ETV Bharat / state

ಬೆಂಗಳೂರು: ಕಾಲೇಜಿನಿಂದ ಅಮಾನತು, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಕಾಲೇಜಿನಿಂದ ಅಮಾನತು ಮಾಡಿರುವುದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಡೆತ್‌ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿದ್ಯಾರ್ಥಿ ಆತ್ಮಹತ್ಯೆ
ವಿದ್ಯಾರ್ಥಿ ಆತ್ಮಹತ್ಯೆ
author img

By ETV Bharat Karnataka Team

Published : Dec 29, 2023, 10:58 PM IST

ಬೆಂಗಳೂರು: ಕಾಲೇಜಿನಿಂದ ಅಮಾನತುಗೊಂಡಿದ್ದಕ್ಕೆ ಬೇಸರಗೊಂಡು ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗರಬಾವಿಯ ಚಂದ್ರ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಾಗರಬಾವಿಯ ನಿಖಿಲ್ ಸುರೇಶ್ ಎಂದು ಗುರುತಿಸಲಾಗಿದೆ.

ನಗರದ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಮೊದಲ ವರ್ಷದ ಹೋಟೆಲ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಯಾಗಿದ್ದ ನಿಖಿಲ್, ವರ್ತನೆ ಸರಿ ಹೋಗಲಿ ಎಂದು ಕಾಲೇಜು ಆಡಳಿತ ಮಂಡಳಿ ಕೆಲಕಾಲ ​ಅಮಾನತ್ತಿನಲ್ಲಿಟ್ಟಿತ್ತು. ಇದರಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಆಗಮಿಸಿದ್ದ ಚಂದ್ರ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆದಿದೆ. ಕಾಲೇಜು ಮುಂಭಾಗ ವಿದ್ಯಾರ್ಥಿಯ ಶವವಿಟ್ಟು ಪ್ರತಿಭಟನೆ ನಡೆಸಲು ಪೋಷಕರು ಮುಂದಾಗಿದ್ದರು. ಆದರೆ ವಿಕ್ಟೋರಿಯಾ ಆಸ್ಪತ್ರೆಯಿಂದ ಶವವನ್ನು ಕಾಲೇಜಿನೆಡೆಗೆ ಸಾಗಿಸಲು ಪೊಲೀಸರು ಬಿಡುತ್ತಿಲ್ಲ ಎಂದು ಪೋಷಕರು ಆರೋಪಿಸಿದರು.

ಅಂಗಡಿಯಲ್ಲಿ ವ್ಯಕ್ತಿ ಆತ್ಮಹತ್ಯೆ (ಶಿವಮೊಗ್ಗ): ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆಯ ಲಯನ್ ಸಫಾರಿ ಮುಂಭಾಗದ ಗೂಡಂಗಡಿಯಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಅಂಗಡಿ ತೆರೆಯಲು ಮಾಲೀಕ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸಾಗರ ರಸ್ತೆಯ ಶಕ್ತಿಧಾಮದ ನಿವಾಸಿ ಸತೀಶ್ (40) ಎಂದು ಗುರುತಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೀವನದಲ್ಲಿ ಜಿಗುಪ್ಸೆ, ಜಿಮ್ ಟ್ರೈನರ್ ಆತ್ಮಹತ್ಯೆ: ಮೈಸೂರು ಜಿಲ್ಲೆಯ ನಂಜನಗೂಡು ನಗರದ ಸಿದ್ದೇಗೌಡ ಲೇಔಟ್​ನಲ್ಲಿ ಡಿ.19 ರಂದು ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಶಬರೀಶ್(35) ಮೃತರು. ನಂಜನಗೂಡಿನಲ್ಲಿ ವಜ್ರದೇಹಿ ಎಂಬ ಹೆಸರಿನ ಜಿಮ್​ನಲ್ಲಿ ಟ್ರೈನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಬರೀಶ್ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಶಿವಮೊಗ್ಗ: ಅಂಗಡಿಯಲ್ಲಿ ವ್ಯಕ್ತಿ ಆತ್ಮಹತ್ಯೆ; ಲಾರಿಯಲ್ಲಿ ಕೊಳೆತ ಶವ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.