ETV Bharat / state

ಗುತ್ತಿಗೆ, ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸಚಿವ ಡಾ. ಸುಧಾಕರ್‌ - Strike of medical staff

ಆರೋಗ್ಯ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ಬೇಡಿಕೆಗೆ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ- ಮುಷ್ಕರ ಕೈಬಿಟ್ಟು ಸೇವೆಗೆ ಬನ್ನಿ- ಸಚಿವ ಡಾ. ಕೆ.ಸುಧಾಕರ್‌ ಮನವಿ

strike-of-medical-staff-minister-dr-k-sudhakar-met-the-protestors
ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸಚಿವ ಡಾ.ಕೆ.ಸುಧಾಕರ್‌
author img

By

Published : Jul 7, 2022, 6:02 PM IST

ಬೆಂಗಳೂರು : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನ ಹೆಚ್ಚಳಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಸಚಿವರು ಚರ್ಚೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಇತಿಮಿತಿಯೊಳಗೆ ಎಲ್ಲಾ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸಲಾಗುವುದು. ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.

ನೌಕರರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುತ್ತದೆ : ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಖಾಯಂ ನೌಕರರಿಗೆ ಕೊಡುವಷ್ಟೇ ವೇತನವನ್ನು ತಮಗೂ ಕೊಡಬೇಕು ಎಂದು ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ 49 ಕಾರ್ಯಕ್ರಮಗಳನ್ನು ನಿರ್ದಿಷ್ಟ ಸಮಯದ ತನಕ ಮಾಡಲಿವೆ. ಹೀಗಾಗಿ ಅವರನ್ನು ಖಾಯಂ ನೌಕರರನ್ನಾಗಿ ಮಾಡಿಕೊಳ್ಳಲು ಕೆಲವು ಅಡಚಣೆಗಳಿವೆ. ಅಷ್ಟೇ ಅಲ್ಲದೆ, ಖಾಯಂ ನೌಕರರಂತೆ ಸಮಾನ ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ಆದರೆ ಈಗಿರುವ ವೇತನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ನೌಕರರು ಆರೋಗ್ಯ ವಿಮೆ ವಿಸ್ತರಣೆ ಹಾಗೂ 10 ದಿನಗಳ ವೇತನ ಸಹಿತ ರಜೆಯ ಬೇಡಿಕೆಯನ್ನು ಇಟ್ಟಿದ್ದು, ಇದಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಪ್ರತಿಭಟನಾನಿರತ ನೌಕರರು ಕೇಳಿರುವ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

ಸರ್ಕಾರಿ ಆರೋಗ್ಯ ವ್ಯವಸ್ಥೆಯ ಬಗ್ಗೆ ಜನರು ಬಹಳ ವಿಶ್ವಾಸ ಇಟ್ಟಿದ್ದಾರೆ. ಕೇವಲ ಮೂಲಭೂತ ಸೌಲಭ್ಯಗಳಿಂದ ಮಾತ್ರ ಜನರಿಗೆ ವಿಶ್ವಾಸ ಬರುವುದಿಲ್ಲ. ಬದಲಾಗಿ ಇಂತಹ ನೌಕರರಿಂದ ಆರೋಗ್ಯ ಸೇವೆಗೆ ಉತ್ತಮ ಹೆಸರು ಬಂದಿದೆ. ಅವರಿಗೆ ನೋವು ಕೊಟ್ಟು ನಾವು ಮುಂದುವರಿಯುವುದು ಅಸಾಧ್ಯ. ಕೆಲವು ಬೇಡಿಕೆgಳನ್ನು ಈಡೇರಿಸಲು ಕಾನೂನಾತ್ಮಕ, ತಾಂತ್ರಿಕ ತೊಡಕುಗಳಿವೆ. ಇವೆಲ್ಲವನ್ನೂ ಸಮರ್ಪಕವಾಗಿ ನಿಭಾಯಿಸಿ, ಸಾಧ್ಯವಿರುವ ಎಲ್ಲ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ. ದೇಶದಲ್ಲೇ ಆರೋಗ್ಯ ಸೇವೆ ನೀಡುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅದಕ್ಕೆ ಪೂರಕವಾಗಿ ಕೆಲಸ ನಡೆಯಬೇಕು. ನೌಕರರು ಮುಷ್ಕರ ಕೈ ಬಿಟ್ಟು ಶೀಘ್ರದಲ್ಲೇ ಸೇವೆಗೆ ಹಿಂದಿರುಗಬೇಕು ಎಂದು ಸಚಿವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ಆರೋಗ್ಯ ಇಲಾಖೆ ಅಧಿಕಾರಿಗಳು, ಸಂಘದ (KSHCOEA) ರಾಜ್ಯಾಧ್ಯಕ್ಷ ವಿಶ್ವರಾಧ್ಯ ಎಚ್. ಯಮೋಜಿ ಮತ್ತಿತರರು ಉಪಸ್ಥಿತರಿದ್ದರು.

ಓದಿ : ವಿದೇಶ ಪ್ರವಾಸ ಮುಗಿಸಿ ಬಂದ ಬಿಎಸ್​ವೈ: ಸಿಎಂ ಭೇಟಿ, ರಾಜಕೀಯ ವಿದ್ಯಮಾನ ಕುರಿತು ಮಾತುಕತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.