ETV Bharat / state

ಬೆಂಗಳೂರು: ಬಸ್ಕಿ ಹೊಡೆಸಿದ್ದಾರೆಂದು ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿ ದೂರು

complaint against college principal: ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲೇಜಿನ ಕಾರಿಡಾರಿನಲ್ಲಿ ಬಸ್ಕಿ ಹೊಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪ್ರಾಂಶುಪಾಲರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

student-complaint-against-college-principal-in-bengaluru
ಬೆಂಗಳೂರು: ಬಸ್ಕಿ ಹೊಡೆಸಿದ್ದಾರೆಂದು ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿ ದೂರು
author img

By ETV Bharat Karnataka Team

Published : Nov 22, 2023, 9:11 PM IST

ಬೆಂಗಳೂರು: ಕಾಲೇಜಿನಲ್ಲಿ ನಡೆದಿದ್ದ ಗಲಾಟೆ ಸಂಬಂಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲೇಜಿನ ಕಾರಿಡಾರಿನಲ್ಲಿ ಬಸ್ಕಿ ಹೊಡೆಸಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಯುವತಿ ನೀಡಿದ ದೂರು ಆಧರಿಸಿ ವಿಧಾನಸೌಧ ಠಾಣೆ ಪೊಲೀಸರು ಎಸ್​​ಜೆಪಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

2 ನೇ ವರ್ಷದ ಡಿಪ್ಲೊಮಾ ಮೆಕ್ಯಾನಿಕಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಕಳೆದ ತಿಂಗಳು 17 ರಂದು ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದಿತ್ತು. ದೂರು ನೀಡಿದ ಯುವತಿಯ ವಿಚಾರಕ್ಕಾಗಿ ಈ ಗಲಾಟೆ ಆಗಿದೆ ಎಂದೇ ಭಾವಿಸಲಾಗಿತ್ತು. ಈ ಬಗ್ಗೆ ಪ್ರಾಂಶುಪಾಲರು ಪ್ರಶ್ನಿಸಿದ್ದಲ್ಲದೇ, ಪೋಷಕರ ಗಮನಕ್ಕೆ ತಂದಿದ್ದರು. ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ಸಹ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದರು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ದೂರು ನೀಡದಂತೆ ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರು ಮನವಿ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಅವಾಚ್ಯ ಶಬ್ಧಗಳಿಂದ ನಿಂದಿಸಿ ಬಸ್ಕಿ ಹೊಡೆಸಿದ ಆರೋಪ : ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಸಂಬಂಧ ತನ್ನನ್ನ ಗುರಿಯಾಗಿಸಿಕೊಂಡು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಕಾಲೇಜಿನಲ್ಲಿ ನಡೆದ ಗಲಾಟೆಗೂ ತನಗೂ ಸಂಬಂಧ ಇಲ್ಲದಿದ್ದರೂ ತನ್ನನ್ನ ಕರೆಯಿಸಿ ಬೈದಿದ್ದಾರೆ. ಶೌಚಾಲಯ ಬಳಿ ಕರೆದು ವೈದ್ಯಕೀಯ ಪರೀಕ್ಷೆ ನಡೆಸುವುದಾಗಿ ತಿಳಿಸಿ, ಎಲ್ಲರೂ ಒಡಾಡುವ ಸ್ಥಳದಲ್ಲಿ ಬಸ್ಕಿ ಹೊಡೆಸಿ ಮಾನ ಹಾನಿ ಮಾಡಿದ್ದಾರೆ. ಅಲ್ಲದೆ, ಸ್ನೇಹಿತರ ಜೊತೆಗೆ ಇರುವ ವಿಡಿಯೋ ಸೆರೆ ಹಿಡಿದು ಪೋಷಕರಿಗೆ ತೋರಿಸಿ, ತನ್ನ ನಡವಳಿಕೆ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಜೊತೆಗೆ ಪ್ರಾಂಶುಪಾಲರು ಟಿ.ಸಿ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಠಾಣೆಗೆ ಕರೆಯಿಸಿ ಹೇಳಿಕೆ ಪಡೆದ ಪೊಲೀಸರು : ಯುವತಿ ಹಾಗೂ ಪೋಷಕರ ಹೇಳಿಕೆ ದಾಖಲಿಸಿಕೊಂಡ ಪೊಲೀಸರು ಗಲಾಟೆ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಠಾಣೆಗೆ ಕರೆಯಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಆರೋಪಿತರಿಗೆ ಸಮನ್ಸ್ ಜಾರಿ ಮಾಡಿ, ಅವರ ಹೇಳಿಕೆ ದಾಖಲಿಸಿಕೊಂಡ ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಶಾಲೆಯಲ್ಲಿ ಬಸ್ಕಿ ಹೊಡೆಯುವಾಗ ಪ್ರಜ್ಞೆ ತಪ್ಪಿ 4ನೇ ತರಗತಿ ವಿದ್ಯಾರ್ಥಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.