ETV Bharat / state

ವಿಧಾನಮಂಡಲ, ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್​​​ ರಾಜ್​​ ಸಮಿತಿಯ ವರದಿಯಲ್ಲೇನಿದೆ? - MLA Araga Jnanendra

ಕರ್ನಾಟಕ ವಿಧಾನಮಂಡಲ, ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಸಮಿತಿಯ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಹಿರಿಯ ಶಾಸಕ ಅರಗ ಜ್ಞಾನೇಂದ್ರ ಸದನಕ್ಕೆ ವರದಿ ಒಪ್ಪಿಸಿದರು.

Submission of report to various departments to the session
ವಿಧಾನ ಮಂಡಲದಲ್ಲಿ ವಿವಿಧ ಇಲಾಖೆಗಳ ವರದಿ ಸಲ್ಲಿಕೆ
author img

By

Published : Feb 20, 2020, 11:14 PM IST

ಬೆಂಗಳೂರು: ಕರ್ನಾಟಕ ವಿಧಾನಮಂಡಲ, ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಸಮಿತಿಯ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಹಿರಿಯ ಶಾಸಕ ಅರಗ ಜ್ಞಾನೇಂದ್ರ ಸದನಕ್ಕೆ ವರದಿ ಒಪ್ಪಿಸಿದರು. ವಿಧಾನಮಂಡಲ, ಸ್ಥಳೀಯ ಸಂಸ್ಥೆಗಳ ಸಮಿತಿ ಮುಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆ ಸಲ್ಲಿಸಿರುವ ವರದಿ ಪ್ರಕಾರ, ರಾಜ್ಯದಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ ಶೇ. 20ರಷ್ಟು ಘಟಕಗಳು ನಿಷ್ಕ್ರಿಯಗೊಂಡಿವೆ. ರಾಜ್ಯದಲ್ಲಿ 5,923 ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅದರಲ್ಲಿ 5,911 ಘಟಕಗಳು ನಿರ್ಮಾಣಗೊಂಡಿವೆ. 4,746 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 1,165 ಘಟಕಗಳು ನಿಷ್ಕ್ರಿಯವಾಗಿವೆ ಎಂದು ವಿವರಿಸಲಾಗಿದೆ.

ವಿವಿಧ ಇಲಾಖೆಗಳ ವರದಿ ಸಲ್ಲಿಕೆ

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ನಿರ್ಮಿತಿ ಕೇಂದ್ರ ಸಂಸ್ಥೆಗಳಿಂದ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳಲ್ಲಿ ಗುಣಮಟ್ಟವಿಲ್ಲ. ಕಾಮಗಾರಿಗಳನ್ನು ಅಧಿಕೃತವಾಗಿ ನೀಡಿದಾಗ ಮರು ಒಪ್ಪಂದ ಇಲ್ಲದೆ ಉಪಗುತ್ತಿಗೆ ನೀಡಿ ಕಳಪೆ ಗುಣಮಟ್ಟದ ಕೆಲಸ ನಿರ್ವಹಿಸಲಾಗುತ್ತಿದೆ. ಯಾವುದೇ ಹೊಣೆಗಾರಿಕೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಮನೆ ನಿರ್ಮಾಣ ಯೋಜನೆಗಳು ತೊಂದರೆಗೊಳಗಾಗಿವೆ. ಹಲವಾರು ಪ್ರಕರಣಗಳಲ್ಲಿ ಅಧಿಕಾರಿಗಳು ತಪ್ಪು ಮಾಡಿರುವುದು ಕಂಡುಬಂದಿದ್ದರೂ ಶಿಸ್ತು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದು ಆಡಳಿತದ ದುರಂತ ಎಂದು ಸಮಿತಿ ವಿಷಾದ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಡ್ಡಾಯವಾಗಿ ಕ್ರಮ ಕೈಗೊಳ್ಳಬೇಕು. ನಷ್ಟವಾಗಿರುವ ಹಣದ ವಸೂಲಿಗೆ ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದೆ.

ಮಂಡ್ಯ ಜಿಲ್ಲೆಯ ತಾಲೂಕು ಪಂಚಾಯತ್​ಗಳು ಸೇರಿದಂತೆ ಹಲವಾರು ಪಂಚಾಯತ್​ಗಳಲ್ಲಿ ನಿರಂತರವಾಗಿ ಅವ್ಯವಹಾರ ನಡೆದಿದ್ದು, ಅವುಗಳ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಶೀಘ್ರವಾಗಿ ನಡೆಯುತ್ತಿಲ್ಲ ಎಂದು 29ನೇ ವರದಿಯಲ್ಲಿ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. 30ನೇ ವರದಿಯಲ್ಲಿ ಸಮಿತಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಲ್ಲಿನ ವೈಫಲ್ಯಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಯೋಜನೆಯಲ್ಲಿ 2009ರಿಂದ 2014ರವರೆಗೆ 2024 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮಂಜೂರಾತಿ ನೀಡಲಾಗಿದೆ. ಶಾಲಾ ಕೊಠಡಿಗಳು, ಪ್ರಯೋಗ ಶಾಲೆಗಳು, ಗ್ರಂಥಾಲಯ, ಪ್ರತ್ಯೇಕ ಶೌಚಾಲಯಗಳು, ಶಿಕ್ಷಣದ ಗುಣಮಟ್ಟ ಸುಧಾರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಲಾಗಿತ್ತು. 74 ಆದರ್ಶ ವಿದ್ಯಾಲಯಗಳು, 58 ಹೆಣ್ಣುಮಕ್ಕಳ ವಸತಿ ನಿಲಯ ನಿರ್ಮಾಣ, 254 ಉನ್ನತೀಕರಣ, 1,626 ಬಲವರ್ಧನೆ ಯೋಜನೆಗಳನ್ನು ರೂಪಿಸಲಾಗಿತ್ತು. ಈ ಯೋಜನೆಗಳ ಗುತ್ತಿಗೆ ಪಡೆದಿದ್ದ ಕಂಪನಿಗಳು ಕಾಮಗಾರಿಗಳನ್ನು ಸರಿಯಾಗಿ ನಿರ್ವಹಿಸದೆ ಕರ್ತವ್ಯಲೋಪ ಎಸಗಿವೆ. ಕಾಮಗಾರಿಗಳ ಬಗ್ಗೆ ನ್ಯಾಯಾಲಯದಲ್ಲಿ ತಕರಾರು ಇದೆ ಎಂಬ ನೆಪ ಹೇಳಲಾಗುತ್ತಿದೆ. 2016ರಲ್ಲಿ ಕಾಮಗಾರಿ ಮಂಜೂರಾಗಿದ್ದರೂ ಅದನ್ನು ಆರಂಭಿಸದೆ ಎರಡು ವರ್ಷಗಳ ಕಾಲ ಸುಮ್ಮನಿದ್ದು, ದಾವೆ ಹೂಡಲು ಅವಕಾಶ ಮಾಡಿಕೊಟ್ಟಿದ್ದೇಕೆ ಎಂದು ಪ್ರಶ್ನಿಸಲಾಗಿದೆ.

ಕೆಲವು ಹಿರಿಯ ಅಧಿಕಾರಿಗಳು ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲ ಎಂಬ ಉಡಾಫೆ ಉತ್ತರಗಳನ್ನು ನೀಡಿದ್ದಾರೆ ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಮಗಾರಿಗಳಿಗೆ ಸಂಬಂಧಪಟ್ಟ ಹಣವನ್ನು ಬಿಡುಗಡೆ ಮಾಡಬಾರದು. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.