ETV Bharat / state

ಸ್ಮಾರ್ಟ್ ಸಿಟಿ ಯೋಜನೆಗೆ ಮತ್ತೆ 4 ನಗರ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ : ಬೈರತಿ ಬಸವರಾಜ್

ಕೇಂದ್ರ ಸರ್ಕಾರ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಮತ್ತು ಬೆಂಗಳೂರು ನಗರ ಸೇರಿ ಒಟ್ಟು ಏಳು ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆ ಮಾಡಿದೆ. ಈ ಯೋಜನೆಗೆ ಮೈಸೂರು ಒಳಗೊಂಡಿಲ್ಲ. ಆದರೆ, ಮೈಸೂರು, ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

author img

By

Published : Feb 5, 2021, 5:57 PM IST

ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.
ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

ಬೆಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಮೈಸೂರು, ಕಲಬುರಗಿ ಸೇರಿದಂತೆ ರಾಜ್ಯದ ನಾಲ್ಕು ಮಹಾನಗರ ಪಾಲಿಕೆಗಳನ್ನು ಪರಿಗಣಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೇಂದ್ರದ ಅನುಮೋದನೆಗೆ ನೀರಿಕ್ಷಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

ಇಂದು ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಲ್. ನಾಗೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಮತ್ತು ಬೆಂಗಳೂರು ನಗರ ಸೇರಿ ಒಟ್ಟು ಏಳು ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆ ಮಾಡಿದೆ. ಈ ಯೋಜನೆಗೆ ಮೈಸೂರು ಒಳಗೊಂಡಿಲ್ಲ. ಆದರೆ, ಮೈಸೂರು, ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಅಭಿಯಾನದ ಮಾರ್ಗಸೂಚಿಯನ್ವಯ 21 ಅಂಶಗಳನ್ನೊಳಗೊಂಡಿದೆ. ನೈರ್ಮಲ್ಯ ಹಾಗೂ ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸಾರಿಗೆ, ಸೌರಶಕ್ತಿ, ಎಲ್‌ಇಡಿ, ಬೀದಿ ದೀಪ ಅಳವಡಿಕೆ, ನೀರು ಸರಬರಾಜು, ವಿದ್ಯುಚ್ಛಕ್ತಿ ಸರಬರಾಜು, ಕೈಗೆಟಕುವ ದರದಲ್ಲಿ ವಸತಿ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ಮೂಲಕ ಸಾರ್ವಜನಿಕ ಸೇವೆ ಒದಗಿಸುವುದು, ಇ-ಆಡಳಿತ, ಸುಸ್ಥಿರ ಪರಿಸರ, ಸಾರ್ವಜನಿಕರ ಸುರಕ್ಷತೆ, ಆರೋಗ್ಯ ಮತ್ತು ಶಿಕ್ಷಣ ಹೀಗೆ ಹಲವಾರು ವರ್ಗಗಳಿವೆ. ಅದರಂತೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಶಾಸಕ ನಾಗೇಂದ್ರ ಮಾತನಾಡಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೈಸೂರು ನಗರವು ಸ್ಮಾರ್ಟ್ ಸಿಟಿ ಯೋಜನೆಯಿಂದ ಕೈ ತಪ್ಪುವಂತಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.