ETV Bharat / state

ಆದಷ್ಟು ಬೇಗ ಮೇಕೆದಾಟು ಯೋಜನೆ ಆರಂಭಕ್ಕೆ ಕ್ರಮ: ಸಿಎಂ - CM BS yadiyurappa reaction on mekedatu project

ಮೇಕೆದಾಟು ಯೋಜನೆ ಸಂಬಂಧ ಆದಷ್ಟು ಬೇಗ ಕೇಂದ್ರದ ಅನುಮತಿ ಪಡೆದು ಯೋಜನೆ ಆರಂಭಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಹೇಳಿದರು.

CM BSY
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Jun 18, 2021, 6:38 PM IST

Updated : Jun 18, 2021, 7:37 PM IST

ಬೆಂಗಳೂರು: ಮೇಕೆದಾಟು ಯೋಜನೆ ಆರಂಭಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಅನುಮತಿ ನೀಡಿದ್ದು, ಆದಷ್ಟು ಬೇಗ ಕೇಂದ್ರದ ಅನುಮತಿ ಪಡೆದು ಯೋಜನೆ ಆರಂಭಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಮೇಕೆದಾಟು ಯೋಜನೆ ಸಂಬಂಧ ಸಿಎಂ ಹೇಳಿಕೆ

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪಾಲಿಗೆ ಮೇಕೆದಾಟು ಯೋಜನೆ ಬಹಳ ಮಹತ್ವದ್ದಾಗಿದೆ. ಈ ಯೋಜನೆಯಿಂದ‌ ನಾಲ್ಕು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಬೆಂಗಳೂರಿಗೆ ಕುಡಿಯುವ ನೀರು ಬರಲಿದೆ. ಆದರೆ ತಮಿಳುನಾಡು ಸರ್ಕಾರ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಎನ್ ಜಿಟಿ ಮುಂದೆ ಅರ್ಜಿ ಸಲ್ಲಿಸಿತ್ತು ಎಂದರು.

ಈ ದಿನ ಎನ್​ಜಿಟಿ ನಮ್ಮ ವಾದವನ್ನು ಮನ್ನಿಸಿ ಯೋಜನೆಗೆ ಹಸಿರು ನಿಷಾನೆ ತೋರಿದೆ. ಹಾಗಾಗಿ ಕೇಂದ್ರದ ಅನುಮತಿ ಪಡೆದು, ಆದಷ್ಟು ಬೇಗ ಯೋಜನೆ ಆರಂಭಕ್ಕೆ ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Last Updated : Jun 18, 2021, 7:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.