ETV Bharat / state

ಸೌಭಾಗ್ಯ ಲಕ್ಷ್ಮಿ ಶುಗರ್ ಕಾರ್ಖಾನೆಯನ್ನು ಕೇಂದ್ರ ಮುಟ್ಟುಗೋಲು ಹಾಕ್ಬೇಕಿತ್ತು: ಲಕ್ಷ್ಮಣ್

author img

By

Published : Oct 20, 2022, 6:07 PM IST

ರಮೇಶ್​ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮೀ ಶುಗರ್​ ಕಾರ್ಖಾನೆಯು 9 ಸಹಕಾರಿ ಬ್ಯಾಂಕ್​ಗಳಲ್ಲಿ 578 ಕೋಟಿ ಸಾಲ ಮಾಡಿದ್ದು, ಈ ಸಾಲವನ್ನು ಮರುಪಾವತಿ ಮಾಡಿಲ್ಲ. ಕೇಂದ್ರ ಸರಕಾರ ಈ ಸಂಸ್ಥೆಯನ್ನು ಮುಟ್ಟುಗೋಲು ಹಾಕಬೇಕಿತ್ತು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.

sugar-factory-should-have-been-confiscated-by-the-central-government
ಸೌಭಾಗ್ಯ ಲಕ್ಷ್ಮಿ ಶುಗರ್ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತು: ಲಕ್ಷ್ಮಣ್

ಬೆಂಗಳೂರು : ರಮೇಶ್ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮಿ ಶುಗರ್ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ವಕ್ತಾರ ರಮೇಶ್ ಬಾಬು ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯು 9 ಸಹಕಾರಿ ಬ್ಯಾಂಕ್‌ಗಳಲ್ಲಿ 578 ಕೋಟಿ ರೂ ಸಾಲ ಮಾಡಿದ್ದು, ಈ ಸಾಲ ಮರು ಪಾವತಿ ಮಾಡಿಲ್ಲ. ಆದ್ದರಿಂದ ಅಪೆಕ್ಸ್ ಬ್ಯಾಂಕ್ ಈ ಕಾರ್ಖಾನೆಯನ್ನು NPA (ದಿವಾಳಿ ಸಂಸ್ಥೆ) ಎಂದು ಘೋಷಣೆ ಮಾಡುತ್ತದೆ. ನಂತರ ಈ ದಿವಾಳಿ ಕಂಪನಿ 2021-22 ಹಾಗೂ 2022-23ನೇ ಸಾಲಿನಲ್ಲಿ ವಾರ್ಷಿಕವಾಗಿ ಕ್ರಮವಾಗಿ 60 ಕೋಟಿ ರೂ ಹಾಗೂ 72 ಕೋಟಿ ಕೋಟಿ ರೂ ಲಾಭ ಮಾಡಿದೆ ಎಂದು ಹೇಳಿದರು.

ಸೌಭಾಗ್ಯ ಲಕ್ಷ್ಮಿ ಶುಗರ್ ಕಾರ್ಖಾನೆಯಲ್ಲಿ ಹಗರಣ: ಈ ಸಂಸ್ಥೆಗೆ 9 ಜನ ನಿರ್ದೇಶಕರಿದ್ದರೂ ಇವರನ್ನು ಉದ್ದೇಶಿತ ಸುಸ್ಥಿದಾರರು ಎಂದು ಅಪೆಕ್ಸ್ ಬ್ಯಾಂಕ್ ಘೋಷಿಸಿದೆ. ಈ ರೀತಿ ಉದ್ದೇಶಿತ ಸುಸ್ಥಿದಾರ ಎಂದು ಘೋಷಿಸಿದ ನಂತರ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಆದರೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರ ಕೃಪಾಕಟಾಕ್ಷದಿಂದ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿಲ್ಲ. ಅಮಿತ್ ಶಾ ಅವರು ನನಗೆ ಆತ್ಮೀಯರು, ಅವರ ಕೃಪಾಕಟಾಕ್ಷ ನನ್ನ ಮೇಲಿದೆ ಎಂದು ರಮೇಶ್ ಜಾರಕಿಹೊಳಿ ಅವರೇ ತಿಳಿಸಿದ್ದಾರೆ ಎಂದರು.

ರಾಜ್ಯ ಸಹಕಾರ ಸಚಿವ ಸೋಮಶೇಖರ್ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಬಸವರಾಜ ಬೊಮ್ಮಾಯಿ ಅವರು 860 ಕೋಟಿ ರೂ ಮೌಲ್ಯದ ಬಹುದೊಡ್ಡ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ : 'ನಾನು ಜೆಡಿಎಸ್ ಬಿಟ್ಟು ಹೋಗಲ್ಲ..': ದೇವೇಗೌಡರೆದುರು ಕಣ್ಣೀರು ಹಾಕಿದ ಜಿಟಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.