ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸುಮಾರು 1,17,345 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 2,740 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,46,887ಕ್ಕೆ ಏರಿಕೆ ಆಗಿದೆ.
ಸೋಂಕಿನಿಂದ 2,360ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 8,01,799 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗೇ ಕೊರೊನಾಗೆ 22 ಸೋಂಕಿತರು ಬಲಿಯಾಗಿದ್ದು, 11,391ಕ್ಕೆ ಸಾವಿನ ಸಂಖ್ಯೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತಪಟ್ಟಿದ್ದಾರೆ. ಸದ್ಯ ಒಟ್ಟಾರೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 33,678 ಇದ್ದು, 884 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 762 ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಪಟ್ಟಿದ್ದಾರೆ.
ಕಳೆದ 14 ದಿನಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 2,27,784 ಮಂದಿ ಹಾಗೂ ದ್ವಿತೀಯ ಸಂಪರ್ಕದಲ್ಲಿ 2,36,130 ಇದ್ದಾರೆ. ಹಾಗೇ 7 ದಿನಗಳಲ್ಲಿ 46,483 ಜನರು ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ 1,579 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ 3,49,327ಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. ಭಾನುವಾರದಂದು 1,165 ಗುಣಮುಖರಾಗಿದ್ದು, ಈವರೆಗೆ 3,26,989 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ನಗರದಲ್ಲಿ 18,381 ಸಕ್ರಿಯ ಪ್ರಕರಣಗಳಿವೆ.
ನಿನ್ನೆ 11 ಸೋಂಕಿತರು ಚಿಕಿತ್ಸೆ ಫಲಿಸದೇ ಮೃತರಾಗಿದ್ದು, ರಾಜ್ಯದ ರಾಜಧಾನಿಯಲ್ಲಿ ಸಾವಿನ ಸಂಖ್ಯೆ 3,956ಕ್ಕೆ ಏರಿದೆ.
ತಾಂತ್ರಿಕ ಕಾರಣ...
ಪ್ರತಿ ರಾತ್ರಿ 8 ಗಂಟೆಗೆ ಬರುತ್ತಿದ್ದ ಕೋವಿಡ್ ಹೆಲ್ತ್ ಬುಲೆಟಿನ್ ಭಾನುವಾರ ತಾಂತ್ರಿಕ ಕಾರಣದಿಂದಾಗಿ ಮಧ್ಯರಾತ್ರಿಯಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿತು.