ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಗುಣ ಅಲಿಯಾಸ್ ಕೊರಂಗು ಮತ್ತು ಸೂರ್ಯ ಅಲಿಯಾಸ್ ಸೈಕೋ ಸೂರಿ ಬಂಧಿತ ಆರೋಪಿಗಳು. ಬಂಧಿತರಿಂದ 22 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಸುದ್ದಗುಂಟೆಪಾಳ್ಯ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ನಗರದ ಹತ್ತಕ್ಕೂ ಹೆಚ್ಚು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಓದಿ: ಭಿಕ್ಷುಕಿ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ನಾಲ್ವರು ಕಾಮುಕರು ಅರೆಸ್ಟ್, ಮತ್ತೊಬ್ಬ ಎಸ್ಕೇಪ್
ಸಿಲಿಕಾನ್ ಸಿಟಿಗೆ ಕೇಂದ್ರ ಗೃಹ ಸಚಿವರು ಭೇಟಿ ನೀಡಿದ್ದ ದಿನ ಬಹುತೇಕ ಪೊಲೀಸರೂ ಭದ್ರತೆಗೆ ನಿಯೋಜನೆಯಾಗಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು ಖದೀಮರು ಸುದ್ದಗುಂಟೆ ಪಾಳ್ಯದ ವ್ಯಾಪ್ತಿಯ ಮನೆಗಳಿಗೆ ನುಗ್ಗಿ ಚಿನ್ನಾಭರಣ ದೋಚಿದ್ದಾರೆ. ಬಸವೇಶ್ವರನಗರ ,ಜಯನಗರ, ಬೇಗೂರು ಸೇರಿ ಹಲವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೈಚಳಕ ತೋರಿದ್ದಾರೆ ಎಂದು ತಿಳಿದು ಬಂದಿದೆ.