ETV Bharat / state

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾದ ಸುಮಲತಾ: ಹೆಚ್ಚಿದ ಕುತೂಹಲ - ಸುಮಲತಾ

ಬಿಜೆಪಿ ಸೇರುವ ಊಹಾಪೋಹದ ಮಧ್ಯೆ ಸುಮಲತಾ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸುಮಲತಾ
ಸುಮಲತಾ
author img

By

Published : Mar 9, 2023, 11:04 PM IST

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದರು. ಸುಮಲತಾ ಬಿಜೆಪಿ ಸೇರ್ಪಡೆ ಕುರಿತ ಊಹಾಪೋಹಕ್ಕೆ ಈ ಭೇಟಿ ಮತ್ತಷ್ಟು ಪುಷ್ಟಿ ನೀಡಿದೆ. ನಾಳೆ ಸುದ್ದಿಗೋಷ್ಠಿ ನಡೆಸಲಿರುವ ಸುಮಲತಾ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಂಸತ್ತಿನಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಲೇ ಬಂದಿರುವ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಅದರ ನಡುವೆ ಇಂದು ನಗರದ ಶಾಂಗ್ರಿಲಾ ಹೋಟೆಲ್​​ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿ ಮಾಡಿದ್ದಾರೆ. ಅಂಬರೀಶ್ ಕುಟುಂಬಕ್ಕೆ ಅತ್ಯಾಪ್ತರಾಗಿರುವ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೊತೆ ಶಾಂಗ್ರಿಲಾ ಹೋಟೆಲ್​​ಗೆ ಆಗಮಿಸಿದ ಸುಮಲತಾ, ಜೆಪಿ ನಡ್ಡಾ ಜೊತೆ ರಾಜಕೀಯ ವಿಚಾರಗಳ ಕುರಿತು ಮಹತ್ವದ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.

ಹಳೆ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ಹೈಕಮಾಂಡ್ ಆಪರೇಷನ್ ಕಮಲಕ್ಕೆ ಅನುಮತಿ ನೀಡಿತ್ತು. ಅದರಂತೆ ಈಗಾಗಲೇ ಸುಮಲತಾ ಆಪ್ತರನ್ನು ಪಕ್ಷಕ್ಕೆ ಸೆಳೆಯುವಲ್ಲಿ ರಾಜ್ಯ ನಾಯಕರು ಸಫಲರಾಗಿದ್ದು, ಇದೀಗ ಸಂಸದರನ್ನು ಕರೆತರುವ ಭಾಗಿಯಾಗಿಯೇ ಇಂದು ಜೆಪಿ ನಡ್ಡಾ ಜೊತೆ ಸಮಲತಾ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಪುತ್ರನನ್ನು ರಾಜಕೀಯಕ್ಕೆ ಕರೆತರಬೇಕು ಎನ್ನುವುದು ಸುಮಲತಾ ಅಪೇಕ್ಷೆಯಾಗಿದ್ದು, ಅದಕ್ಕೆ ಪೂರಕವಾಗಿ ಬಿಜೆಪಿ ಜೊತೆ ಮಾತುಕತೆ ನಡೆದಿರಬಹುದು ಎಂದು ಮೂಲಗಳು ತಿಳಿಸಿವೆ. ಇಂದಿನ ಮಾತುಕತೆ ಏನೇ ನಡೆದಿದ್ದರೂ ಸಂಸದೆ ಸುಮಲತಾ ಅವರ ಮುಂದಿನ ರಾಜಕೀಯ ನಿರ್ಧಾರ ಮಾತ್ರ ಸದ್ಯಕ್ಕೆ ಇನ್ನೂ ಸಸ್ಪೆನ್ಸ್​ನಲ್ಲೇ ಇದೆ. ನಾಳೆ ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಅವರು ತಮ್ಮ ಮುಂದಿನ ರಾಜಕೀಯ ನಡೆ ಕುರಿತ ನಿರ್ಧಾರವನ್ನು ರಿವೀಲ್ ಮಾಡಲಿದ್ದಾರೆ. ಚುನಾವಣೆಯಲ್ಲಿ ಅಭ್ಯರ್ಥಿ ನಿಲ್ಲಿಸದೆ ಬಹಿರಂಗವಾಗಿ ಬೆಂಬಲ ನೀಡಿದ್ದ ಬಿಜೆಪಿಯನ್ನು ಸೇರುತ್ತಾರಾ ಎನ್ನುವ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

ಇತ್ತೀಚೆಗಷ್ಟೇ ಮಾಜಿ ಸಿಎಂ ಜೊತೆ ಮಾತುಕತೆ: ಸುಮಲತಾ ಅವರು ಇತ್ತೀಚೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಇದು ಹಲವು ಕುತೂಹಲಗಳಿಗೆ ಕಾರಣವಾಗಿತ್ತು. ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಮನೆಗೆ ತೆರಳಿ ಸುಮಲತಾ ತುಸು ಹೊತ್ತು ಚರ್ಚೆ ನಡೆಸಿದ್ದರು. ಸುಮಲತಾ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಬಿಜೆಪಿಯಲ್ಲಿದ್ದ ಎಸ್.ಎಂ.ಕೃಷ್ಣರ ಭೇಟಿ ಕುತೂಹಲಕ್ಕೆ ಕಾರಣವಾಗಿತ್ತು.

ಭೇಟಿ ಬಳಿಕ ಮಾತನಾಡಿದ್ದ ಸಂಸದೆ, ಎಸ್.ಎಂ.ಕೃಷ್ಣ ಅವರು ನಮ್ಮ ಜಿಲ್ಲೆಯ ಹಿರಿಯ ನಾಯಕರು, ಟಾಲೆಸ್ಟ್ ಲೀಡರ್​. ಅವರಿಗೆ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಬಂದಿದೆ. ನಾನು ಅವರನ್ನು ಭೇಟಿ ಮಾಡಿರಲಿಲ್ಲ. ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಯಾವುದೇ ರಾಜಕೀಯ ವಿಚಾರ ಮಾತನಾಡಿಲ್ಲ ಎಂದು ತಿಳಿಸಿದ್ದರು.

ಇದನ್ನೂ ಓದಿ: ಸಂಸದೆ ಸುಮಲತಾ ಬಿಜೆಪಿ ಸೇರುವ ಮಾತುಕತೆ ನಡೆದಿದೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.