ಬೆಂಗಳೂರು: ಇಂದಿನಿಂದ ಮೂರನೇ ಹಂತದ ವ್ಯಾಕ್ಸಿನ್ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡರು.
ಇಂದು ಬೆಳಗ್ಗೆ ಆಸ್ಪತ್ರೆಗೆ ತೆರಳಿ ವ್ಯಾಕ್ಸಿನ್ ಪಡೆದರು. ನಾರಾಯಣ ಹೆಲ್ತ್ ಸಿಟಿ ಸಂಸ್ಥಾಪಕ ಡಾ. ದೇವಿ ಶೆಟ್ಟಿ ಕೂಡ ಸಾಥ್ ನೀಡಿದರು.
ಓದಿ:ಒಂದು ತಿಂಗಳವರೆಗೆ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ..!
ಕೋವಿಡ್ ವ್ಯಾಕ್ಸಿನ್ ಪಡೆಯುವ ಮೂಲಕ ವ್ಯಾಕ್ಸಿನ್ ಅಭಿಯಾನಕ್ಕೆ ನಾರಾಯಣಮೂರ್ತಿ ದಂಪತಿ ಬಲ ತುಂಬಿದ್ದು, ಹಿರಿಯ ನಾಗರಿಕರಿಗೆ ಮಾದರಿಯಾಗಿದ್ದಾರೆ.