ಬೆಂಗಳೂರು : ರಾಯುಚೂರು ಇಂಜಿನಿಯರ್ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಬೇಕು ಎಂದು ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ವಿವಿದ ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿದವು.
ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಯಾಗಬೇಕು. ವಿದ್ಯಾರ್ಥಿನಿ ಸಾವು ಆತ್ಮಹತ್ಯೆ ಅಲ್ಲ, ಕೊಲೆಯಾಗಿದ್ದು ನಿಷ್ಪಕ್ಷಪಾತ ತನಿಖೆಯಾಗಿ, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು. ಸಂಘಟನೆಗಳಾದ ಅಖಿಲ ಭಾರತ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್, ಅಖಿಲ ಭಾರತ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ , ಹಾಗೂ ಅಖಿಲ ಭಾರತ ಸಾಂಸ್ಕೃತಿಕ ಮಹಿಳಾ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತ
2012 ರಲ್ಲಿ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಿಂದ ಇಂದಿನ ವರೆಗೂ ಮಹಿಳೆಯರ ಮೇಲೆ ಅತ್ಯಾಚಾರ ದೌರ್ಜನ್ಯ ಮುಂದುವರೆದಿದೆ. ರಾಜಕಾರಣಿಗಳು, ಪೊಲೀಸರು, ಕಡೆಗೆ ಕೋರ್ಟ್ ಕೂಡಾ ಈ ಬಗ್ಗೆ ಗಂಭೀರವಾದ ನಡೆ ಕೈಗೊಳ್ಳುತ್ತಿಲ್ಲ. ಭೇಟಿ ಬಚಾವೋ, ಬೇಟಿ ಪಡಾವೋ ಅನ್ನುವ ಪಕ್ಷವೂ ಅಪರಾಧಿಗಳಿಗೆ ಟಿಕೆಟ್ ನೀಡ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.