ETV Bharat / state

ಕಾಮಗಾರಿಗಳ ಫೋಟೋ, ವಿಡಿಯೋ, ದಾಖಲೆಗಳ ಸಮೇತ ಸರ್ಕಾರಕ್ಕೆ ವರದಿ ಸಲ್ಲಿಸಿ: ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ - ಬಿಬಿಎಂಪಿ

''ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡಲಾಗುತ್ತದೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ. ನಾನು ಹಳ್ಳಿಯಿಂದ ಬಂದಿದ್ದರೂ ನನಗೆ ಈ ಬಗ್ಗೆ ಮಾಹಿತಿ ಕೊಡುವವರು ಇದ್ದಾರೆ. ಮಾಹಿತಿ ಪಡೆಯುವ ಶಕ್ತಿಯೂ ನನಗಿದೆ. ಕೆಲಸ ಆಗಿರುವ ಜಾಗಗಳಿಗೆ ಹೋಗಿ ಖುದ್ದು ಪರಿಶೀಲನೆ ಮಾಡೋಣ. ಕಣ್ಣಲ್ಲಿ ಕಂಡಿದ್ದು, ಮಾತ್ರವೇ ನಂಬಿಕೆಗೆ ಅರ್ಹ. ಹೀಗಾಗಿ ಕಣ್ಣಲ್ಲಿ ನೋಡಿ ನಂಬೋಣ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

DK Shivakumar
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
author img

By

Published : May 29, 2023, 6:32 PM IST

ಬೆಂಗಳೂರು: ''ಕಳೆದ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಿಧಾನಸಭೆ ಕ್ಷೇತ್ರವಾರು ಆಗಿರುವ ಕೆಲಸ, ಯಾವ ಯೋಜನೆಯಡಿ ಕೆಲಸ ಆಗಿದೆ. ಅದಕ್ಕೆ ಆಗಿರುವ ಖರ್ಚಿನ ವಿವರ ಮತ್ತು ಕೆಲಸ ಆಗಿರುವ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಸರಕಾರಕ್ಕೆ ಒದಗಿಸಬೇಕು'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ''ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗಾರಿಗಳನ್ನು ಯತಾಸ್ಥಿತಿ ಕಾಪಾಡಿ. ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕಾರ್ಯಗಳನ್ನು ತಡೆ ಹಿಡಿಯಬೇಕು. ಯಾವ ಯಾವ ಕಾಮಗಾರಿಗಳ ಕಾರ್ಯವಾಗಿದ್ದರೂ ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿದೆ ಎಂಬ ಬಗ್ಗೆ ತನಿಖೆ ಮಾಡಿ, 10 ದಿನದೊಳಗೆ ಪಟ್ಟಿ ನೀಡಬೇಕು'' ಎಂದು ಅವರು ತಾಕೀತು ಮಾಡಿದರು.

Deputy Chief Minister DK Shivakumar
ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಸೋಮವಾರ ನಡೆಯಿತು.

''ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡಲಾಗುತ್ತದೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ. ನಾನು ಹಳ್ಳಿಯಿಂದ ಬಂದಿದ್ದರೂ ನನಗೆ ಈ ಬಗ್ಗೆ ಮಾಹಿತಿ ಕೊಡುವವರು ಇದ್ದಾರೆ. ಮಾಹಿತಿ ಪಡೆಯುವ ಶಕ್ತಿಯೂ ನನಗಿದೆ. ಕೆಲಸ ಆಗಿರುವ ಜಾಗಗಳಿಗೆ ಹೋಗಿ ಖುದ್ದು ಪರಿಶೀಲನೆ ಮಾಡೋಣ. ಕಣ್ಣಲ್ಲಿ ಕಂಡಿದ್ದು, ಮಾತ್ರವೇ ನಂಬಿಕೆಗೆ ಅರ್ಹ. ಹೀಗಾಗಿ ಕಣ್ಣಲ್ಲಿ ನೋಡಿ ನಂಬೋಣ'' ಎಂದು ಹೇಳಿದರು.

ಪಾಲಿಕೆಯಲ್ಲಿ ಎಂಜಿನಿಯರ್​ಗಳು ಇರುವುದು ಯಾವುದಕ್ಕೆ- ಡಿಕೆಶಿ ಗರಂ: ''ರಸ್ತೆ ಮತ್ತಿತರ ಕಾಮಗಾರಿಗಳನ್ನು ಏಜೆನ್ಸಿಗಳ ಮೂಲಕವೇ ಮಾಡುವುದಾದರೆ ಪಾಲಿಕೆಯಲ್ಲಿ ಎಂಜಿನಿಯರ್​ಗಳು ಇರುವುದು ಯಾವುದಕ್ಕೆ. ನಿಮ್ಮ ಕೆಲಸವನ್ನು ಬೇರೆ ಯಾರೋ ಮಾಡುವುದಾದರೆ ನೀವು ಇರುವುದಾದರೂ ಏಕೆ'' ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ''ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೊರವಲಯದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಬಾರದು. ತ್ಯಾಜ್ಯ ವಿಲೇವಾರಿ ಮಾಡುವವರ ವಿರುದ್ಧ ದಂಡ ಮತ್ತಿತರ ಕಾನೂನು ಕ್ರಮ ಜರುಗಿಸಬೇಕು. ಒಣ ಮತ್ತು ಹಸಿ ಕಸ ವೈಜ್ಞಾನಿಕ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು. ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು'' ಎಂದು ತಾಕೀತು ಮಾಡಿದರು.

''ಅಕ್ರಮಗಳಿಗೆ ಆಸ್ಪದ ಇಲ್ಲದಂತೆ ಟಿಡಿಆರ್ ಯೋಜನೆ ಜಾರಿಗೆ ತರಬೇಕು. ರಸ್ತೆ ಮತ್ತಿತರ ಯೋಜನೆಗಳಿಗೆ ಆಸ್ತಿ ಕಳೆದುಕೊಂಡವರ ಹಿತ ಕಾಯಬೇಕು. ಯಾವುದೇ ಯೋಜನೆ ಕಾಮಗಾರಿ ಆರಂಭಕ್ಕೆ ಮುನ್ನ ಆ ಜಾಗದ ವಿಡಿಯೋ, ಫೋಟೋ ತೆಗೆಯಬೇಕು. ನಿಜವಾಗಿಯೂ ಜನರ ಉಪಯೋಗಕ್ಕೆ ಆ ಯೋಜನೆ ಬರುತ್ತಿದೆಯೇ ಅಥವಾ ಇನ್ಯಾರಾದರೂ ಪ್ರಭಾವಿಗಳ ಅನುಕೂಲಕ್ಕೆ ಆ ಯೋಜನೆ ಆಗುತ್ತಿದೆಯೋ ಎಂಬ ಮಾಹಿತಿ ಸಾರ್ವಜನಿಕರಿಗೆ ಸಿಗುವಂತಾಗಬೇಕು'' ಎಂದು ಸಲಹೆ ನೀಡಿದರು.

Deputy Chief Minister DK Shivakumar
ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.

''ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿಯಲು ತಡೆಯಾಗಿರುವ ಬಾಟಲ್ ನೆಕ್ ಸ್ಥಳಗಳನ್ನು ಗುರುತಿಸಿ ಸರಿಪಡಿಸಿ. ಮಳೆ ನೀರು ಸಮಸ್ಯೆಯಿಂದ ನಮಗೆ ಮತ್ತು ನಿಮಗಿಂತ ಹೆಚ್ಚಾಗಿ ಬೆಂಗಳೂರಿಗೇ ಕೆಟ್ಟ ಹೆಸರು ಬರುತ್ತಿದೆ. ಇದನ್ನು ನಿವಾರಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದು'' ಎಂದ ಅವರು, ಬಿಬಿಎಂಪಿ ಸಮುದ್ರ ಇದ್ದಂತೆ. ಎಲ್ಲಿ ತೆಲುತ್ತೇವೆಯೋ, ಎಲ್ಲಿ ಮುಳುಗುತ್ತೇವೆಯೋ ಗೊತ್ತಿಲ್ಲ. ರಾಜಕಾರಣಿಗಳು, ಅಧಿಕಾರಿಗಳು ಸೇರಿ ಏನೆಲ್ಲಾ ಮಾಡುತ್ತಾರೆ ಎಂಬುದು ಗೊತ್ತಿದೆ. ಬೆಂಗಳೂರು ಬರೀ ಕರ್ನಾಟಕ್ಕದ್ದಲ್ಲ, ಇಡೀ ದೇಶದ ಆಸ್ತಿ'' ಎಂದು ಡಿ ಕೆ ಶಿವಕುಮಾರ್​ ಹೇಳಿದರು.

ಎಲ್ಲರೂ ಕೆಟ್ಟವರು ಎಂದು ಹೇಳಲ್ಲ: ''ನಮ್ಮ ಚುನಾವಣೆ ಹೋರಾಟವೇ ಭ್ರಷ್ಟಾಚಾರ ವಿರುದ್ಧವಾಗಿದೆ. ಎಲ್ಲರೂ ಕೆಟ್ಟವರು ಎಂದು ಹೇಳಲ್ಲ. ಒಳ್ಳೆಯವರೂ ಇದ್ದಾರೆ. ಆ ಮಂತ್ರಿಗೆ, ಈ ಮಂತ್ರಿಗೆ, ಶಾಸಕರಿಗೆ, ಅವರಿಗೆ ಇವರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ. ನಾನೊಬ್ಬನೇ ಏನೋ ಮಾಡುತ್ತೇನೆ ಎಂಬ ಭ್ರಮೆ ಇಲ್ಲ. ನಾವು ನೀವು ಸೇರಿ ಕೆಲಸ ಮಾಡೋಣ'' ಎಂದು ಸಲಹೆ ನೀಡಿದರು.

ನಿಮ್ಮ ಹಾಗೂ ಸರಕಾರದ ಗೌರವ ಉಳಿಸಿ-ಡಿಕೆಶಿ: ''ಸಮಯದ ಮಿತಿ ಇಲ್ಲದೇ ದುಡಿಯಿರಿ. ಬದ್ಧತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ. ಆಡಳಿತಕ್ಕೆ ಚುರುಕು ಮುಟ್ಟಿಸಲು ಒಂದಷ್ಟು ಬದಲಾವಣೆ ಮಾಡುತ್ತೇವೆ. ಕ್ರಮ ಕೈಗೊಳ್ಳುವುದು ದೊಡ್ಡ ಕೆಲಸ ಅಲ್ಲ. ಅದಕ್ಕೆ ಆಸ್ಪದ ಕೊಡಬೇಡಿ. ಒಳ್ಳೆಯ ಕೆಲಸ ಮಾಡಿ. ಒಳ್ಳೆಯ ಹೆಸರು ಪಡೆಯಿರಿ. ಸರಕಾರಕ್ಕೆ ಒಳ್ಳೆಯ ಹೆಸರು ತನ್ನಿ'' ಎಂದು ಅವರು, ''ಹಿಂದಿನ ಸರಕಾರದ ಅವಧಿಯಲ್ಲಿ ಯಾರ್ಯಾರಿಗೋ ಬೂತ್ ಲೆವೆಲ್ ಆಫೀಸರ್ ಎಂದು ಲೆಟರ್ ಕೊಡಲಾಗಿದೆ. ಯಾರ್ಯಾರು ಏನೇನೂ ಮಾಡಿದರು, ಎಷ್ಟೆಷ್ಟು ಭ್ರಷ್ಟಾಚಾರ ಮಾಡಿದರು ಎಂದು ಗೊತ್ತಿದೆ. ಈಗ ಬದಲಾವಣೆ ಮಾಡಿಕೊಳ್ಳಿ. ಈ ಸರಕಾರ ಬದಲಾವಣೆ ತಂದಿದೆ ಎಂದು ಜನರಿಗೆ ಮನವರಿಕೆ ಆಗುವಷ್ಟರ ಮಟ್ಟಿಗೆ ಉತ್ತಮವಾಗಿ ಕೆಲಸ ಮಾಡಿ. ನಿಮ್ಮ ಹಾಗೂ ಸರಕಾರದ ಗೌರವ ಉಳಿಸಿ ಎಂದು ಗುಡುಗಿದರು.

ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತಿತರ ಐಎಎಸ್ ಅಧಿಕಾರಿಗಳು, ವಿವಿಧ ವಿಭಾಗಗಳ ಮುಖ್ಯ ಎಂಜಿನಿಯರ್​ಗಳು ಸಭೆಯಲ್ಲಿ ಇದ್ದರು.

ಇದನ್ನೂ ಓದಿ: ಸಚಿವೆಯಾಗಿ ದಾಖಲೆ ಸೃಷ್ಟಿಸಿದ ಲಕ್ಷ್ಮೀ ಹೆಬ್ಬಾಳ್ಕರ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.