ETV Bharat / state

ಕಾಂಗ್ರೆಸ್​ ಸೇರಿದ ಗೀತಾ ಶಿವರಾಜ್​ಕುಮಾರ್​ಗೆ​ ಶುಭ ಹಾರೈಸಿದ ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್

ಇಂದು ಗೀತಾ ಶಿವರಾಜ್​ಕುಮಾರ್ ಅಧಿಕೃತವಾಗಿ ಕಾಂಗ್ರೆಸ್​ ಸೇರಿದ್ದಾರೆ. ಈ ಬಗ್ಗೆ ನಟ ಸುದೀಪ್​ ಅಭಿಪ್ರಾಯ ಹಂಚಿಕೊಂಡಿದ್ದಾರೆ.

sudeep on geetha shivarajkumar
ಗೀತಾ ಶಿವರಾಜ್​ಕುಮಾರ್ ಬಗ್ಗೆ ಸುದೀಪ್ ಹೇಳಿಕೆ
author img

By

Published : Apr 28, 2023, 7:48 PM IST

ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಪತ್ನಿ ಗೀತಾ ಶಿವ ರಾಜ್​ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಹಾಗೂ ಸಹೋದರ ಮಧು ಬಂಗಾರಪ್ಪ ಸಮ್ಮುಖದಲ್ಲಿ ಗೀತಾ ಶಿವ ರಾಜ್​ಕುಮಾರ್ ಕಾಂಗ್ರೆಸ್ ಸೇರಿದರು. ಈ ಹಿನ್ನೆಲೆ, ನಟ ರಾಘವೇಂದ್ರ ರಾಜ್​ಕುಮಾರ್ ಹಾಗೂ ಬಿಜೆಪಿ ಪರ ಪ್ರಚಾರಕ್ಕಿಳಿದಿರುವ ನಟ ಸುದೀಪ್ ಅವರು ಗೀತಾ ಅವರ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಬಗ್ಗೆ ಯಾವುದೇ ಮಾತನ್ನಾಡದೇ, ಶಿವ ರಾಜ್​ಕುಮಾರ್ ನನ್ನ ಸಹೋದರ, ಅವರ ಪತ್ನಿ ಗೀತಾ ನಮ್ಮ ಅತ್ತಿಗೆ ಅಂತಾ ಹೇಳುವ ಮೂಲಕ ನಾವು ತಂದೆಯಂತೆ ರಾಜಕೀಯ ಬಗ್ಗೆ ಅಷ್ಟೊಂದು ಆಸಕ್ತಿ ಹೊಂದಿಲ್ಲ ಎಂಬುದನ್ನ ಪರೋಕ್ಷವಾಗಿ ನಟ ರಾಘವೇಂದ್ರ ರಾಜ್​ಕುಮಾರ್ ಹೇಳಿದರು. ನಟ ಸುದೀಪ್ ಗೀತಾ ಶಿವರಾಜ್​​ಕುಮಾರ್ ಅವರಿಗೆ ಶುಭ ಹಾರೈಸಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಸುದೀಪ್ ಅವರು, ಗೀತಾ ಅಕ್ಕನಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

ಪತ್ನಿ ಗೀತಾ ಬಗ್ಗೆ ಮಾತನಾಡಿರೋ ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್, ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತ್ತಿದ್ದೇನೆ. ಸೊರಬದಲ್ಲಿ ಮಧು ಬಂಗಾರಪ್ಪ ಹಾಗೂ ಅವರ ಮಾವ ಭೀಮ ನಾಯಕ್ ಶಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಶಿವಣ್ಣ, ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೋದು ಬೇಡ. ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತಾ. ಮಕ್ಕಳ ಸ್ಕಿಲ್ ಡೆವಲಪ್​ಮೆಂಟ್​ಗೆ ಒತ್ತು ಕೊಡುತ್ತಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ ಎಂದು ಹೇಳಿದರು.

ಇದನ್ನೂ ಓದಿ: ಗೀತಾ ಕಾಂಗ್ರೆಸ್ ಸೇರ್ಪಡೆ: ಶಿವರಾಜ್​ಕುಮಾರ್ ಕೂಡ ಪ್ರಚಾರಕ್ಕೆ ಬರುತ್ತಾರೆ - ಗೀತಾ ಶಿವರಾಜ್​ಕುಮಾರ್

ಗೀತಾ ಶಿವ ರಾಜ್​ಕುಮಾರ್ ಅವರ ಕಿರಿಯ ಸಹೋದರ ಮಧು ಬಂಗಾರಪ್ಪ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ ಅವರ ವಿರುದ್ಧವೇ ಸೊರಬ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸಲು ಗೀತಾ ಮುಂದಾಗಿದ್ದಾರೆ.

ಇದನ್ನೂ ಓದಿ: 'ಉರುಳೋ ಕಾಲವೇ' ಅಂತಿದ್ದಾರೆ 'ಮತ್ತೆ ಮದುವೆ'ಯಾದ ಪವಿತ್ರಾ ಲೋಕೇಶ್ - ನರೇಶ್

ಪ್ರತಿ ಬಾರಿಯೂ ಮಧು ಬಂಗಾರಪ್ಪನವರನ್ನು ಬೆಂಬಲಿಸುತ್ತಾ ಬಂದಿದ್ದಾರೆ ಗೀತಾ ಶಿವ ರಾಜ್​ಕುಮಾರ್. ಒಂದು ಬಾರಿ ಚುನಾವಣೆಗೂ ಸ್ಪರ್ಧಿಸಿ ಸೋತಿದ್ದಾರೆ. ಈ ಬಾರಿ ಸಹೋದರನನ್ನು ಗೆಲ್ಲಿಸಲೇಬೇಕು ಎನ್ನುವ ಕಾರಣದಿಂದಾಗಿ ಕಾಂಗ್ರೆಸ್​ಗೆ ಸೇರ್ಪಡೆ ಆಗಿದ್ದಾರೆ.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ್ದ ಗೀತಾ ಶಿವರಾಜ್​ಕುಮಾರ್, ನನ್ನ ತಮ್ಮನಿಗೆ ನನ್ನ ಬೆಂಬಲ ಸದಾ ಇರುತ್ತೆ. ನಾಳೆಯಿಂದಲೇ ಪ್ರಚಾರ ಪ್ರಾರಂಭ. ಶೂಟಿಂಗ್​ನಿಂದ ಬಿಡುವು ಮಾಡಿಕೊಂಡು ಶಿವ ರಾಜ್​ಕುಮಾರ್ ಕೂಡ ಪ್ರಚಾರ ಮಾಡ್ತಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.