ಬೆಂಗಳೂರು: ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಕಾಲೇಜು ಫ್ರೆಶರ್ ಡೇ ಕಾರ್ಯಕ್ರಮಕ್ಕೆ ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ವೇದಿಕೆ ಮೇಲೆಯೇ ಕುಸಿದು ಬಿದ್ದು, ಅನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜ್ನಲ್ಲಿ ನಿನ್ನೆ ಈ ಘಟನೆ ನಡೆದಿದೆ. 21 ವರ್ಷದ ಶಾಲಿನಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಎಂಬಿಎ ಓದುತ್ತಿದ್ದ ಈಕೆ ನಿನ್ನೆ ಕಾಲೇಜಿನಲ್ಲಿ ಕಾರ್ಯಕ್ರಮಕ್ಕಾಗಿ ವೇದಿಕೆಯಲ್ಲಿ ರ‍್ಯಾಂಪ್ ವಾಕ್ ಅಭ್ಯಾಸ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದಾಳೆ. ಕೂಡಲೇ ಕಾಲೇಜು ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶಾಲಿನಿ ಸಾವನ್ನಪ್ಪಿದ್ದಾಳೆ ಎಂದು ಪೀಣ್ಯ ಪೊಲೀಸರು ತಿಳಿಸಿದ್ದಾರೆ.