ETV Bharat / state

ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆಗೆ ಸರ್ಕಾರ ತೀರ್ಮಾನ - ದ್ವಿತೀಯ ಪಿಯುಸಿ ಪರೀಕ್ಷೆ

ದ್ವಿತೀಯ ಪಿಯುಸಿ ಪರೀಕ್ಷೆ- ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ-ಸಚಿವ ಬಿ.ಸಿ ನಾಗೇಶ್.

BC Nagesh
ಸಚಿವ ಬಿ.ಸಿ. ನಾಗೇಶ್
author img

By

Published : Feb 10, 2023, 7:06 AM IST

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 'ಒಂದು ಅಂಕ' ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. ಹಾಲಿ ಇರುವ ನಿಯಮದ ಪ್ರಕಾರ, 'ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ'.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆ 'ಒಂದು ಅಂಕ'ವನ್ನೂ ಪರಿಗಣಿಸುವ ವಿದ್ಯಾರ್ಥಿ ಸ್ನೇಹಿ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ನಾಗೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶೀಘ್ರದಲ್ಲೇ ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಜೆಇಇ ಪರೀಕ್ಷೆ ಸೆಷನ್​ 1ರ ಫಲಿತಾಂಶ ಪ್ರಕಟ: ಹೀಗೆ ಫಲಿತಾಂಶ ಚೆಕ್​ ಮಾಡಿ

ಪಿಯು ಅಂತಿಮ ವೇಳಾಪಟ್ಟಿ ಪ್ರಕಟ: ದ್ವಿತೀಯ ಪಿಯುಸಿ 2023ರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾರ್ಚ್ 9ರ ಗುರುವಾರದಿಂದ ಆರಂಭವಾಗುವ ಪರೀಕ್ಷೆಯು ಮಾರ್ಚ್ 29ರ ತನಕ ನಡೆಯಲಿದೆ. ಮಧ್ಯದಲ್ಲಿ ಒಟ್ಟು 7 ದಿನಗಳಲ್ಲಿ ಪರೀಕ್ಷೆಗಳು ಇರುವುದಿಲ್ಲ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 36 ವಿವಿಧ ವಿಷಯಗಳು, ಭಾಷೆಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಮಂಡಳಿಯು ಇತ್ತೀಚೆಗೆ ಮಾಹಿತಿ ನೀಡಿತ್ತು.

ಪರೀಕ್ಷೆಯ ವೇಳಾಪಟ್ಟಿ: ಮಾರ್ಚ್ 9: ಕನ್ನಡ, ಅರೇಬಿಕ್, ಮಾ.11: ಗಣಿತ, ಶಿಕ್ಷಣಶಾಸ್ತ್ರ, ಮಾ.13: ಅರ್ಥಶಾಸ್ತ್ರ, ಮಾ.14: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ವಿಜ್ಞಾನ, ಮೂಲಗಣಿತ, ಮಾ.15: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಾ. ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೊಮೊಬೈಲ್, ಆರೋಗ್ಯರಕ್ಷಣೆ, ಸೌಂದರ್ಯ ಮತ್ತು ಕ್ಷೇಮಶಾಸ್ತ್ರ, ಮಾ. ಭೂಗೋಳ ವಿಜ್ಞಾನ, ಜೀವ ವಿಜ್ಞಾನ, ಮಾ. 20: ಇತಿಹಾಸ, ಭೌತವಿಜ್ಞಾನ, ಮಾ.21: ಹಿಂದಿ, ಮಾ.23: ಇಂಗ್ಲಿಷ್, ಮಾ. 25: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.27: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ವಿಜ್ಞಾನ, ಗೃಹ ವಿಜ್ಞಾನ, ಮಾ.29: ಸಮಾಜ ವಿಜ್ಞಾನ, ವಿದ್ಯುನ್ಮಾನ, ಗಣಕ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: 2023ರ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.