ETV Bharat / state

ಉಪಚುನಾವಣೆಗೆ ಕಾರ್ಯತಂತ್ರ: ಹೆಚ್​ಡಿಕೆ ನೇತೃತ್ವದಲ್ಲಿ ಶಾಸಕಾಂಗ ಸಭೆ

ನಗರದ ಖಾಸಗಿ ಹೋಟೆಲ್​ನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ಆರಂಭವಾಗಿದೆ. ಉಪಚುನಾವಣೆಗೆ ಕಾರ್ಯತಂತ್ರ ರೂಪಿಸುವುದು, ಮಾಜಿ ಸಚಿವರು, ಶಾಸಕರಿಗೆ ಚುನಾವಣಾ ಉಸ್ತುವಾರಿ ಹಂಚಿಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ ಸಭೆ
author img

By

Published : Nov 15, 2019, 10:40 PM IST

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ಕಾವು ಏರುತ್ತಿರುವ ಬೆನ್ನಲ್ಲೇ ತಮ್ಮದೇ ಆದ ಕಾರ್ಯತಂತ್ರ ರೂಪಿಸಲು ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿದೆ.

ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ರಾತ್ರಿ 9 ಗಂಟೆಗೆ ಮಾಜಿ ಸಿಎಂ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.
ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಎಂ.ಸಿ.ಮನಗೊಳಿ, ಹೆಚ್.ಡಿ.ರೇವಣ್ಣ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸತ್ಯನಾರಾಯಣ, ಡಾ.ಶ್ರೀನಿವಾಸ ಮೂರ್ತಿ, ವಿಧಾನಪರಿಷತ್ ಸದಸ್ಯರಾದ ಬೋಜೇಗೌಡ, ತಿಪ್ಪೇಸ್ವಾಮಿ, ರಮೇಶ್ ಗೌಡ, ಉಪ ಸಭಾಪತಿ ಧರ್ಮೇಗೌಡ ಮತ್ತಿತರರು ಆಗಮಿಸಿದ್ದಾರೆ.

ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಶ್ರೀನಿವಾಸ್, ಸಾ.ರಾ. ಮಹೇಶ್, ಪರಿಷತ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ, ಟಿ.ಎ. ಶರವಣ ಸೇರಿದಂತೆ ಇನ್ನೂ ಕೆಲ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆಗೆ ಹಾಜರಾಗಲಿಲ್ಲ.

ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ ಸಭೆ.

ಉಪಚುನಾವಣೆಗೆ ಕಾರ್ಯತಂತ್ರ ರೂಪಿಸುವುದು, ಮಾಜಿ ಸಚಿವರು, ಶಾಸಕರಿಗೆ ಚುನಾವಣಾ ಉಸ್ತುವಾರಿ ಹಂಚಿಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಈಗಾಗಲೇ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಸ್ಥಳೀಯವಾಗಿ ಅಭ್ಯರ್ಥಿಗಳ ಗೆಲುವಿಗೆ ಬೇಕಾದ ಕಾರ್ಯತಂತ್ರಗಳನ್ನು ರೂಪಿಸಿಕೊಳ್ಳಲು ಸಭೆಯಲ್ಲಿ ಮಾರ್ಗದರ್ಶನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಮಾಡಬೇಕಾದ ಕಾರ್ಯತಂತ್ರಗಳ ರೂಪುರೇಷೆ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತಿದೆ.

ಚುನಾವಣೆ ಸಂದರ್ಭದಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು, ಮೈತ್ರಿ ಸರ್ಕಾರದ ಅವಧಿಯಲ್ಲಿ ಮಾಡಿರುವ ರೈತರ ಸಾಲ ಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆ ಸೇರಿದಂತೆ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸುವಂತೆ ಸಭೆಯಲ್ಲಿ ಸಲಹೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Intro:ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆ ಕಾವು ಏರುತ್ತಿರುವ ಬೆನ್ನಲ್ಲೇ ತಮ್ಮದೇ ಆದ ಕಾರ್ಯತಂತ್ರ ರೂಪಿಸಲು ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಸುತ್ತಿದೆ.Body:ನಗರದ ಖಾಸಗಿ ಹೋಟೆಲ್ ನಲ್ಲಿ ಇಂದು ರಾತ್ರಿ 9 ಗಂಟೆಗೆ ಮಾಜಿ ಸಿಎಂ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಎಂ.ಸಿ.ಮನಗೊಳಿ, ಹೆಚ್.ಡಿ.ರೇವಣ್ಣ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸತ್ಯನಾರಾಯಣ, ಡಾ.ಶ್ರೀನಿವಾಸ ಮೂರ್ತಿ, ವಿಧಾನಪರಿಷತ್ ಸದಸ್ಯರಾದ ಬೋಜೇಗೌಡ, ತಿಪ್ಪೇಸ್ವಾಮಿ, ರಮೇಶ್ ಗೌಡ, ಉಪ ಸಭಾಪತಿ ಧರ್ಮೇಗೌಡ ಮತ್ತಿತರರು ಆಗಮಿಸಿದ್ದಾರೆ.
ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಶ್ರೀನಿವಾಸ್, ಸಾ.ರಾ. ಮಹೇಶ್ , ಪರಿಷತ್ ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ, ಟಿ.ಎ. ಶರವಣ ಸೇರಿದಂತೆ ಇನ್ನೂ ಕೆಲ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆಗೆ ಹಾಜರಾಗಲಿಲ್ಲ.
ಉಪಚುನಾವಣೆಗೆ ಕಾರ್ಯತಂತ್ರ ರೂಪಿಸುವುದು , ಮಾಜಿ ಸಚಿವರು, ಶಾಸಕರಿಗೆ ಚುನಾವಣಾ ಉಸ್ತುವಾರಿ ಹಂಚಿಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಈಗಾಗಲೇ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಸ್ಥಳೀಯವಾಗಿ ಅಭ್ಯರ್ಥಿಗಳ ಗೆಲುವಿಗೆ ಬೇಕಾದ ಕಾರ್ಯತಂತ್ರಗಳನ್ನು ರೂಪಿಸಿಕೊಳ್ಳಲು ಸಭೆಯಲ್ಲಿ ಮಾರ್ಗದರ್ಶನ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಮಾಡಬೇಕಾದ ಕಾರ್ಯತಂತ್ರಗಳ ರೂಪುರೇಷೆ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತಿದೆ.
ಉಪಚುನಾವಣೆ ನಡೆಯುವ ಕ್ಷೇತ್ರಗಳ ಅಕ್ಕಪಕ್ಕದ ಕ್ಷೇತ್ರಗಳ ಮುಖಂಡರು, ಆಯಾ ಜಿಲ್ಲಾಧ್ಯಕ್ಷರು, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಚುನಾವಣೆಯ ಜವಾಬ್ದಾರಿ ನೀಡಲು ಉದ್ದೇಶಿಸಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ದೂರವಿಟ್ಟು, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಅಗತ್ಯ ಕಾರ್ಯತಂತ್ರ ರೂಪಿಸುವ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆ.
ಚುನಾವಣೆ ಸಂದರ್ಭದಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿ ಮಾಡಿರುವ ಅಭಿವೃದ್ಧಿಕಾರ್ಯಗಳು, ಮೈತ್ರಿ ಸರ್ಕಾರದ ಅವಧಿಯಲ್ಲಿ ಮಾಡಿರುವ ರೈತರ ಸಾಲ ಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆ ಸೇರಿದಂತೆ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸುವಂತೆ ಸಭೆಯಲ್ಲಿ ಸಲಹೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.