ಬೆಂಗಳೂರು: ರಾಜ್ಯದ್ಯಾಂತ ವ್ಯಾಪಕ ಮಳೆಯಾಗಿದ್ದು, ಕರಾವಳಿಯಲ್ಲಿ ಮಾನ್ಸೂನ್ ಚುರುಕಾಗಿದೆ. ಬಂಗಾಳ ಉಪಸಾಗರದ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಸೆ. 14 ರಿಂದ 18 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆ.18 ರಿಂದ ಮಳೆ ಪ್ರಮಾಣ ಏರಿಕೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಉ.ಒಳನಾಡಿನಲ್ಲಿ ಸೆ. 14 ರಿಂದ 18ರವರೆಗೆ ವ್ಯಾಪಕ ಮಳೆಯಾಗಲಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಸೆ.16 ರಿಂದ ಮಳೆ ಪ್ರಮಾಣ ಏರಿಕೆಯಾಗಲಿದೆ.
ದ.ಒಳನಾಡಿನಲ್ಲಿ ಸೆ.14 ರಿಂದ 18 ರವರೆಗೆ, ಮಳೆಯಾಗಲಿದೆ. ಮಲೆನಾಡು ಹಾಗೂ ದ.ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿಗೂ ಸೆ. 14 ಹಾಗೂ 15 ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.