ETV Bharat / state

ಮೇಕೆದಾಟು ಪಾದಯಾತ್ರೆ ಕೈಬಿಟ್ಟ ಕೆಪಿಸಿಸಿ : ಎಸ್ಒಪಿ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಸೂಚನೆ

ಕೋವಿಡ್ ಏರಿಕೆ ನಡುವೆ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಗೊಂಡಿರುವ ಕ್ರಮ ಪ್ರಶ್ನಿಸಿ ನಗರದ ತಿಂಡ್ಲು ನಿವಾಸಿ ಎ.ವಿ ನಾಗೇಂದ್ರ ಪ್ರಸಾದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು..

author img

By

Published : Jan 14, 2022, 4:02 PM IST

ಮೇಕೆದಾಟು ಪಾದಯಾತ್ರೆ ಕೈಬಿಟ್ಟ ಕೆಪಿಸಿಸಿ:
ಮೇಕೆದಾಟು ಪಾದಯಾತ್ರೆ ಕೈಬಿಟ್ಟ ಕೆಪಿಸಿಸಿ

ಬೆಂಗಳೂರು : ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಕೆಪಿಸಿಸಿ ತನ್ನ ಮೇಕೆದಾಟು ಪಾದಯಾತ್ರೆ ಕೈಬಿಟ್ಟಿರುವುದಾಗಿ ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದೆ.

ಇದೇ ವೇಳೆ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲ ಜಿಲ್ಲೆಗಳಿಗೆ ಅನ್ವಯಿಸುವಂತೆ ಜನವರಿ 4ರಂದು ಜಾರಿ ಮಾಡಿರುವ ಎಸ್ಒಪಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮತ್ತು ಕೋವಿಡ್ ನಡುವೆ ಯಾವುದೇ ರಾಜಕೀಯ ಪಕ್ಷಗಳಿಗೆ ರ್ಯಾಲಿ, ಪ್ರತಿಭಟನೆ, ಧರಣಿಗಳಿಗೆ ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.

ಕೋವಿಡ್ ಏರಿಕೆ ನಡುವೆ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಗೊಂಡಿರುವ ಕ್ರಮ ಪ್ರಶ್ನಿಸಿ ನಗರದ ತಿಂಡ್ಲು ನಿವಾಸಿ ಎ.ವಿ ನಾಗೇಂದ್ರ ಪ್ರಸಾದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕೆಪಿಸಿಸಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಪೀಠಕ್ಕೆ ಮಾಹಿತಿ ನೀಡಿ, ಕೋವಿಡ್ ಏರಿಕೆ ಹಾಗೂ ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ ವ್ಯಕ್ತಪಡಿಸಿದ ಅಭಿಪ್ರಾಯ ಗೌರವಿಸಿ ಕೆಪಿಸಿಸಿ ತನ್ನ 10 ದಿನಗಳ ಪಾದಯಾತ್ರೆಯನ್ನು ರದ್ದುಪಡಿಸಿದೆ ಎಂದು ತಿಳಿಸಿದರು. ಅಲ್ಲದೇ, ರಾಜ್ಯ ಸರ್ಕಾರ ಕಾಂಗ್ರೆಸ್ ಹೊರತುಪಡಿಸಿ ಇತರೆ ಪಕ್ಷಗಳಿಗೆ ರ್ಯಾಲಿ ನಡೆಸಲು ಸಮ್ಮತಿಸುವ ಮೂಲಕ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿದರು.

ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಾದಿಸಿ, ಜನವರಿ 4ರಂದು ಹೊರಡಿಸಿರುವ ನೋಟಿಫಿಕೇಷನ್ ಪ್ರಕಾರ ಎಲ್ಲ ಧರಣಿ, ರ್ಯಾಲಿ ಹಾಗೂ ಪ್ರತಿಭಟನೆಗಳು ನಿಷಿದ್ಧ ಎಂದು ತಿಳಿಸಿದರು.

ಇದನ್ನೂ ಓದಿ: ದೆಹಲಿಯಲ್ಲಿ ಸುಧಾರಿತ ಸ್ಫೋಟಕ ವಸ್ತು ಪತ್ತೆ; ನಿಷ್ಕ್ರಿಯಗೊಳಿಸಿ ಅನಾಹುತ ತಪ್ಪಿಸಿದ ಎನ್‌ಎಸ್‌ಜಿ

ಕೆಪಿಸಿಸಿ ಹಾಗೂ ಸರ್ಕಾರದ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡ ಪೀಠ, ಕಾಂಗ್ರೆಸ್ ತನ್ನ ಪಾದಯಾತ್ರೆ ರದ್ದುಪಡಿಸಿರುವುದಾಗಿ ತಿಳಿಸಿದೆ. ಹೀಗಾಗಿ, ಅರ್ಜಿಯ ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ, ಜನವರಿ 4ರಂದು ಎಲ್ಲ ಜಿಲ್ಲೆಗಳಿಗೆ ಅನ್ವಯಿಸುವಂತೆ ಯಾವುದೇ ರ್ಯಾಲಿ, ಧರಣಿ ಅಥವಾ ರಾಜಕೀಯ ಸಮಾವೇಶಗಳಿಗೆ ಅನುಮತಿ ಇಲ್ಲವೆಂದು ಹೊರಡಿಸಿರುವ ಎಸ್ಒಪಿಯನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಎಸ್ಒಪಿ ಜಾರಿಯಲ್ಲಿ ಇರುವವರೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

ಹಿಂದಿನ ವಿಚಾರಣೆ ವೇಳೆ ಕೋವಿಡ್ ನಡುವೆ ಕೆಪಿಸಿಸಿ ಪಾದಯಾತ್ರೆಗೆ ಅನುಮತಿ ಕೊಡಲಾಗಿದೆಯೇ. ಒಂದು ವೇಳೆ ಕೊಟ್ಟಿದ್ದರೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ಹೇಗೆ ಅನುಮತಿ ಕೊಟ್ಟಿರಿ. ಕೊಟ್ಟಿಲ್ಲವಾದರೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಸರ್ಕಾರಕ್ಕೆ ತೀವ್ರ ತರಾಟೆ ತೆಗೆದುಕೊಂಡಿತ್ತು.

ಇದೇ ವೇಳೆ ಯಾವ ಆಧಾರದಲ್ಲಿ ಪಾದಯಾತ್ರೆ ಕೈಗೊಂಡಿದ್ದೀರಿ. ಯಾರಿಂದ ಅನುಮತಿ ಪಡೆದಿದ್ದೀರಿ? ಎಂಬುದನ್ನು ಸ್ಪಷ್ಟಪಡಿಸಿ ಎಂದು ಕೆಪಿಸಿಸಿಗೂ ತಾಕೀತು ಮಾಡಿತ್ತು. ಈ ಕುರಿತು ಸ್ಪಷ್ಟನೆ ನೀಡುವಂತೆ ಸರ್ಕಾರ ಹಾಗೂ ಕೆಪಿಸಿಸಿಗೆ ಒಂದು ದಿನ ಗಡುವು ನೀಡಿತ್ತು. ಹೈಕೋರ್ಟ್ ಎಚ್ಚರಿಕೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪಾದಯಾತ್ರೆ ಸ್ಥಗಿತಗೊಳಿಸುವ ಕ್ರಮಕ್ಕೆ ಮುಂದಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.