ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೆಕ್ಷನ್ ಇಂಜಿನಿಯರ್ ಮತ್ತು ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಉಳಿಕೆ ಮೂಲ ವೃಂದದ ಅಡಿಯಲ್ಲಿ ಒಟ್ಟು 236 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಹುದ್ದೆಗಳ ವಿವರ: ಸೆಕ್ಷನ್ ಇಂಜಿನಿಯರ್, ಮೇಂಟೇನರ್ ಮತ್ತು ಸ್ಟೇಷನ್ ಕಂಟ್ರೋಲರ್, ಟ್ರೈನ್ ಆಪರೇಟರ್ ಸೇರಿದಂತೆ ಒಟ್ಟು 236 ಹುದ್ದೆಗಳಿಗೆ ನೇಮಕಾತಿ. 29 ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲು.
ವೇತನ: ವಿವಿಧ ಹುದ್ದೆಗಳ ಶ್ರೇಣಿಗೆ ಅನುಸಾರವಾಗಿ ಮಾಸಿಕ 25000 ದಿಂದ 94500 ರೂವರೆಗೆ ವೇತನ ನಿಗದಿಸಲಾಗಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ ಬಿಇ, ಬಿ.ಟೆಕ್ನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ, ಐಟಿಐ ಮತ್ತು ಡಿಪ್ಲೊಮಾ ಪದವಿ ಹೊಂದಿರಬೇಕು.
ವಯೋಮಿತಿ: ಕನಿಷ್ಟ 18 ವರ್ಷ ಗರಿಷ್ಠ 35 ವರ್ಷ ಮೀರಿರಬಾರದು. ಪ್ರವರ್ಗ 23, 2ಬಿ, 3ಎ ಮತ್ತು 3ಬಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ವಿಧಾನ: ಬಿಎಂಆರ್ಸಿಎಲ್ನಲ್ಲಿ ಪ್ರಕಟವಾಗಿರುವ ಅಧಿಕೃತ ಅರ್ಜಿಯಲ್ಲಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸತಕ್ಕದು. ನಿಬಂಧನೆಗಳನ್ನು ಸರಿಯಾಗಿ ಪರಿಶೀಲಿಸಬೇಕು. ಅರ್ಜಿ ಶುಲ್ಕವನ್ನು ಆನ್ಲೈನ್ ಮತ್ತು ಚಲನ್ ಮೂಲಕ ಪಾವತಿಸಬಹುದು. ಸಾಮಾನ್ಯ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 1,180, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 590 ರೂ ಜೊತೆಗೆ ಶೇ 18 ಜಿಎಸ್ ಅನ್ವಯ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆಯ ಬಳಿಕ ಮೆರಿಟ್ ಆಧಾರದ ಮೇಲೆ ಸಂದರ್ಶನ.
ಮಾರ್ಚ್ 24ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 24 ಕಡೆಯ ದಿನಾಂಕ. ಅರ್ಜಿ ಶುಲ್ಕ ಪಾವತಿಗೆ ಏಪ್ರಿಲ್ 27 ಅಂತಿಮ ದಿನ.
ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರ ಪಡೆಯಲು ಬಿಎಂಆರ್ಸಿಎಲ್ನ ಅಧಿಕೃತ ಜಾಲತಾಣ https://kannada.bmrc.co.in/#/career ಅಥವಾ english.bmrc.co.in ಗೆ ಭೇಟಿ ನೀಡಿ.
ಇದನ್ನೂ ಓದಿ: ಇಗ್ನೋದಲ್ಲಿ ಉದ್ಯೋಗಾವಕಾಶ.. 200 ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ