ETV Bharat / state

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಸರ್ಕಾರ ಆದೇಶ: ಮುಷ್ಕರ ವಾಪಸ್ - ಷಡಕ್ಷರಿ ಹೇಳಿಕೆ

ನಾವು ಮುಷ್ಕರ ವಾಪಸ್ ಪಡೆಯುತ್ತಿದ್ದೇವೆ-ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿಕೆ.

Shadakshari
ಷಡಕ್ಷರಿ
author img

By

Published : Mar 1, 2023, 2:19 PM IST

ಬೆಂಗಳೂರು: ಸರ್ಕಾರಿ ನೌಕರರ ವೇತನವನ್ನ ಶೇ.17ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿರುವ ನಿರ್ಧಾರವನ್ನ ಸ್ವಾಗತಿಸಿರುವ ಸರ್ಕಾರಿ ನೌಕರರ ಸಂಘ ಮುಷ್ಕರವನ್ನು ವಾಪಸ್​ ಪಡೆದಿದೆ. 7ನೇ ವೇತನ ಆಯೋಗದ ವರದಿಯನ್ನ ಜಾರಿಗೊಳಿಸುವಂತೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದರು. ಮುಷ್ಕರದಿಂದ ರಾಜ್ಯದಾದ್ಯಂತ ಸರ್ಕಾರಿ ಸೇವೆಗಳಲ್ಲಿ ಭಾರಿ ವ್ಯತ್ಯಯವಾದ ಪರಿಣಾಮ ಕೆಲವೆಡೆ ಸಮಸ್ಯೆಗಳು ಕಂಡುಬಂದವು. ರೋಗಿಗಳು ಪರದಾಡಿದರು.

ಸರ್ಕಾರಿ ನೌಕರರ ಮುಷ್ಕರದ ಕುರಿತು ಸಭೆ ನಡೆಸಿದ ಬಳಿಕ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ನೌಕರರ ವೇತನವನ್ನ ಶೇ.17ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಮಾದ್ಯಮಗೋಷ್ಟಿ ನಡೆಸಿ ಮುಷ್ಕರ ವಾಪಸ್ ಪಡೆದಿರುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: 17% ಬದಲು ಶೇ.20 ರಷ್ಟು ವೇತನ ಹೆಚ್ಚಿಸಿ: ಹಣಕಾಸು ಇಲಾಖೆಗೆ ಮನವಿ ಮಾಡಿದ ಸರ್ಕಾರಿ ನೌಕರರ ಸಂಘ

ಬೆಂಗಳೂರಿನಲ್ಲಿ ಮಾತನಾಡಿದ ಸಿ.ಎಸ್. ಷಡಕ್ಷರಿ, ವೇತನ ಹೆಚ್ಚಳದ ಜತೆಗೆ ರಾಜ್ಯ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ವ್ಯವಸ್ಥೆ ಜಾರಿಗೆ ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. 40 ಲಕ್ಷ ಕುಟುಂಬಗಳಿಗೆ ಇದರ ಲಾಭ ಆಗಲಿದೆ. ಇಂದಿನ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆ ಆಗಿದೆ. ನಮಗೆ ಈಗ ಸರ್ಕಾರ ನೀಡಿರುವ ಮಧ್ಯಂತರ ಪರಿಹಾರವನ್ನ ನಾವು ಒಪ್ಪಿದ್ದೇವೆ. ಈಗ ಸರ್ಕಾರ ಕೊಟ್ಟ ನಿರ್ಧಾರ ಸಮಾಧಾನ ತಂದಿದೆ. ಸದ್ಯ ಸರ್ಕಾರದ ಇತಿಮಿತಿ ಗಮನಿಸಿ ನಾವು ಈ ತೀರ್ಮಾನವನ್ನ ಒಪ್ಪಿದ್ದೇವೆ. ಆದ್ದರಿಂದ ತಕ್ಷಣದಿಂದಲೇ ನಾವು ಮುಷ್ಕರ ವಾಪಸ್ ಪಡೆಯುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಶೇ.17ರಷ್ಟು ವೇತನ ಹೆಚ್ಚಳ : 19.11.2022ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಲಾಗಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.. ಶೇ.17ರಷ್ಟು ವೇತನ ಹೆಚ್ಚಳ, ನಿವೃತ್ತ ನೌಕರರಿಗೂ ವೇತನ ಪರಿಷ್ಕರಣೆ ಅನ್ವಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.