ETV Bharat / state

ಕಾಲೇಜಿನಲ್ಲಿ ಲೇಡಿಸ್​ ಟಾಯ್ಲೆಟ್ ಗೆ ನುಗ್ಗಿದ ಅಪರಿಚಿತ.. ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ - ಕಾಲೇಜಿನಲ್ಲಿ ಲೇಡಿಸ್​ ಟಾಯ್ಲೆಟ್ ಗೆ ನುಗ್ಗಿದ ಅಪರಿಚಿತ

ಬೆಂಗಳೂರಿನ ಕಾಲೇಜಿನಲ್ಲಿ ಮಹಿಳಾ ಶೌಚಾಲಯಕ್ಕೆ ನುಗ್ಗಿದ ಯುವಕ - ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ - ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನೆ - ಯುವಕನ ಬಂಧನಕ್ಕೆ ಪೊಲೀಸರ ಶೋಧ

stranger-entered-the-ladies-toilet-in-college-bengaluru-protest-by-college-students
ಲೇಡಿ ಟಾಯ್ಲೆಟ್ ಗೆ ನುಗ್ಗಿದ ಅಪರಿಚಿತ: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ
author img

By

Published : Jan 11, 2023, 3:38 PM IST

ಬೆಂಗಳೂರು : ಕಾಲೇಜೊಂದರ ಮಹಿಳಾ ಶೌಚಾಲಯಕ್ಕೆ ನುಗ್ಗಿದ ಕಿಡಿಗೇಡಿಯೋರ್ವ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯಾ ಕಾಲೇಜಿನ‌ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮತ್ತೊಂದೆಡೆ ಕಿಡಿಗೇಡಿಯನ್ನು ಬಂಧಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಘಟನೆ ವಿವರ.. ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ವಿಜಯಾ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಶೌಚಾಲಯಕ್ಕೆ ಹೋಗಿದ್ದರು. ಈ ವೇಳೆ ಶೌಚಾಲಯದ ಒಳಗೆ ಅಪರಿಚಿತ ಯುವಕ ಇರುವುದು ಗೊತ್ತಾಗಿದೆ. ಈ ವೇಳೆ ಯುವತಿಯನ್ನು ನೋಡುತ್ತಿದ್ದಂತೆ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಆತಂಕಕ್ಕೊಳಗಾದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದಾಳೆ. ಬಳಿಕ ಗಾಬರಿಗೊಂಡ ಯುವಕ ಶೌಚಾಲಯದ ಬಾಗಿಲಿಗೆ ಚಿಲಕ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾಲೇಜಿನ ಲೇಡಿಸ್ ಟಾಯ್ಲೆಟ್ ಗೆ‌‌‌ ನುಗ್ಗಿ ಅಸಭ್ಯ ವರ್ತನೆ ತೋರಿದ ಯುವಕನನ್ನು ಕೂಡಲೇ ಬಂಧಿಸಬೇಕೆಂದು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳಿಂದ ಪ್ರತಿಭಟನೆ.. ಅಪರಿಚಿತನ ಕಿಡಿಗೇಡಿಯ ಕೃತ್ಯ ವಿರೋಧಿಸಿ ವಿಜಯಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು‌. ಬೇಕೆ ಬೇಕು ನ್ಯಾಯಬೇಕು. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪುಂಡನನ್ನು ಬಂಧಿಸಬೇಕೆಂದು ಒತ್ತಾಯಿಸಿ ಕಾಲೇಜು ಆವರಣದಲ್ಲಿ‌ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು‌‌. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕೆ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಇದನ್ನೂ ಓದಿ : ವಿವಾಹಿತೆಯನ್ನು ಕಿಡ್ನ್ಯಾಪ್ ಮಾಡಿ ರೇಪ್; ಚಂದ್ರಗಿರಿಯಲ್ಲಿ ಬೆಚ್ಚಿಬೀಳಿಸುವ ಘಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.