ETV Bharat / state

ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಬಿದ್ದ ವಿದ್ಯಾರ್ಥಿನಿ ಸಾವು.. ಹುಟ್ಟುಹಬ್ಬದ ಮರುದಿನವೇ ದುರಂತ - ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ

ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.

student-dies-after-falling-into-sea-from-someshwar-rudrapade
ಮಂಗಳೂರು:ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಬಿದ್ದು ವಿದ್ಯಾರ್ಥಿನಿ ಸಾವು
author img

By

Published : May 10, 2023, 7:22 PM IST

ಉಳ್ಳಾಲ (ಮಂಗಳೂರು): ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ಬುಧವಾರ ನಡೆದಿದೆ. ಮಂಗಳೂರಲ್ಲಿ ಬಿಕಾಂ ಓದುತ್ತಿರುವ, ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಕಾವೇರಿ ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿಂದ ಸಮುದ್ರ ತೀರಕ್ಕೆ ವಿಹಾರಕ್ಕೆ ಹೋಗಿದ್ದರು.

ಸ್ನೇಹಿತೆಯರಿಬ್ಬರು ಸಮುದ್ರ ತೀರದ ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಕಾವೇರಿ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾಳೆ. ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಈಜು ರಕ್ಷಕ ಸಿಬ್ಬಂದಿ ಮೋಹನ್ ಚಂದ್ರ, ಸ್ಥಳೀಯ ಮೀನುಗಾರರಾದ ಯೋಗೀಶ್, ಪ್ರವೀಣ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ್ ಮತ್ತು ಸ್ಥಳೀಯರು ಸೇರಿ ಸಮುದ್ರದಲ್ಲಿ ಈಜಾಡಿ ಕಾವೇರಿಯನ್ನು ದಡಕ್ಕೆ ಎಳೆ ತಂದರೂ ಅಷ್ಟರಲ್ಲಿ ಕಾವೇರಿಯ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಕಾವೇರಿ ಪೋಷಕರು ಕೂಲಿ ಕಾರ್ಮಿಕರಾಗಿದ್ದು ಮಂಗಳೂರಿನ ಉರ್ವ ಸ್ಟೋರ್​ನಲ್ಲಿ ಅನೇಕ ವರ್ಷಗಳಿಂದ ನೆಲೆಸಿದ್ದಾರೆ. ವಿದ್ಯಾರ್ಥಿನಿ ಮಂಗಳೂರು ನಗರದ ಸ್ವಸ್ಥಿಕ್ ಕಾಲೇಜನಲ್ಲಿ ಬಿಕಾಂ ವ್ಯಾಸಂಗದ ಜೊತೆಗೆ ಸಿಎ ಅಧ್ಯಯನ ನಡೆಸುತ್ತಿದ್ದರು. ಮೃತ ಕಾವೇರಿ ಜೊತೆ ಬಂದಿದ್ದ ಬಾಲ್ಯ ಸ್ನೇಹಿತೆ ಕಾವೇರಿಯೂ ಕೂಡ ಮಂಗಳೂರು ನಗರದ ಕಾಲೇಜೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಾಳೆ. ಇನ್ನು ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಮೃತ ಕಾವೇರಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ:ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್​ ಆರೋಪಿ!

ಹೊಳೆಗೆ ಇಳಿದು ನೀರುಪಾಲಾಗಿದ್ದ ಇಬ್ಬರು ವಿದ್ಯಾರ್ಥಿನಿಯರು: ಇತ್ತೀಚಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಸಮೀಪದ ಕೇನ್ಯ ಕಣ್ಕಲ್​ನ ಹೊಳೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿತ್ತು. ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ಮೃತಪಟ್ಟಿದ್ದರು. ಇವರು ಬೆಂಗಳೂರಿನಲ್ಲಿ ವಾಸಿವಾಗಿದ್ದರು. ಊರಿನಲ್ಲಿ ನಡೆಯುವ ಕಾರ್ಯಕ್ರಮವೊಂದರ ನಿಮಿತ್ತ ಬಳ್ಪಕ್ಕೆ ಬಂದಿದ್ದರು.

ಇದನ್ನೂ ಓದಿ:ಕೇರಳ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ.. ಸಟ್ಲೆಜ್​ ನದಿಯಲ್ಲಿ ದೋಣಿ ಮಗುಚಿ ಇಬ್ಬರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.