ETV Bharat / state

ಉಪನೋಂದಣೆ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ: ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಸೇವೆ ಲಭ್ಯ

Sub registration office timing: ಸೆ.23ರಿಂದ 30ರವರೆಗೆ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ವಿಸ್ತರಿಸಲಾಗಿದೆ.

ಉಪನೋಂದಣಿ ಕಚೇರಿ ಅವಧಿ ವಿಸ್ತಿರಣೆ
ಉಪನೋಂದಣಿ ಕಚೇರಿ ಅವಧಿ ವಿಸ್ತಿರಣೆ
author img

By ETV Bharat Karnataka Team

Published : Sep 23, 2023, 7:18 AM IST

Updated : Sep 23, 2023, 7:33 AM IST

ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ. ಈ ಹಿನ್ನೆಲೆ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಸೆಪ್ಟೆಂಬರ್ 23 ನಾಲ್ಕನೇ ಶನಿವಾರವದಂದೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಎಚ್ಎಸ್ಆರ್​ಪಿ ನಂಬರ್ ಪ್ಲೇಟ್​ ಕಡ್ಡಾಯ ಅಳವಡಿಕೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

Last Updated : Sep 23, 2023, 7:33 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.