ETV Bharat / state

ಕಳೆದ ವರ್ಷದ ಬಸ್ ಪಾಸ್ ತೋರಿಸಿ ಶಾಲಾ-ಕಾಲೇಜಿಗೆ ಪ್ರಯಾಣಿಸಿ - ವಿದ್ಯಾರ್ಥಿಗಳ ಬಸ್ ಪಾಸ್​

ಎಲ್ಲಾ ವರ್ಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್​ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ - ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಶೀದಿ ಜೊತೆಗೆ ಫೆಬ್ರವರಿ 28ರವರೆಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಕ್ರಮ ಕೈಗೊಳ್ಳಲಾಗಿದೆ.

bus
bus
author img

By

Published : Jan 29, 2021, 3:26 PM IST

ಬೆಂಗಳೂರು: ಸರ್ಕಾರದ ಆದೇಶದಂತೆ 2020-21ರ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರಂತೆ ನಿಗಮದ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಜನವರಿ 31ರವರೆಗೆ ಅವಕಾಶ ಮಾಡಿಕೊಡಲಾಗಿತ್ತು.

students-can-travel-showing-last-year-bus-pass
ಕಳೆದ ವರ್ಷದ ಬಸ್ ಪಾಸ್ ತೋರಿಸಿ ಶಾಲಾ - ಕಾಲೇಜಿಗೆ ಪ್ರಯಾಣಿಸಲು ಅವಕಾಶ

ಇದೀಗ ಪಾಸ್​ಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್​ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ - ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಶೀದಿ ಜೊತೆಗೆ ನಿಗಮದ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ - ಕಾಲೇಜುಗಳಿಗೆ ತೆರಳಲು ಫೆಬ್ರವರಿ 28ರವರೆಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಕ್ರಮ ಕೈಗೊಳ್ಳಲಾಗಿದೆ.

ಅದರನ್ವಯ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಶಾಲಾ - ಕಾಲೇಜುಗಳಿಗೆ ದಾಖಲಾಗಿರುವ ಪಾವತಿ ರಶೀದಿಯೊಂದಿಗೆ ಹಳೆಯ ಬಸ್ ಪಾಸ್ ತೋರಿಸಿ, ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.