ಬೆಂಗಳೂರು: ನಗರದಲ್ಲಿ ಪೊಲೀಸರು ಹಾಗೂ ಸರ್ಕಾರಿ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳಿಗೆ ಕರ್ಫ್ಯೂ ವೇಳೆಯಲ್ಲಿ ತೊಂದರೆ ಕೊಡುತ್ತಿದ್ದಾರೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ ದೂರಿದ್ದಾರೆ.
ಬೀದಿ ಬದಿ ವ್ಯಾಪಾರಿಗಳಲ್ಲಿ ಮಹಿಳೆಯರು, ವಿಧವೆಯರು, ಅಂಗವಿಕಲರು ಹಾಗು ಹಿರಿಯ ನಾಗರಿಕರು ಇದ್ದು, ಕೊರೊನಾ ಕರ್ಫ್ಯೂ ಸಂದರ್ಭದಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಕರ್ನಾಟಕ ಸರ್ಕಾರವು ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದೆ.
ಹಾಗೆಯೇ ಇತರ ವಸ್ತುಗಳನ್ನು ಮಾರುವ ಬೀದಿ ಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.