ಬೆಂಗಳೂರು: ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಕ್ಕೆ ಅವಮಾನಗೊಂಡು ವಿದ್ಯಾರ್ಥಿಯೊಬ್ಬ ವ್ಯಾಸಂಗ ಮಾಡುತ್ತಿದ್ದ ಕಾಲೇಜಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರು ಮೂಲದ ಆದಿತ್ಯ ಪ್ರಭು (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗಿರಿನಗರ ಪಿಇಎಸ್ ಕಾಲೇಜಿನಲ್ಲಿ ಮಾನವಿಕ ಶಾಸ್ತ್ರ ದ ವಿಭಾಗದಲ್ಲಿ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದ. ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಇಂದು ಎಂದಿನಂತೆ ಕಾಲೇಜಿಗೆ ಬಂದು ಪರೀಕ್ಷೆಗೆ ಹಾಜರಾಗಿದ್ದ ಎಂಬ ಮಾಹಿತಿ ನಮಗೆ ಸಿಕ್ಕಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸರು ಹೇಳುವುದಿಷ್ಟು: ಆದಿತ್ಯ ಪ್ರಭು ಪರೀಕ್ಷೆ ವೇಳೆ ನಕಲು ಮಾಡಲು ಮೊಬೈಲ್ ಬಳಕೆ ಮಾಡಿ ಪರೀಕ್ಷಾ ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದಿದ್ದರಂತೆ, ಅಲ್ಲದೆ ಕೌನ್ಸೆಲಿಂಗ್ ಮಾಡಿಸಿ ಪೋಷಕರಿಗೆ ತಿಳಿಸಲು ಕಾಲೇಜು ಆಡಳಿತ ವಿಭಾಗ ಸಿದ್ದತೆ ನಡೆಸುತಿತ್ತು. ಅವಮಾನದಿಂದ ಜರ್ಜರಿತನಾಗಿದ್ದ ಆದಿತ್ಯಗೆ ಪೋಷಕರಿಗೆ ತಿಳಿಸಿದರೆ ಬೈಯಲಿದ್ದಾರೆ ಎಂದು ಭಾವಿಸಿ ಪರೀಕ್ಷಾ ಕೇಂದ್ರದಿಂದ ಹೊರಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
’’ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಶವವನ್ನ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋ ರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಸಿಸಿಟಿವಿ ದೃಶ್ಯ ಪರಿಶೀಲಿಸಲಾಗುವುದು, ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೋಷಕರು ಸಹ ಇಲ್ಲೇ ಇದ್ದಾರೆ. ಕಾಲೇಜು ಆಡಳಿತ ಮಂಡಳಿಯವರ ಹೇಳಿಕೆ ಕೂಡಾ ಪಡೆಯಲಾಗಿದೆ. ತನಿಖೆ ನಂತರವೇ ಕಾನೂನು ಕ್ರಮ ಜರುಗಿಸಲಾಗುವುದು‘‘ ಎಂದು ನಗರ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.
ಓದಿ: ದಾರುಣ.. ತಂಗಿಯ ಮುಂದೆ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ವಿದ್ಯಾರ್ಥಿಗಳು!
ದೊಡ್ಡಬಳ್ಳಾಪುರದಲ್ಲಿ ಶಿಕ್ಷಕಿ ಆತ್ಮಹತ್ಯೆಗೆ ಶರಣು: ಮದುವೆಯಾಗಿ 13 ವರ್ಷವಾಗಿದ್ದರೂ ಮಕ್ಕಳಗಾದ ಚಿಂತೆಯಿಂದ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ 15ರಂದು ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಘಟನೆ ನಡೆದಿದೆ. ತಾಲೂಕಿನ ತುರುವನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಎನ್.ಟಿ.ಜ್ಯೋತಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಹಿಳೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದವರು, 13 ವರ್ಷಗಳ ಹಿಂದೆ ಚಿತ್ರದುರ್ಗದ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷನನ್ನ ಮದುವೆಯಾಗಿದ್ರು.
ಪತಿ ಕೆ.ಯು.ವಿರೂಪಾಕ್ಷ ಅವರು, ಜುಲೈ14ರಂದು ಬೆಳಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ, ಜ್ಯೋತಿ ಮನೆಯಲ್ಲಿ ಒಬ್ಬರೇ ಇದ್ದರು. ಜುಲೈ 15ರ ಬೆಳಗ್ಗೆ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಈ ಪ್ರಕರಣ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.