ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರು ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣದ ಚಾರ್ಜ್ ಶೀಟನ್ನು ಅಧಿಕಾರಿಗಳು ನಾಳೆ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಮೂರು ತಿಂಗಳ ಸುದೀರ್ಘ ತನಿಖೆಯ ಬಳಿಕ ಪೊಲೀಸರು 13ನೇ ಎಸಿಎಂಎಂ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. 770 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಇದಾಗಿದ್ದು, 92 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ.
ಹಾಗೆಯೇ ಇಬ್ಬರು ಐ ವಿಟ್ನೆಸ್ಗಳ 164 ಹೇಳಿಕೆಗಳನ್ನೂ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಆ್ಯಸಿಡ್ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿದ ಮೇಲೆ ತನ್ನ ಸಹೋದರನಿಗೆ ಕರೆ ಮಾಡಿದ್ದ ಆಡಿಯೋ ಸೇರಿ ಹಲವು ವಾಯ್ಸ್ ರೆಕಾರ್ಡ್ಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿತ್ತು.
ಈಗ ಅದು ಆರೋಪಿ ನಾಗೇಶನ ಧ್ವನಿ ಎಂಬುದು ಖಚಿತವಾಗಿದೆ. ಈ ಹಿಂದೆ ನಾಗೇಶ್ ಹಾಗೂ ಸಂತ್ರಸ್ತೆಯ ಹೇಳಿಕೆಯಲ್ಲಿ ನೀಡಿರುವ ಅಂಶಗಳು ಚಾರ್ಜ್ ಶೀಟ್ನಲ್ಲಿ ಉಲ್ಲೇಖವಾಗಿವೆ. ಸಾಕಷ್ಟು ಸಿಸಿಟಿವಿಗಳ ಸಾಕ್ಷಿಗಳನ್ನು ಸಹ ನಾಳೆ ಕೋರ್ಟ್ಗೆ ಸಲ್ಲಿಸಲಾಗುತ್ತದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ