ETV Bharat / state

ಫೆ.27 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ - ಫೆ.27 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ

ರಾಷ್ಟ್ರೀಯ ಪಲ್ಸ್ ಪೋಲಿಯೊ-2022 ಕಾರ್ಯಕ್ರಮವನ್ನು ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ಇಲಾಖೆ ಅಡಿಯ, 141 ಯೋಜನಾ ಘಟಕಗಳ 198 ವಾರ್ಡ್​ಗಳಲ್ಲಿ ಲಸಿಕೆ ಹಾಕಲು ಯೋಜನೆ ರೂಪಿಸಲಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಅಂತಾ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದರು..

National Pulse Polio Campaign on February 27th
ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ
author img

By

Published : Feb 25, 2022, 3:38 PM IST

ಬೆಂಗಳೂರು : ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೊ ಒಂದು ಭಯಾನಕ ರೋಗ. ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟು ಮಾಡುತ್ತದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡು ಬರುತ್ತದೆ.

ಭಾರತದಲ್ಲಿ 2011ರಿಂದ ಯಾವುದೇ ಪೋಲಿಯೊ ಪ್ರಕರಣಗಳು ವರದಿಯಾಗಿಲ್ಲ. ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತವನ್ನು ಪೋಲಿಯೊ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಆದರೂ ಸಹ‌ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಮಲಾವಿಯಲ್ಲಿ ಕೆಲವು ಪ್ರಕರಣ ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಈ ವರ್ಷವೂ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಫೆಬ್ರವರಿ 27ರಿಂದ ಮಾರ್ಚ್ 2ರವರೆಗೆ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನದ ಕುರಿತು ಗೌರವ್‌ ಗುಪ್ತಾ ಮಾತನಾಡಿರುವುದು..

ರಾಷ್ಟ್ರೀಯ ಪಲ್ಸ್ ಪೋಲಿಯೊ-2022 ಕಾರ್ಯಕ್ರಮವನ್ನು ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ಇಲಾಖೆ ಅಡಿಯ, 141 ಯೋಜನಾ ಘಟಕಗಳ 198 ವಾರ್ಡ್​ಗಳಲ್ಲಿ ಲಸಿಕೆ ಹಾಕಲು ಯೋಜನೆ ರೂಪಿಸಲಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಅಂತಾ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದರು.

0-5 ವರ್ಷಕ್ಕಿಂತ ಕಡಿಮೆ ವಯಸ್ಸಿನ 10,80,104 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ. ಕೊಳೆಗೇರಿ ನಿವಾಸಿಗಳು ಮತ್ತು ವಲಸಿಗರ ಮೇಲೆ ವಿಶೇಷ ಗಮನ ನೀಡಲಾಗುವುದು.

ಪಲ್ಸ್ ಪೋಲಿಯೊ ಲಸಿಕೆ ಹಾಕಲು ಪಾಲಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಕುಟುಂಬ ಕಲ್ಯಾಣ ಕೇಂದ್ರ, ಔಷಧಾಲಯಗಳು, ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಶಾಲೆಗಳು, ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ, ಮಾರುಕಟ್ಟೆ, ರೈಲ್ವೆ ಮತ್ತು ಮೆಟ್ರೋ ನಿಲ್ದಾಣ, ಮಾಲ್‌ಗಳು, ಸ್ವಯಂ ಸೇವಾ ಸಂಸ್ಥೆಯ ಆಸ್ಪತ್ರೆಗಳು, ಖಾಸಗಿ ನರ್ಸಿಂಗ್ ಹೋಮ್‌ಗಳು, ವೈದ್ಯಕೀಯ ಮಹಾವಿದ್ಯಾಲಯ, ಪ್ರಮುಖ ಉದ್ಯಾನವನಗಳು, ಕೊಳಚೆ ಪ್ರದೇಶಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಪೋಲಿಯೊ ಹನಿ ಹಾಕಲಾಗುತ್ತದೆ. ಅದಕ್ಕಾಗಿ 3,404 ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ಸಿಲುಕಿರುವ ಕೊಳ್ಳೇಗಾಲದ ವೈದ್ಯಕೀಯ ವಿದ್ಯಾರ್ಥಿನಿ : ಪೋಷಕರ ಆತಂಕ

ಕೊಳೆಗೇರಿ ಪ್ರದೇಶಗಳಲ್ಲಿ ಪೋಲಿಯೊ ಬೂತ್‌ಗಳ ಮೇಲ್ವಿಚಾರಣೆ ಮತ್ತು ಸಮನ್ವಯತೆಗಾಗಿ ಎಲ್ಲಾ ಇಲಾಖೆಗಳಿಂದ ವಿಶೇಷ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜೊತೆಗೆ, ಕಾರ್ಯಕ್ರಮವನ್ನು ದೂರದರ್ಶನ, ರೇಡಿಯೋ ಮತ್ತು ಮಾಲ್​​ಗಳು, ವಾಣಿಜ್ಯ ಪ್ರದೇಶಗಳು, ಮಾರುಕಟ್ಟೆಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಲಾಗಿದೆ.

ಪೋಲಿಯೊ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಬೆಂಗಳೂರಿನ ನಾಗರಿಕರನ್ನು ತಲುಪಲು ಪಾಲಿಕೆ ತಮ್ಮ ದೈನಂದಿನ ಮನೆಯಿಂದ ಮನೆಗೆ ತ್ಯಾಜ್ಯ ಸಂಗ್ರಹಣೆಯ ವಾಹನಗಳಲ್ಲಿ‌ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಇದರ ಜೊತೆಗೆ, ರೋಟರಿ, ಅಕ್ಷಯ ಪಾತ್ರ, ಅಧಮ್ಯ ಚೇತನ ಮುಂತಾದ ಅನೇಕ ಎನ್.ಜಿ.ಒ ಪಾಲುದಾರರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಾಲಿಕೆಯ ಜೊತೆ ಕೈಜೋಡಿಸಿದ್ದಾರೆ.

ಈ ಹಿಂದೆ ಮಕ್ಕಳಿಗೆ ಪೋಲಿಯೊ ಹನಿ ಹಾಕುವಂತೆ ಸಾರ್ವಜನಿಕರು ಪದೇ ಪದೇ ಬೆಂಬಲ ನೀಡಿದರೂ, ಐದು ವರ್ಷದೊಳಗಿನ ಮಕ್ಕಳನ್ನು ಮತಗಟ್ಟೆಗೆ ಕರೆತಂದು ಎರಡು ಹನಿ ಪೋಲಿಯೊ ಹಾಕಿಸುವ ಮೂಲಕ ಪೋಲಿಯೊ ಮುಕ್ತ ನಗರವನ್ನಾಗಿಸಿ ಎಲ್ಲರೂ ಕೈ ಜೋಡಿಸಿ ಅಂತ ಮನವಿ ಮಾಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ವಿವರ:

O - 5 ವರ್ಷದ ಮಕ್ಕಳ ಸಂಖ್ಯೆ: 10,80,104

ಬೂತ್​​ಗಳ ಸಂಖ್ಯೆ: 3,404

ಸ್ಥಿರ ತಂಡಗಳು: 435

ಸಂಚಾರಿ ತಂಡಗಳು: 345

ಲಸಿಕಾ ಕಾರ್ಯಕರ್ತರು: 15,198

ಮೇಲ್ವಿಚಾರಕರು: 760

ನೋಡಲ್ ಅಧಿಕಾರಿಗಳು: 26

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.