ETV Bharat / state

ಬಿಎಸ್​ವೈ ತವರು ಜಿಲ್ಲೆಯಲ್ಲಿ ರಾಜ್ಯ ಪ್ರಶಿಕ್ಷಣ ವರ್ಗ: ಶಿವಮೊಗ್ಗಕ್ಕೆ ತೆರಳಿದ ಬಿಜೆಪಿ ನಾಯಕರು - ಸಂಘ ಪರಿವಾರದ ಕೇಂದ್ರ ಕಚೇರಿ ಕೇಶವ ಕೃಪಾ

3 ದಿನಗಳ ಕಾಲ ಪಕ್ಷದ ತತ್ತ್ವ - ಸಿದ್ಧಾಂತಗಳ ಭೂಮಿಕೆ ಸಂಬಂಧ ಮಾರ್ಗದರ್ಶನ ನೀಡಲಿದ್ದು, ಶಾರೀರಿಕ ಮತ್ತು ಬೌದ್ಧಿಕವಾಗಿ ಗುಣಮಟ್ಟದ ಕಾರ್ಯಕರ್ತರನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಪ್ರಶಿಕ್ಷಣ ವರ್ಗ ಸಂಘಟಿಸಲಾಗುತ್ತಿದೆ.

State training class in BSY home district: BJP leaders left for Shimoga
ಬಿಎಸ್​ವೈ ತವರು ಜಿಲ್ಲೆಯಲ್ಲಿ ರಾಜ್ಯ ಪ್ರಶಿಕ್ಷಣ ವರ್ಗ: ಶಿವಮೊಗ್ಗಕ್ಕೆ ತೆರಳಿದ ಬಿಜೆಪಿ ನಾಯಕರು
author img

By

Published : Nov 25, 2022, 5:16 PM IST

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಇಂದಿನಿಂದ ಬಿಜೆಪಿ ರಾಜ್ಯ ಪ್ರಶಿಕ್ಷಣ ವರ್ಗ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೇರಿದಂತೆ ಉಳಿದ ಆಹ್ವಾನಿತರ ಜೊತೆ ಬಿಎಸ್​ವೈ ಶಿವಮೊಗ್ಗಕ್ಕೆ ಪ್ರಯಾಣಿಸಿದ್ದಾರೆ.

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್​ನಲ್ಲಿ ಇಂದಿನಿಂದ 3 ದಿನಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ರಾಜ್ಯ ಪ್ರಶಿಕ್ಷಣ ವರ್ಗ ನಡೆಯಲಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಪದಾಧಿಕಾರಿಗಳು, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಪ್ರಭಾರಿಗಳು ಭಾಗಿಯಾಗಲಿದ್ದಾರೆ.

3 ದಿನಗಳ ಕಾಲ ಪಕ್ಷದ ತತ್ತ್ವ - ಸಿದ್ಧಾಂತಗಳ ಭೂಮಿಕೆ ಸಂಬಂಧ ಮಾರ್ಗದರ್ಶನ ನೀಡಲಿದ್ದು, ಶಾರೀರಿಕ ಮತ್ತು ಬೌದ್ಧಿಕವಾಗಿ ಗುಣಮಟ್ಟದ ಕಾರ್ಯಕರ್ತರನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಇದನ್ನು ಸಂಘಟಿಸಲಾಗುತ್ತಿದೆ. 27ರಂದು ಸಮಾರೋಪ ಕಾರ್ಯಕ್ರಮವು ನಡೆಯಲಿದೆ. ಪ್ರ ಶಿಕ್ಷಣ ವರ್ಗ ಆರಂಭಕ್ಕೂ ಮುನ್ನ ಸಂಘ ಪರಿವಾರದ ಕೇಂದ್ರ ಕಚೇರಿ ಕೇಶವ ಕೃಪಾಗೆ ಸಿಎಂ ಬಸವರಾಜ ಬೊಮ್ಮಾಯಿ‌ ಸೇರಿದಂತೆ ಪಕ್ಷದ ಪ್ರಮುಖರು ಭೇಟಿ ನೀಡಿ‌ ಚರ್ಚಿಸಿದ್ದು, ಸಂಘದ ಹಿರಿಯರಿಂದ ಮಾರ್ಗದರ್ಶನ ಪಡೆದುಕೊಂಡಿದ್ದಾರೆ. ಸಂಘದ ಸಲಹೆಗಳ ಆಧಾರದಲ್ಲಿ ಇಂದಿನಿಂದ ನಡೆಯುವ ಪ್ರಶಿಕ್ಷಣ ವರ್ಗದಲ್ಲಿ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: ದಾವೋಸ್ ಆರ್ಥಿಕ ಶೃಂಗದ ಮಾದರಿಯಲ್ಲಿ ಬೆಂಗಳೂರು ಟೆಕ್ ಸಮ್ಮಿಟ್: ಸರ್ಕಾರದ ಹೊಸ ಪ್ಲಾನ್​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.