ETV Bharat / state

ನಮ್ಮ ಹೋರಾಟ ಮುಂದುವರಿಯಲಿದೆ, ಸಂಪತ್ ಮೇಲೆ ಕ್ರಮಕ್ಕೆ ಒತ್ತಡ ತಂದಿದ್ದೇವೆ- ಶಾಸಕ ಶ್ರೀನಿವಾಸ ಮೂರ್ತಿ - Statement of MLA Akhanda Srinivas Murthy on Sampat raj bail

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
author img

By

Published : Feb 12, 2021, 1:33 PM IST

Updated : Feb 12, 2021, 2:47 PM IST

13:26 February 12

ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಸಂಪತ್ ಮೇಲೆ ಕ್ರಮಕ್ಕೆ ನಾವು ಒತ್ತಡ ತಂದಿದ್ದೇವೆ ಎಂದು ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಬೆಂಗಳೂರು: ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಸಂಪತ್ ಮೇಲೆ ಕ್ರಮಕ್ಕೆ ನಾವು ಒತ್ತಡ ತಂದಿದ್ದೇವೆ. ಕೆಪಿಸಿಸಿ ಅಧ್ಯಕ್ಷರಿಗೂ ಮನವಿ ಮಾಡಿದ್ದೇವೆ. ಆದರೂ ಅಧ್ಯಕ್ಷರು ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್​ಗೆ ಇಂದು ಹೈಕೋರ್ಟ್​ ಜಾಮೀನು ಮಂಜೂರು ಮಾಡಿರುವ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಾನೊಬ್ಬ ಶಾಸಕ, ನನಗೇ ಈ ರೀತಿಯಾಗಿದೆ. ಅವರಿಗೆ ಶಿಕ್ಷೆಯಾಗಬೇಕು. ಇವತ್ತಿಗೂ ಆಗಿಲ್ಲ. ನ್ಯಾಯಾಲಯದ ಜಾಮೀನಿನ ಬಗ್ಗೆ ಮಾತನಾಡಲ್ಲ. ಅದನ್ನ ನಾನು ಒಪ್ಪುತ್ತೇನೆ. ಆದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.

ನಾನು ದೇವರನ್ನ ನಂಬಿದ್ದೇನೆ. ಆ ದೇವರು ಶಿಕ್ಷೆಯನ್ನ ಕೊಡಬೇಕು. ಮಾಧ್ಯಮಗಳು ನನ್ನ ಬೆಂಬಲಕ್ಕಿವೆ. ಮಾಧ್ಯಮಗಳು ನಮಗೆ ನ್ಯಾಯ ಕೊಡಿಸುವ ಭರವಸೆಯಿದೆ. ನಮ್ಮ ತಂದೆಯೂ ರಾಜಕೀಯದಲ್ಲಿದ್ದವರು. ಡಿ.ಕೆ.ಶಿವಕುಮಾರ್ ಯಾಕೆ ಅವರ ಪರ ನಿಂತಿದ್ದಾರೋ ಗೊತ್ತಿಲ್ಲ. ನಾನು‌ ವಲಸೆ ಬಂದಿರಬಹುದು. ಆದರೆ ಅತಿ ಹೆಚ್ಚಿನ ಮತಗಳಿಂದ ಗೆದ್ದವನು. ಮನೆಯನ್ನೇ ಸುಟ್ಟವರು, ನನ್ನನ್ನು ಸುಡದೇ ಬಿಡ್ತಾರೆಯೇ? ನನಗೆ ಈಗಲೂ ಬೆದರಿಕೆ ಇದೆ. ಮುಂದೆಯೂ ಇದೆ. ಮನೆ ಸುಟ್ಟುಕೊಂಡು ನಾವು ಬೀದಿಯಲ್ಲಿದ್ದೇವೆ. ಸೋನಿಯಾ ಗಾಂಧಿಯವರಿಗೆ ಪತ್ರ ಬರೆಯುತ್ತೇವೆ ಎಂದು ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದರು.

Last Updated : Feb 12, 2021, 2:47 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.