ETV Bharat / state

ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವದಂಪತಿ ಸೂಸೈಡ್

author img

By

Published : May 28, 2021, 9:46 PM IST

ಹರ್ಷಿತಾ ಶುಕ್ರವಾರ ಸಂಜೆ 4 ಗಂಟೆಗೆ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಕಂಡ ಪತಿ ಪುನೀತ್ ಸ್ಥಳೀಯರ ಸಹಾಯದಿಂದ ಹರ್ಷಿತಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದಾಗ ಅವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಪತಿ ಪುನೀತ್ ಮನೆಗೆ ವಾಪಸ್​ ಆಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೂಸೈಡ್
ಸೂಸೈಡ್

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 4 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾಗಡಿ ಚೆನ್ನೇನಹಳ್ಳಿ ಮೂಲದ ಹೇರೋಹಳ್ಳಿ ನಿವಾಸಿಗಳಾದ ಹರ್ಷಿತಾ ಹಾಗೂ ಪುನೀತ್ ಆತ್ಮಹತ್ಯೆಗೆ ಶರಣಾದವರು. ಕಳೆದ 4 ತಿಂಗಳ ಹಿಂದೆ ಇಬ್ಬರೂ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಹರ್ಷಿತಾ ಶುಕ್ರವಾರ ಸಂಜೆ 4 ಗಂಟೆಗೆ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಕಂಡ ಪತಿ ಪುನೀತ್ ಸ್ಥಳೀಯರ ಸಹಾಯದಿಂದ ಹರ್ಷಿತಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದಾಗ ಅವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಪತಿ ಪುನೀತ್ ಮನೆಗೆ ವಾಪಸ್​ ಆಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್‌ನೋಟ್‌ನಲ್ಲೇನಿದೆ ?
ಬ್ಯಾಡರಹಳ್ಳಿ ಪೊಲೀಸರು ದಂಪತಿ ಮನೆಗೆ ತೆರಳಿ ಪರಿಶೀಲಿಸಿದಾಗ ಹರ್ಷಿತಾ ಬರೆದ ಡೆತ್‌ನೋಟ್ ಪತ್ತೆಯಾಗಿದೆ. ಕಳೆದ 6 ವರ್ಷಗಳಿಂದ ನಾವು ಪ್ರೀತಿಸುತ್ತಿದ್ದೆವು. ನಮ್ಮ ಮದುವೆಯನ್ನು ಪಾಲಕರು ಇಷ್ಟ ಪಟ್ಟಿರಲಿಲ್ಲ. ಅವರಿಂದ ನಮಗೆ ಸಮಸ್ಯೆಯಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದು ಕಂಡು ಬಂದಿದೆ. ಈ ಹಿನ್ನೆಲೆ ಹರ್ಷಿತಾ ಹಾಗೂ ಪುನೀತ್ ಪಾಲಕರನ್ನು ಠಾಣೆಗೆ ಕರೆಸಿರುವ ಪೊಲೀಸರು ಅವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ.ಪಾಟೀಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.