ETV Bharat / state

'ತಮಿಳುನಾಡಿಗೆ ಕಾವೇರಿ ನೀರು ನಿಲ್ಲಿಸಿ': ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶ್ವತ್ಥನಾರಾಯಣ್ ಕಿಡಿ - Ashwatthanarayan on congress

ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Ashwatthanarayan
ಅಶ್ವತ್ಥನಾರಾಯಣ್
author img

By ETV Bharat Karnataka Team

Published : Aug 22, 2023, 5:51 PM IST

Updated : Aug 22, 2023, 6:35 PM IST

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪೂರ್ವಾಪರ ವಿವೇಚನೆ ಇಲ್ಲದೇ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಇದು ಖಂಡನಾರ್ಹ. ಈ ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಆಗ್ರಹಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಂಡ್ಯ ಭಾಗದ ರೈತರಿಗೆ ಅನ್ಯಾಯ ಮಾಡಲಾಗಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ರಾಜ್ಯದ ನೀರಾವರಿ ಸಚಿವರು ಮತ್ತು ಕೃಷಿ ಸಚಿವರಿಗೆ ರಾಜ್ಯದ ರೈತರ ಕುರಿತು ಕಾಳಜಿಯೇ ಇಲ್ಲ ಎಂದು ಟೀಕಿಸಿದರು. ತಮಿಳುನಾಡು ಸರ್ಕಾರ ರಿಟ್ ಅರ್ಜಿ ದಾಖಲಿಸಿದ ತಕ್ಷಣವೇ ರಾಜ್ಯ ಕಾಂಗ್ರೆಸ್​ ಸರ್ಕಾರ ಯಥೇಚ್ಛವಾಗಿ ನೀರು ಬಿಟ್ಟಿದ್ದಾರೆ. ಸುಮಾರು 12-13 ಟಿಎಂಸಿ ನೀರನ್ನು ಬಿಡಲಾಗಿದೆ ಎಂದರು.

ತಮಿಳುನಾಡಿನ ಕುರುವೈ ಬೆಳೆಗೆ 32 ಟಿಎಂಸಿ ನೀರನ್ನು ಮಾತ್ರ ಕೊಡಬೇಕಿದೆ. 1.8 ಲಕ್ಷ ಹೆಕ್ಟೇರ್​ನಲ್ಲಿ ಮಾತ್ರ ಬೆಳೆ ಬೆಳೆಯಬೇಕೆಂದು ಸೂಚಿಸಿದೆ. ಆದರೆ, ಅರ್ಜಿ ಹಾಕುವುದಕ್ಕೂ ಮೊದಲು 7.4 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದಿದ್ದು, ತಮಿಳುನಾಡಿನ ಡ್ಯಾಂನಲ್ಲಿದ್ದ 30-32 ಟಿಎಂಸಿ ನೀರನ್ನು ಖಾಲಿ ಮಾಡಿ, ಬಳಿಕ ನೀರಿಗಾಗಿ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದೂರಿದರು.

ಎಂ.ಬಿ.ಪಾಟೀಲ್, ಬಸವರಾಜ ಬೊಮ್ಮಾಯಿ ಅವರು ನೀರಾವರಿ ಸಚಿವರಾಗಿದ್ದ ವೇಳೆ ಇದೇ ರೀತಿಯ ಸಂಕಷ್ಟ ಬಂದಿತ್ತು. ಆಗ ತಮಿಳುನಾಡಿನ ಬೆಳೆ ಪ್ರಮಾಣದ ವಿವರವನ್ನು ಪಡೆದು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿ ಸ್ಟೇ ಪಡೆಯಲಾಗಿತ್ತು ಎಂದು ವಿವರಿಸಿದರು. ಆದ್ರೆ ಇಂದಿನ ನೀರಾವರಿ ಸಚಿವರಿಗೆ ಜವಾಬ್ದಾರಿಯೇ ಇಲ್ಲ. ತಮಿಳುನಾಡು ಸರ್ಕಾರ ಅರ್ಜಿ ಹಾಕಿದಾಕ್ಷಣ ನೀರು ಬಿಡುಗಡೆ ಮಾಡಿ, ರೈತರು ಬೇಕಿದ್ದರೆ ಸುಪ್ರೀಂ ಕೋರ್ಟಿಗೆ ಹೋಗಿ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ, ಇನ್ನೊಂದೆಡೆ ಕೃಷಿ ಸಚಿವರು ನೀರು ಬಿಡುಗಡೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ್, ತಮಿಳುನಾಡಿಗೆ ನೀರು ಬಿಡುಗಡೆಯನ್ನು ಈ ಕೂಡಲೇ ನಿಲ್ಲಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಮೂಲ ಸೌಕರ್ಯಗಳಿಲ್ಲದೆ ಬೆಳಗಾವಿಯ ಕೆಹೆಚ್​ಬಿ ಕಾಲೋನಿ ನಿವಾಸಿಗಳ ಗೋಳು.. ಪಾಲಿಕೆ ಆಯುಕ್ತರಿಂದ ಶೀಘ್ರ ಕ್ರಮದ ಭರವಸೆ

ಕಾಲುವೆಯ ಕೊನೆಭಾಗಕ್ಕೂ ತಲುಪುವಂತೆ ಸಾಕಷ್ಟು ನೀರು ಕೊಡಬೇಕು. ನೀರು ಸ್ಟಾಕ್ ಮಾಡಿ ಇಟ್ಟುಕೊಳ್ಳಿ. ತಮಿಳುನಾಡು ಸಿಎಂ ಸ್ಟಾಲಿನ್ ಜೊತೆ ಒಳ ಒಪ್ಪಂದ ಮಾಡಿಕೊಂಡು ನಮ್ಮ ರೈತರಿಗೆ ದ್ರೋಹ ಬಗೆಯದಿರಿ ಎಂದು ಸಲಹೆ ನೀಡಿದರು. ಇದೇ ವೇಳೆ, ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಎಂದು ಹೇಳಿಕೊಂಡು ನೀರಾವರಿ ಇಲಾಖೆಯನ್ನು ಮರೆಯಬಾರದೆಂದೂ ತಿಳಿಸಿದರು.

ಇದನ್ನೂ ಓದಿ: ಕಾವೇರಿ-ಮಹದಾಯಿ ಜಲವಿವಾದದ ಬಗ್ಗೆ ಚರ್ಚಿಸಲು ನಾಳೆ ಸರ್ವಪಕ್ಷಗಳ ಸಭೆ.. ಪತ್ರದ ಮೂಲಕ ಸಭೆಗೆ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

ಸುದ್ದಿಗೋಷ್ಟಿಯಲ್ಲಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣ ಗೌಡ ಉಪಸ್ಥಿತರಿದ್ದರು.

Last Updated : Aug 22, 2023, 6:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.