ETV Bharat / state

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಪೋಕ್ಸೋ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಆರೋಪಿ ಶಿಕ್ಷಕ ಸಿ ಮಂಜುನಾಥ್​ ಅರ್ಜಿ ಸಲ್ಲಿಸಿದ್ದರು.

high court
ಹೈಕೋರ್ಟ್​
author img

By

Published : May 27, 2023, 5:34 PM IST

ಬೆಂಗಳೂರು: ದೇಶದಲ್ಲಿ ಶಿಕ್ಷಕರನ್ನು ದೇವರ ಸ್ಥಾನದಲ್ಲಿ ನೋಡಲಾಗುತ್ತದೆ. ಹೀಗಿದ್ದಾಗಲೂ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುವುದು ಘೋರ ಅಪರಾಧವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕನೊಬ್ಬನಿಗೆ ಜಾಮೀನು ನೀಡಲು ನಿರಾಕರಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಶಿಕ್ಷಕ ಸಿ.ಮಂಜುನಾಥ್​ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅಲ್ಲದೆ, ಆರೋಪಿ ಶಿಕ್ಷಕರಾಗಿದ್ದು ಸಮಾಜದಲ್ಲಿ ತಮ್ಮ ಸ್ಥಾನಮಾನ ನೋಡದೇ ಅವರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ್ದಾರೆ. ಅರ್ಜಿದಾರರ ನಡತೆಯಿಂದ ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುವಂತಾಗಿದೆ. ಜತೆಗೆ ದೇಶದಲ್ಲಿ ಶಿಕ್ಷಕರನ್ನು ದೇವರು ಸ್ಥಾನದಲ್ಲಿ ಎಂದು ಪರಿಗಣಿಸಲಾಗುತ್ತಿದ್ದು, ಅವರಿಗೆ ದೇವರಿಗೆ ನೀಡುವ ಗೌರವ ನೀಡಲಾಗುತ್ತದೆ ಎಂದು ಪೀಠ ಅಭಿಪ್ರಾಯ ಪಟ್ಟು ಅರ್ಜಿ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ ಏನು ?: ಅರ್ಜಿದಾರರು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೊರಗುಂಟೆ ಗ್ರಾಮದಲ್ಲಿ 7 ವರ್ಷಗಳ ಕಾಲ ಸಹಾಯಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಲ್ಕರಿಂದ ಆರನೇ ತರಗತಿ ವರೆಗಿನ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಎದುರಿಸುತ್ತಿದ್ದರು. ಈ ಸಂಬಂಧದ ಗ್ರಾಮಸ್ಥರು ಮಧುಗಿರಿಯ ಕ್ಷೇತ್ರ ಶಿಕ್ಷಣಾಧಿಕಾರಿಗೆ(ಬಿಇಒ) ದೂರು ನೀಡಿದ್ದರು.

ಈ ಕುರಿತಂತೆ ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ(ಸಿಡಿಪಿಒ) ಅವರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ವೇಳೆ, ಕೆಲ ವಿದ್ಯಾರ್ಥಿನಿಯರು ಸಿಡಿಪಿಒ ಎದುರಲ್ಲಿ ಶಿಕ್ಷಕ ನಮ್ಮ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಾರೆ. ಅಸಭ್ಯವಾದ ಪದಗಳನ್ನು ಬಳಸಿ ಮಾತನಾಡುತ್ತಾರೆ ಎಂಬುದಾಗಿ ಆರೋಪಿಸಿದ್ದರು.

ಈ ಸಂಬಂಧ ಬಿಇಒ ಬೊಡವನಹಳ್ಳಿ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ದೂರಿಗೆ ಸಂಬಂಧ ಪೊಲೀಸರು ಪೋಕ್ಸೊ ಕಾಯಿದೆಯಡಿ 8 (ಲೈಂಗಿಕ ದೌರ್ಜನ್ಯ) ಮತ್ತು 12 (ಲೈಂಗಿಕ ಕಿರುಕುಳ) ಅಡಿ ಪ್ರಕರಣ ದಾಖಲಿಸಿದ್ದರು. ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ತ್ವರಿತಗತಿಯ ವಿಶೇಷ ನ್ಯಾಯಾಲಯ ವಜಾಗೊಳಿಸಿತು. ಅಲ್ಲದೇ ನ್ಯಾಯಾಂಗ ಬಂಧನಕ್ಕೆ ವಹಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರ ಶಿಕ್ಷಕರನ್ನು ಪ್ರತಿನಿಧಿಸಿದ್ದ ವಕೀಲರು, ಶಾಲೆಯ ಸುತ್ತಿನ ಜಾಗದಲ್ಲಿ ಗ್ರಾಮಸ್ಥರು ಅಂಗಡಿ ನಡೆಸುತ್ತಿದ್ದಾರೆ. ಈ ಸಂಬಂಧ ಬಗ್ಗೆ ಕಳಕಳಿ ವ್ಯಕ್ತಪಡಿಸಿದ್ದರ ಪರಿಣಾಮ ತಮ್ಮ ಕಕ್ಷಿದಾರರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈ ರೀತಿಯ ಆರೋಪ ಸಂಬಂಧ ನಮ್ಮ ಕಕ್ಷಿದಾರರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಅರ್ಜಿದಾರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ತಮ್ಮ ಮಕ್ಕಳನ್ನು ಪ್ರೇರೇಪಿಸಿ ಪೊಲೀಸರಿಗೆ ಸುಳ್ಳು ಹೇಳಿಕೆ ಕೊಡಿಸಲಾಗಿದೆ. ಹೀಗಾಗಿ ಅರ್ಜಿದಾರ ಶಿಕ್ಷಕನಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು.

ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲರು, ಹಲವು ಮಕ್ಕಳ ಮೇಲೆ ಶಿಕ್ಷಕ ಕ್ರೌರ್ಯ ಎಸಗಿರುವ ಆರೋಪವಿದೆ. ಅಲ್ಲದೇ, ಪ್ರಕರಣದಲ್ಲಿ ಸಂತ್ರಸ್ತರಾಗಿರುವವರು ಯಾವುದೇ ರೀತಿಯಲ್ಲೂ ಶಾಲಾ ಆವರಣದಲ್ಲಿ ಅಂಗಡಿಯನ್ನಿಟ್ಟವರಲ್ಲ. ಜಾಮೀನು ಪಡೆಯುವುದಕ್ಕಾಗಿ ಕಟ್ಟುಕತೆ ಕಟ್ಟಿದ್ದಾರೆ. ಹೀಗಾಗಿ ಅರ್ಜಿದಾರರಿಗೆ ಜಾಮೀನು ನೀಡಬಾರದು ಎಂದು ನ್ಯಾಯ ಪೀಠಕ್ಕೆ ಮನವಿ ಮಾಡಿದ್ದರು.

ಇದನ್ನೂಓದಿ:ಅಮೆರಿಕದಲ್ಲಿ ದೀಪಾವಳಿ ಹಬ್ಬಕ್ಕೆ ಸಾರ್ವತ್ರಿಕ ರಜೆಗಾಗಿ ಮಸೂದೆ ಮಂಡನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.