಅಲ್ಲದೆ, ಪಕ್ಷದ ವಿವಿಧ ವಿಭಾಗಗಳಿಗೆ ಮುಖ್ಯಸ್ಥರನ್ನು ನೇಮಕ ಮಾಡುವ ಬಗ್ಗೆಯೂ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಹಿರಿಯ ನಾಯಕರಾದ ಬಂಡೆಪ್ಪ ಕಾಶೆಂಪೂರ್, ಹೆಚ್.ಕೆ ಕುಮಾರಸ್ವಾಮಿ, ಅಲ್ಕೊಡ್ ಹನುಮಂತಪ್ಪ, ಮಾಜಿ ಶಾಸಕರಾದ ಸುರೇಶ್ ಗೌಡ, ಅನ್ನದಾನಿ, ನಿಸರ್ಗ ನಾರಾಯಣಸ್ವಾಮಿ, ನೇಮಿರಾಜ್ ನಾಯ್ಕ, ವೈಎಸ್ ವಿ ದತ್ತಾ, ಲಿಂಗೇಶ್, ಅಪ್ಪಾಜಿ ಗೌಡ, ವೀರಭದ್ರಪ್ಪ ಹಾಲರವಿ, ಮಾಗಡಿ ಮಂಜುನಾಥ್, ಸೂರಜ್ ನಾಯಕ್ ಸೋನಿ, ತಿಮ್ಮರಾಯಪ್ಪ, ದೊಡ್ಡನಗೌಡ ಪಾಟೀಲ್, ಅಶ್ವಿನ್ ಕುಮಾರ್, ಚೌಡರೆಡ್ಡಿ, ಶ್ರೀಕಂಠೇಗೌಡ, ಎಂಎಲ್​ಸಿ ಕೆ.ಎನ್.ತಿಪ್ಪೇಸ್ವಾಮಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ : K S Eshwarappa: ಚಲುವರಾಯ ಸ್ವಾಮಿ ಅವರನ್ನು ಸಂಪುಟದಿಂದ ಕೈ ಬಿಡಬೇಕು- ಕೆ.ಎಸ್.ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.