ಬೆಂಗಳೂರು: ರಾಜಕಾಲುವೆ ತಡೆಗೋಡೆ ಕುಸಿತದ ಸ್ಥಳಕ್ಕೆ ಸ್ಥಳೀಯ ಶಾಸಕ ರವಿ ಸುಬ್ರಹ್ಮಣ್ಯ ಆಗಮಿಸಿ ಪರಿಶೀಲನೆ ನಡೆಸಿದರು. ಇಲ್ಲಿ ಕಳಪೆ ಕಾಮಗಾರಿ ಕುರಿತು ಹೇಳಿದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳಿಂದ ಈ ಅವಘಡ ನಡೆದಿದೆ ಎಂದು ಸ್ಥಳೀಯರು ದೂರಿದರು.
ಇದು ಕಳಪೆ ಕಾಮಗಾರಿ ಎಂಬುದರ ಕುರಿತು ತನಿಖೆಯಿಂದ ಗೊತ್ತಾಗಬೇಕಿದೆ. ಗಾಯಗೊಂಡ ವ್ಯಕ್ತಿಗಳಿಗೆ ಬಿಬಿಎಂಪಿಯಿಂದ ಚಿಕಿತ್ಸೆ ನೀಡಲಾಗುತ್ತದೆ. ಮಳೆ ಬಂದಾಗ ಅಕ್ಕ ಪಕ್ಕದ ಮನೆಗಳಿಗೆ ತೊಂದರೆ ಆಗಬಾರದೆಂದು ಇಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಆದರೆ ಅದೇ ಇಂದು ದುರ್ಘಟನೆಯಾಗಿದೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಿಬಿಎಂಪಿ ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ ಪ್ರತಿಕ್ರಿಯಿಸಿ, ಇದು ಕಳಪೆ ಕಾಮಗಾರಿನಾ ಅಥವಾ ಬೇರೆ ಕಾರಣನಾ ಎಂದು ಪರಿಶೀಲನೆ ನಡೆಸಲಾಗುವುದು. ಈ ಕಾಮಗಾರಿಯ ಗುಣಮಟ್ಟ ಪರಿಶೀಲಿಸಲು ಟಿವಿಸಿಸಿಗೆ ಆದೇಶಿಸಲಾಗಿದೆ. ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಓದಿ: ಮೂರು ಪಕ್ಷಗಳ ಏಳು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.. ಎಲ್ಲಾ ಅಭ್ಯರ್ಥಿಗಳ ಅವಿರೋಧ ಆಯ್ಕೆ ಬಹುತೇಕ ಖಚಿತ